< ಆದಿಕಾಂಡ 19 >

1 ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ, ಲೋಟನು ಸೊದೋಮಿನ ಬಾಗಿಲಲ್ಲಿ ಕುಳಿತಿದ್ದನು. ಲೋಟನು ಅವರನ್ನು ಎದುರುಗೊಳ್ಳುವುದಕ್ಕೆ ಎದ್ದು ನೆಲದವರೆಗೆ ಬಾಗಿ,
साँझ को वे दो दूत सदोम के पास आए; और लूत सदोम के फाटक के पास बैठा था। उनको देखकर वह उनसे भेंट करने के लिये उठा; और मुँह के बल झुककर दण्डवत् कर कहा;
2 “ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.
“हे मेरे प्रभुओं, अपने दास के घर में पधारिए, और रात भर विश्राम कीजिए, और अपने पाँव धोइये, फिर भोर को उठकर अपने मार्ग पर जाइए।” उन्होंने कहा, “नहीं; हम चौक ही में रात बिताएँगे।”
3 ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.
और उसने उनसे बहुत विनती करके उन्हें मनाया; इसलिए वे उसके साथ चलकर उसके घर में आए; और उसने उनके लिये भोजन तैयार किया, और बिना ख़मीर की रोटियाँ बनाकर उनको खिलाई।
4 ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು.
उनके सो जाने के पहले, सदोम नगर के पुरुषों ने, जवानों से लेकर बूढ़ों तक, वरन् चारों ओर के सब लोगों ने आकर उस घर को घेर लिया;
5 ಅವರು ಲೋಟನನ್ನು ಕರೆದು, “ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಕರೆದುಕೊಂಡು ಬಾ, ಅವರೊಡನೆ ಸಂಭೋಗಿಸಬೇಕು,” ಎಂದು ಹೇಳಿದರು.
और लूत को पुकारकर कहने लगे, “जो पुरुष आज रात को तेरे पास आए हैं वे कहाँ हैं? उनको हमारे पास बाहर ले आ, कि हम उनसे भोग करें।”
6 ಆಗ ಲೋಟನು ಅವರ ಬಳಿಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು,
तब लूत उनके पास द्वार के बाहर गया, और किवाड़ को अपने पीछे बन्द करके कहा,
7 “ನನ್ನ ಸಹೋದರರೇ, ಈ ದುಷ್ಟತನವನ್ನು ಮಾಡಬೇಡಿರಿ.
“हे मेरे भाइयों, ऐसी बुराई न करो।
8 ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು.
सुनो, मेरी दो बेटियाँ हैं जिन्होंने अब तक पुरुष का मुँह नहीं देखा, इच्छा हो तो मैं उन्हें तुम्हारे पास बाहर ले आऊँ, और तुम को जैसा अच्छा लगे वैसा व्यवहार उनसे करो: पर इन पुरुषों से कुछ न करो; क्योंकि ये मेरी छत के तले आए हैं।”
9 ಆದರೆ ಅವರು, “ಹಿಂದಕ್ಕೆ ಸರಿ,” ಎಂದು ಹೇಳಿ, “ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿಯಾಗಲು ಯತ್ನಿಸುತ್ತಿದ್ದಾನೆ. ಈಗ ನಿನಗೆ ಅವರಿಗಿಂತ ಹೆಚ್ಚು ಕೇಡು ಮಾಡುತ್ತೇವೆ,” ಎಂದರು. ಅವರು ಲೋಟನನ್ನು ಬಲವಾಗಿ ತುಳಿದು, ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
उन्होंने कहा, “हट जा!” फिर वे कहने लगे, “तू एक परदेशी होकर यहाँ रहने के लिये आया पर अब न्यायी भी बन बैठा है; इसलिए अब हम उनसे भी अधिक तेरे साथ बुराई करेंगे।” और वे उस पुरुष लूत को बहुत दबाने लगे, और किवाड़ तोड़ने के लिये निकट आए।
10 ಆಗ ಲೋಟನ ಮನೆಗೆ ಬಂದಿದ್ದ ಆ ದೂತರಿಬ್ಬರು ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಒಳಕ್ಕೆ ಎಳೆದುಕೊಂಡು ಬಾಗಿಲನ್ನು ಮುಚ್ಚಿದರು.
१०तब उन अतिथियों ने हाथ बढ़ाकर लूत को अपने पास घर में खींच लिया, और किवाड़ को बन्द कर दिया।
11 ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.
११और उन्होंने क्या छोटे, क्या बड़े, सब पुरुषों को जो घर के द्वार पर थे अंधा कर दिया, अतः वे द्वार को टटोलते-टटोलते थक गए।
12 ಆ ದೂತರಿಬ್ಬರು ಲೋಟನಿಗೆ, “ಇಲ್ಲಿ ನಿನಗೆ ಇನ್ನೂ ಯಾರಾದರೂ ಇದ್ದಾರೋ? ನಿನ್ನ ಅಳಿಯಂದಿರನ್ನೂ, ನಿನ್ನ ಪುತ್ರರನ್ನೂ, ಪುತ್ರಿಯರನ್ನೂ, ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಈ ಸ್ಥಳದಿಂದ ಹೊರಗೆ ಕರೆದುಕೊಂಡು ಬಾ.
१२फिर उन अतिथियों ने लूत से पूछा, “यहाँ तेरा और कौन-कौन हैं? दामाद, बेटे, बेटियाँ, और नगर में तेरा जो कोई हो, उन सभी को लेकर इस स्थान से निकल जा।
13 ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”
१३क्योंकि हम यह स्थान नाश करने पर हैं, इसलिए कि इसकी चिल्लाहट यहोवा के सम्मुख बढ़ गई है; और यहोवा ने हमें इसका सत्यानाश करने के लिये भेज दिया है।”
14 ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.
१४तब लूत ने निकलकर अपने दामादों को, जिनके साथ उसकी बेटियों की सगाई हो गई थी, समझाकर कहा, “उठो, इस स्थान से निकल चलो; क्योंकि यहोवा इस नगर को नाश करने पर है।” उसके दामाद उसका मजाक उड़ाने लगे।
15 ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು.
१५जब पौ फटने लगी, तब दूतों ने लूत से जल्दी करने को कहा और बोले, “उठ, अपनी पत्नी और दोनों बेटियों को जो यहाँ हैं ले जा: नहीं तो तू भी इस नगर के अधर्म में भस्म हो जाएगा।”
16 ಅವರು ತಡಮಾಡಿದಾಗ ಯೆಹೋವ ದೇವರು ಅವನನ್ನು ಕನಿಕರಿಸಿದ್ದರಿಂದ, ಆ ದೂತರು ಅವನ ಕೈಯನ್ನೂ, ಅವನ ಹೆಂಡತಿಯ ಕೈಯನ್ನೂ, ಅವನ ಇಬ್ಬರು ಪುತ್ರಿಯರ ಕೈಗಳನ್ನೂ ಹಿಡಿದು, ಅವರನ್ನು ಪಟ್ಟಣದ ಹೊರಗೆ ತಂದುಬಿಟ್ಟರು.
१६पर वह विलम्ब करता रहा, इस पर उन पुरुषों ने उसका और उसकी पत्नी, और दोनों बेटियों के हाथ पकड़े; क्योंकि यहोवा की दया उस पर थी: और उसको निकालकर नगर के बाहर कर दिया।
17 ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.
१७और ऐसा हुआ कि जब उन्होंने उनको बाहर निकाला, तब उसने कहा, “अपना प्राण लेकर भाग जा; पीछे की ओर न ताकना, और तराई भर में न ठहरना; उस पहाड़ पर भाग जाना, नहीं तो तू भी भस्म हो जाएगा।”
18 ಅದಕ್ಕೆ ಲೋಟನು, “ಸ್ವಾಮಿ, ಅದು ನನ್ನಿಂದಾಗದು.
१८लूत ने उनसे कहा, “हे प्रभु, ऐसा न कर!
19 ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು.
१९देख, तेरे दास पर तेरी अनुग्रह की दृष्टि हुई है, और तूने इसमें बड़ी कृपा दिखाई, कि मेरे प्राण को बचाया है; पर मैं पहाड़ पर भाग नहीं सकता, कहीं ऐसा न हो, कि कोई विपत्ति मुझ पर आ पड़े, और मैं मर जाऊँ।
20 ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು.
२०देख, वह नगर ऐसा निकट है कि मैं वहाँ भाग सकता हूँ, और वह छोटा भी है। मुझे वहीं भाग जाने दे, क्या वह नगर छोटा नहीं है? और मेरा प्राण बच जाएगा।”
21 ದೂತನು ಅವನಿಗೆ, “ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ. ನೋಡು, ನೀನು ಹೇಳಿದ ಆ ಊರನ್ನು ನಾನು ಕೆಡವಿ ಹಾಕುವುದಿಲ್ಲ.
२१उसने उससे कहा, “देख, मैंने इस विषय में भी तेरी विनती स्वीकार की है, कि जिस नगर की चर्चा तूने की है, उसको मैं नाश न करूँगा।
22 ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
२२फुर्ती से वहाँ भाग जा; क्योंकि जब तक तू वहाँ न पहुँचे तब तक मैं कुछ न कर सकूँगा।” इसी कारण उस नगर का नाम सोअर पड़ा।
23 ಲೋಟನು ಚೋಗರಿಗೆ ಬಂದಾಗ ಸೂರ್ಯೋದಯವಾಗಿತ್ತು.
२३लूत के सोअर के निकट पहुँचते ही सूर्य पृथ्वी पर उदय हुआ।
24 ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.
२४तब यहोवा ने अपनी ओर से सदोम और गमोरा पर आकाश से गन्धक और आग बरसाई;
25 ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.
२५और उन नगरों को और सम्पूर्ण तराई को, और नगरों के सब निवासियों को, भूमि की सारी उपज समेत नाश कर दिया।
26 ಆದರೆ ಲೋಟನ ಹಿಂದೆ ಬರುತ್ತಿದ್ದ ಅವನ ಹೆಂಡತಿಯು ಹಿಂದಿರುಗಿ ನೋಡಿ ಉಪ್ಪಿನ ಸ್ತಂಭವಾದಳು.
२६लूत की पत्नी ने जो उसके पीछे थी पीछे मुड़कर देखा, और वह नमक का खम्भा बन गई।
27 ಅಬ್ರಹಾಮನು ಬೆಳಿಗ್ಗೆ ಎದ್ದು, ತಾನು ಯೆಹೋವ ದೇವರ ಸನ್ನಿಧಿಯಲ್ಲಿ ನಿಂತಿದ್ದ ಆ ಸ್ಥಳಕ್ಕೆ ಹೋದನು.
२७भोर को अब्राहम उठकर उस स्थान को गया, जहाँ वह यहोवा के सम्मुख खड़ा था;
28 ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.
२८और सदोम, और गमोरा, और उस तराई के सारे देश की ओर आँख उठाकर क्या देखा कि उस देश में से धधकती हुई भट्ठी का सा धुआँ उठ रहा है।
29 ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.
२९और ऐसा हुआ कि जब परमेश्वर ने उस तराई के नगरों को, जिनमें लूत रहता था, उलट-पुलट कर नाश किया, तब उसने अब्राहम को याद करके लूत को उस घटना से बचा लिया।
30 ಲೋಟನು ಚೋಗರಿನಲ್ಲಿ ವಾಸಿಸಲು ಭಯಪಟ್ಟು, ತನ್ನ ಇಬ್ಬರು ಪುತ್ರಿಯರ ಸಂಗಡ ಬೆಟ್ಟದ ಮೇಲೆ ಹೋಗಿ ವಾಸಮಾಡಿದನು. ಅಲ್ಲಿ ಅವನೂ ಅವನ ಇಬ್ಬರು ಪುತ್ರಿಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
३०लूत ने सोअर को छोड़ दिया, और पहाड़ पर अपनी दोनों बेटियों समेत रहने लगा; क्योंकि वह सोअर में रहने से डरता था; इसलिए वह और उसकी दोनों बेटियाँ वहाँ एक गुफा में रहने लगे।
31 ಆಗ ಹಿರಿಯ ಮಗಳು ಚಿಕ್ಕವಳಿಗೆ, “ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮೊಂದಿಗಿರಲು ನಮ್ಮ ಸುತ್ತಲಿನ ಪ್ರದೇಶದಲ್ಲಿ ಪುರುಷರಿಲ್ಲ.
३१तब बड़ी बेटी ने छोटी से कहा, “हमारा पिता बूढ़ा है, और पृथ्वी भर में कोई ऐसा पुरुष नहीं जो संसार की रीति के अनुसार हमारे पास आए।
32 ಆದ್ದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ನಾವು ಅವನ ಸಂಗಡ ಮಲಗಿಕೊಳ್ಳೋಣ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.
३२इसलिए आ, हम अपने पिता को दाखमधु पिलाकर, उसके साथ सोएँ, जिससे कि हम अपने पिता के वंश को बचाए रखें।”
33 ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಹಿರಿಯ ಮಗಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.
३३अतः उन्होंने उसी दिन-रात के समय अपने पिता को दाखमधु पिलाया, तब बड़ी बेटी जाकर अपने पिता के पास लेट गई; पर उसने न जाना, कि वह कब लेटी, और कब उठ गई।
34 ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.
३४और ऐसा हुआ कि दूसरे दिन बड़ी ने छोटी से कहा, “देख, कल रात को मैं अपने पिता के साथ सोई; इसलिए आज भी रात को हम उसको दाखमधु पिलाएँ; तब तू जाकर उसके साथ सोना कि हम अपने पिता के द्वारा वंश उत्पन्न करें।”
35 ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಚಿಕ್ಕವಳು ಎದ್ದು, ಅವನ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.
३५अतः उन्होंने उस दिन भी रात के समय अपने पिता को दाखमधु पिलाया, और छोटी बेटी जाकर उसके पास लेट गई; पर उसको उसके भी सोने और उठने का ज्ञान न था।
36 ಈ ಪ್ರಕಾರ ಲೋಟನ ಇಬ್ಬರು ಪುತ್ರಿಯರು ತಮ್ಮ ತಂದೆಯಿಂದ ಗರ್ಭಿಣಿಯರಾದರು.
३६इस प्रकार से लूत की दोनों बेटियाँ अपने पिता से गर्भवती हुईं।
37 ಹಿರಿಯ ಮಗಳು ಮಗನನ್ನು ಹೆತ್ತು, ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗಿನ ಮೋವಾಬ್ಯರಿಗೂ ಇವನೇ ತಂದೆ.
३७बड़ी एक पुत्र जनी और उसका नाम मोआब रखा; वह मोआब नामक जाति का जो आज तक है मूलपिता हुआ।
38 ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ.
३८और छोटी भी एक पुत्र जनी, और उसका नाम बेनअम्मी रखा; वह अम्मोनवंशियों का जो आज तक है मूलपिता हुआ।

< ಆದಿಕಾಂಡ 19 >