< ಆದಿಕಾಂಡ 2 >

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.
וַיְכֻלּוּ הַשָּׁמַיִם וְהָאָרֶץ וְכׇל־צְבָאָֽם׃
2 ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.
וַיְכַל אֱלֹהִים בַּיּוֹם הַשְּׁבִיעִי מְלַאכְתּוֹ אֲשֶׁר עָשָׂה וַיִּשְׁבֹּת בַּיּוֹם הַשְּׁבִיעִי מִכׇּל־מְלַאכְתּוֹ אֲשֶׁר עָשָֽׂה׃
3 ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.
וַיְבָרֶךְ אֱלֹהִים אֶת־יוֹם הַשְּׁבִיעִי וַיְקַדֵּשׁ אֹתוֹ כִּי בוֹ שָׁבַת מִכׇּל־מְלַאכְתּוֹ אֲשֶׁר־בָּרָא אֱלֹהִים לַעֲשֽׂוֹת׃
4 ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.
אֵלֶּה תוֹלְדוֹת הַשָּׁמַיִם וְהָאָרֶץ בְּ הִ בָּֽרְאָם בְּיוֹם עֲשׂוֹת יְהֹוָה אֱלֹהִים אֶרֶץ וְשָׁמָֽיִם׃
5 ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
וְכֹל ׀ שִׂיחַ הַשָּׂדֶה טֶרֶם יִֽהְיֶה בָאָרֶץ וְכׇל־עֵשֶׂב הַשָּׂדֶה טֶרֶם יִצְמָח כִּי לֹא הִמְטִיר יְהֹוָה אֱלֹהִים עַל־הָאָרֶץ וְאָדָם אַיִן לַֽעֲבֹד אֶת־הָֽאֲדָמָֽה׃
6 ಆದರೆ ಭೂಮಿಯಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸಿತು.
וְאֵד יַֽעֲלֶה מִן־הָאָרֶץ וְהִשְׁקָה אֶֽת־כׇּל־פְּנֵי הָֽאֲדָמָֽה׃
7 ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.
וַיִּיצֶר יְהֹוָה אֱלֹהִים אֶת־הָֽאָדָם עָפָר מִן־הָאֲדָמָה וַיִּפַּח בְּאַפָּיו נִשְׁמַת חַיִּים וַיְהִי הָֽאָדָם לְנֶפֶשׁ חַיָּֽה׃
8 ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.
וַיִּטַּע יְהֹוָה אֱלֹהִים גַּן־בְּעֵדֶן מִקֶּדֶם וַיָּשֶׂם שָׁם אֶת־הָֽאָדָם אֲשֶׁר יָצָֽר׃
9 ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.
וַיַּצְמַח יְהֹוָה אֱלֹהִים מִן־הָאֲדָמָה כׇּל־עֵץ נֶחְמָד לְמַרְאֶה וְטוֹב לְמַאֲכָל וְעֵץ הַֽחַיִּים בְּתוֹךְ הַגָּן וְעֵץ הַדַּעַת טוֹב וָרָֽע׃
10 ಏದೆನ್ ಸೀಮೆಯಿಂದ ಒಂದು ನದಿ ಹರಿದು, ತೋಟವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ಹರಿದು ವಿಭಾಗವಾಗಿ, ನಾಲ್ಕು ಉಪನದಿಗಳಾದವು.
וְנָהָר יֹצֵא מֵעֵדֶן לְהַשְׁקוֹת אֶת־הַגָּן וּמִשָּׁם יִפָּרֵד וְהָיָה לְאַרְבָּעָה רָאשִֽׁים׃
11 ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.
שֵׁם הָֽאֶחָד פִּישׁוֹן הוּא הַסֹּבֵב אֵת כׇּל־אֶרֶץ הַֽחֲוִילָה אֲשֶׁר־שָׁם הַזָּהָֽב׃
12 ಆ ದೇಶದ ಬಂಗಾರವು ಉತ್ತಮವಾಗಿತ್ತು. ಅಲ್ಲಿ ಬದೋಲಖ ಧೂಪ ಮತ್ತು ಗೋಮೇಧಿಕ ರತ್ನ ಇದ್ದವು.
וּֽזְהַב הָאָרֶץ הַהִוא טוֹב שָׁם הַבְּדֹלַח וְאֶבֶן הַשֹּֽׁהַם׃
13 ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.
וְשֵֽׁם־הַנָּהָר הַשֵּׁנִי גִּיחוֹן הוּא הַסּוֹבֵב אֵת כׇּל־אֶרֶץ כּֽוּשׁ׃
14 ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.
וְשֵׁם הַנָּהָר הַשְּׁלִישִׁי חִדֶּקֶל הוּא הַֽהֹלֵךְ קִדְמַת אַשּׁוּר וְהַנָּהָר הָֽרְבִיעִי הוּא פְרָֽת׃
15 ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ಏದೆನ್ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.
וַיִּקַּח יְהֹוָה אֱלֹהִים אֶת־הָֽאָדָם וַיַּנִּחֵהוּ בְגַן־עֵדֶן לְעׇבְדָהּ וּלְשׇׁמְרָֽהּ׃
16 ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.
וַיְצַו יְהֹוָה אֱלֹהִים עַל־הָֽאָדָם לֵאמֹר מִכֹּל עֵֽץ־הַגָּן אָכֹל תֹּאכֵֽל׃
17 ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.
וּמֵעֵץ הַדַּעַת טוֹב וָרָע לֹא תֹאכַל מִמֶּנּוּ כִּי בְּיוֹם אֲכׇלְךָ מִמֶּנּוּ מוֹת תָּמֽוּת׃
18 ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.
וַיֹּאמֶר יְהֹוָה אֱלֹהִים לֹא־טוֹב הֱיוֹת הָֽאָדָם לְבַדּוֹ אֶֽעֱשֶׂה־לּוֹ עֵזֶר כְּנֶגְדּֽוֹ׃
19 ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
וַיִּצֶר יְהֹוָה אֱלֹהִים מִן־הָֽאֲדָמָה כׇּל־חַיַּת הַשָּׂדֶה וְאֵת כׇּל־עוֹף הַשָּׁמַיִם וַיָּבֵא אֶל־הָאָדָם לִרְאוֹת מַה־יִּקְרָא־לוֹ וְכֹל אֲשֶׁר יִקְרָא־לוֹ הָֽאָדָם נֶפֶשׁ חַיָּה הוּא שְׁמֽוֹ׃
20 ಹೀಗೆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆದಾಮನಿಗೆ ಸರಿಬೀಳುವ ಸಹಕಾರಿಣಿಯು ಕಾಣಿಸಲಿಲ್ಲ.
וַיִּקְרָא הָֽאָדָם שֵׁמוֹת לְכׇל־הַבְּהֵמָה וּלְעוֹף הַשָּׁמַיִם וּלְכֹל חַיַּת הַשָּׂדֶה וּלְאָדָם לֹֽא־מָצָא עֵזֶר כְּנֶגְדּֽוֹ׃
21 ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.
וַיַּפֵּל יְהֹוָה אֱלֹהִים ׀ תַּרְדֵּמָה עַל־הָאָדָם וַיִּישָׁן וַיִּקַּח אַחַת מִצַּלְעֹתָיו וַיִּסְגֹּר בָּשָׂר תַּחְתֶּֽנָּה׃
22 ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
וַיִּבֶן יְהֹוָה אֱלֹהִים ׀ אֶֽת־הַצֵּלָע אֲשֶׁר־לָקַח מִן־הָֽאָדָם לְאִשָּׁה וַיְבִאֶהָ אֶל־הָֽאָדָֽם׃
23 ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”
וַיֹּאמֶר הָֽאָדָם זֹאת הַפַּעַם עֶצֶם מֵֽעֲצָמַי וּבָשָׂר מִבְּשָׂרִי לְזֹאת יִקָּרֵא אִשָּׁה כִּי מֵאִישׁ לֻֽקְחָה־זֹּֽאת׃
24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
עַל־כֵּן יַֽעֲזׇב־אִישׁ אֶת־אָבִיו וְאֶת־אִמּוֹ וְדָבַק בְּאִשְׁתּוֹ וְהָיוּ לְבָשָׂר אֶחָֽד׃
25 ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
וַיִּֽהְיוּ שְׁנֵיהֶם עֲרוּמִּים הָֽאָדָם וְאִשְׁתּוֹ וְלֹא יִתְבֹּשָֽׁשׁוּ׃

< ಆದಿಕಾಂಡ 2 >