< ಆದಿಕಾಂಡ 27 >
1 ಇಸಾಕನು ಮುದುಕನಾಗಿ ನೋಡುವುದಕ್ಕಾಗದಷ್ಟು ಅವನ ಕಣ್ಣುಗಳು ಮಬ್ಬಾದಾಗ, ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು ಅವನಿಗೆ, “ನನ್ನ ಮಗನೇ,” ಎಂದನು. ಅವನು ಇಸಾಕನಿಗೆ, “ಇದ್ದೇನೆ,” ಎಂದನು.
१जब इसहाक बूढ़ा हो गया, और उसकी आँखें ऐसी धुंधली पड़ गईं कि उसको सूझता न था, तब उसने अपने जेठे पुत्र एसाव को बुलाकर कहा, “हे मेरे पुत्र,” उसने कहा, “क्या आज्ञा।”
2 ಆಗ ಇಸಾಕನು, “ಇಗೋ, ಈಗ ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.
२उसने कहा, “सुन, मैं तो बूढ़ा हो गया हूँ, और नहीं जानता कि मेरी मृत्यु का दिन कब होगा
3 ಆದ್ದರಿಂದ ಈಗ ನೀನು ನಿನ್ನ ಆಯುಧಗಳನ್ನೂ, ಬಿಲ್ಲುಬತ್ತಳಿಕೆಯನ್ನೂ, ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ,
३इसलिए अब तू अपना तरकश और धनुष आदि हथियार लेकर मैदान में जा, और मेरे लिये अहेर कर ले आ।
4 ನಾನು ಇಷ್ಟಪಡುವ ರುಚಿಯಾದ ಊಟವನ್ನೂ ಸಿದ್ಧಮಾಡಿ ತೆಗೆದುಕೊಂಡು ಬಾ. ಆಗ ಸಾಯುವುದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುವಂತೆ ಅದನ್ನು ಊಟಮಾಡುವೆನು,” ಎಂದನು.
४तब मेरी रूचि के अनुसार स्वादिष्ट भोजन बनाकर मेरे पास ले आना, कि मैं उसे खाकर मरने से पहले तुझे जी भरकर आशीर्वाद दूँ।”
5 ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವುದಕ್ಕಾಗಿ ಅಡವಿಗೆ ಹೋದನು.
५तब एसाव अहेर करने को मैदान में गया। जब इसहाक एसाव से यह बात कह रहा था, तब रिबका सुन रही थी।
6 ಆಗ ರೆಬೆಕ್ಕಳು ತನ್ನ ಮಗ ಯಾಕೋಬನಿಗೆ, “ನಿನ್ನ ತಂದೆ ನಿನ್ನ ಸಹೋದರ ಏಸಾವನಿಗೆ,
६इसलिए उसने अपने पुत्र याकूब से कहा, “सुन, मैंने तेरे पिता को तेरे भाई एसाव से यह कहते सुना है,
7 ‘ನನಗೋಸ್ಕರ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಂದು, ನಾನು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ, ಆಗ ನಾನು ಸಾಯುವುದಕ್ಕಿಂತ ಮುಂಚೆ ಊಟಮಾಡಿ, ಯೆಹೋವ ದೇವರ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸುವೆನು,’ ಎಂದು ಹೇಳಿದ್ದನ್ನು ನಾನು ಕೇಳಿಸಿಕೊಂಡಿದ್ದೇನೆ.
७‘तू मेरे लिये अहेर करके उसका स्वादिष्ट भोजन बना, कि मैं उसे खाकर तुझे यहोवा के आगे मरने से पहले आशीर्वाद दूँ।’
8 ಆದ್ದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.
८इसलिए अब, हे मेरे पुत्र, मेरी सुन, और यह आज्ञा मान,
9 ನೀನು ಮಂದೆಯ ಬಳಿಗೆ ಹೋಗಿ, ಅಲ್ಲಿಂದ ಎರಡು ಒಳ್ಳೆಯ ಮೇಕೆಯ ಮರಿಗಳನ್ನು ತೆಗೆದುಕೊಂಡು ಬಾ. ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ, ಅವನು ಇಷ್ಟಪಡುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುತ್ತೇನೆ.
९कि बकरियों के पास जाकर बकरियों के दो अच्छे-अच्छे बच्चे ले आ; और मैं तेरे पिता के लिये उसकी रूचि के अनुसार उनके माँस का स्वादिष्ट भोजन बनाऊँगी।
10 ನೀನು ಅದನ್ನು ನಿನ್ನ ತಂದೆಯ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ,” ಎಂದಳು.
१०तब तू उसको अपने पिता के पास ले जाना, कि वह उसे खाकर मरने से पहले तुझको आशीर्वाद दे।”
11 ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಸಹೋದರ ಏಸಾವನು ರೋಮವುಳ್ಳವನಾಗಿದ್ದಾನೆ, ನಾನು ನುಣುಪಾದ ಚರ್ಮವುಳ್ಳವನಾಗಿದ್ದೇನೆ.
११याकूब ने अपनी माता रिबका से कहा, “सुन, मेरा भाई एसाव तो रोंआर पुरुष है, और मैं रोमहीन पुरुष हूँ।
12 ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ, ನನ್ನ ಗತಿಯೇನು? ನಾನು ಅವನಿಗೆ ಮೋಸಮಾಡುವವನಾಗಿ ಕಂಡು ಬಂದು, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು,” ಎಂದನು.
१२कदाचित् मेरा पिता मुझे टटोलने लगे, तो मैं उसकी दृष्टि में ठग ठहरूँगा; और आशीष के बदले श्राप ही कमाऊँगा।”
13 ಅವನ ತಾಯಿಯು ಅವನಿಗೆ, “ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ, ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ, ಅವುಗಳನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು.
१३उसकी माता ने उससे कहा, “हे मेरे, पुत्र, श्राप तुझ पर नहीं मुझी पर पड़े, तू केवल मेरी सुन, और जाकर वे बच्चे मेरे पास ले आ।”
14 ಆಗ ಯಾಕೋಬನು ಹೋಗಿ ಅವುಗಳನ್ನು ಹಿಡಿದು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು, ಅವನ ತಂದೆಯು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.
१४तब याकूब जाकर उनको अपनी माता के पास ले आया, और माता ने उसके पिता की रूचि के अनुसार स्वादिष्ट भोजन बना दिया।
15 ತರುವಾಯ ರೆಬೆಕ್ಕಳು ಮನೆಯಲ್ಲಿದ್ದ ತನ್ನ ಹಿರಿಯ ಮಗನಾದ ಏಸಾವನ ಒಳ್ಳೆಯ ವಸ್ತ್ರವನ್ನು ತೆಗೆದುಕೊಂಡು, ತನ್ನ ಕಿರಿಯ ಮಗ ಯಾಕೋಬನಿಗೆ ಉಡಿಸಿದಳು.
१५तब रिबका ने अपने पहलौठे पुत्र एसाव के सुन्दर वस्त्र, जो उसके पास घर में थे, लेकर अपने छोटे पुत्र याकूब को पहना दिए।
16 ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ, ನುಣುಪಾದ ಅವನ ಕೊರಳಿನ ಮೇಲೆಯೂ ಕಟ್ಟಿದಳು.
१६और बकरियों के बच्चों की खालों को उसके हाथों में और उसके चिकने गले में लपेट दिया।
17 ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ, ರೊಟ್ಟಿಯನ್ನೂ ತನ್ನ ಮಗ ಯಾಕೋಬನ ಕೈಯಲ್ಲಿ ಕೊಟ್ಟಳು.
१७और वह स्वादिष्ट भोजन और अपनी बनाई हुई रोटी भी अपने पुत्र याकूब के हाथ में दे दी।
18 ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ, “ನನ್ನ ತಂದೆಯೇ,” ಎಂದನು. ಅದಕ್ಕೆ ಅವನು, “ನೀನು ಯಾರು?” ಎಂದನು.
१८तब वह अपने पिता के पास गया, और कहा, “हे मेरे पिता,” उसने कहा, “क्या बात है? हे मेरे पुत्र, तू कौन है?”
19 ಯಾಕೋಬನು ತನ್ನ ತಂದೆಗೆ, “ನಾನು ನಿನ್ನ ಹಿರಿಯ ಮಗ ಏಸಾವನು. ನೀನು ನನಗೆ ಹೇಳಿದಂತೆ ಮಾಡಿದ್ದೇನೆ, ಎದ್ದು ಕುಳಿತುಕೋ. ನೀನು ನನ್ನನ್ನು ಆಶೀರ್ವದಿಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.
१९याकूब ने अपने पिता से कहा, “मैं तेरा जेठा पुत्र एसाव हूँ। मैंने तेरी आज्ञा के अनुसार किया है; इसलिए उठ और बैठकर मेरे अहेर के माँस में से खा, कि तू जी से मुझे आशीर्वाद दे।”
20 ಇಸಾಕನು ತನ್ನ ಮಗನಿಗೆ, “ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು?” ಎಂದನು. ಅವನು, “ನಿನ್ನ ದೇವರಾದ ಯೆಹೋವ ದೇವರು ನನ್ನೆದುರಿಗೆ ಅದು ಬರುವಂತೆ ಮಾಡಿದರು,” ಎಂದನು.
२०इसहाक ने अपने पुत्र से कहा, “हे मेरे पुत्र, क्या कारण है कि वह तुझे इतनी जल्दी मिल गया?” उसने यह उत्तर दिया, “तेरे परमेश्वर यहोवा ने उसको मेरे सामने कर दिया।”
21 ಆಗ ಇಸಾಕನು ಯಾಕೋಬನಿಗೆ, “ನನ್ನ ಮಗನೇ, ನೀನೇ ನನ್ನ ಮಗ ಏಸಾವನು ಹೌದೋ, ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿನೋಡುವಂತೆ ಹತ್ತಿರ ಬಾ,” ಎಂದನು.
२१फिर इसहाक ने याकूब से कहा, “हे मेरे पुत्र, निकट आ, मैं तुझे टटोलकर जानूँ, कि तू सचमुच मेरा पुत्र एसाव है या नहीं।”
22 ಆಗ ಯಾಕೋಬನು ತನ್ನ ತಂದೆ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ, “ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು,” ಎಂದು ಹೇಳಿದನು.
२२तब याकूब अपने पिता इसहाक के निकट गया, और उसने उसको टटोलकर कहा, “बोल तो याकूब का सा है, पर हाथ एसाव ही के से जान पड़ते हैं।”
23 ಅವನ ಕೈಗಳು ಅವನ ಅಣ್ಣ ಏಸಾವನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ, ಅವನು ಯಾರೆಂದು ತಿಳಿಯದೆ, ಅವನನ್ನು ಆಶೀರ್ವದಿಸಿದನು.
२३और उसने उसको नहीं पहचाना, क्योंकि उसके हाथ उसके भाई के से रोंआर थे। अतः उसने उसको आशीर्वाद दिया।
24 ಮತ್ತೆ ಅವನು, “ನೀನು ನನ್ನ ಮಗ ಏಸಾವನೋ?” ಎಂದಾಗ. ಯಾಕೋಬನು, “ನಾನೇ,” ಎಂದನು.
२४और उसने पूछा, “क्या तू सचमुच मेरा पुत्र एसाव है?” उसने कहा, “हाँ मैं हूँ।”
25 ಆಗ ಇಸಾಕನು, “ನನ್ನ ಮಗನೇ, ನೀನು ತಂದದ್ದನ್ನು ಕೊಡು, ಊಟಮಾಡಿ, ನಿನ್ನನ್ನು ಆಶೀರ್ವದಿಸುವೆನು,” ಎಂದನು. ಆಗ ಯಾಕೋಬನು ಅದನ್ನು ಹತ್ತಿರ ತೆಗೆದುಕೊಂಡು ಬಂದಾಗ ಅವನು ಊಟಮಾಡಿದನು. ಅವನು ದ್ರಾಕ್ಷಾರಸವನ್ನು ತಂದಾಗ, ಅದನ್ನು ಕುಡಿದನು.
२५तब उसने कहा, “भोजन को मेरे निकट ले आ, कि मैं, अपने पुत्र के अहेर के माँस में से खाकर, तुझे जी से आशीर्वाद दूँ।” तब वह उसको उसके निकट ले आया, और उसने खाया; और वह उसके पास दाखमधु भी लाया, और उसने पिया।
26 ಅವನ ತಂದೆ ಇಸಾಕನು ಅವನಿಗೆ, “ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು,” ಎಂದನು.
२६तब उसके पिता इसहाक ने उससे कहा, “हे मेरे पुत्र निकट आकर मुझे चूम।”
27 ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ, ಅವನನ್ನು ಹೀಗೆ ಆಶೀರ್ವದಿಸಿದನು, “ನನ್ನ ಮಗನ ವಾಸನೆಯು ಯೆಹೋವ ದೇವರು ಆಶೀರ್ವದಿಸಿದ ಹೊಲದ ವಾಸನೆಯಂತೆ ಇದೆ.
२७उसने निकट जाकर उसको चूमा। और उसने उसके वस्त्रों का सुगन्ध पाकर उसको वह आशीर्वाद दिया, “देख, मेरे पुत्र की सुगन्ध जो ऐसे खेत की सी है जिस पर यहोवा ने आशीष दी हो;
28 ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯವನ್ನೂ ಹೊಸ ದ್ರಾಕ್ಷಾರಸವನ್ನೂ ಕೊಡಲಿ.
२८परमेश्वर तुझे आकाश से ओस, और भूमि की उत्तम से उत्तम उपज, और बहुत सा अनाज और नया दाखमधु दे;
29 ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”
२९राज्य-राज्य के लोग तेरे अधीन हों, और देश-देश के लोग तुझे दण्डवत् करें; तू अपने भाइयों का स्वामी हो, और तेरी माता के पुत्र तुझे दण्डवत् करें। जो तुझे श्राप दें वे आप ही श्रापित हों, और जो तुझे आशीर्वाद दें वे आशीष पाएँ।”
30 ಇಸಾಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ, ಯಾಕೋಬನು ತನ್ನ ತಂದೆ ಇಸಾಕನ ಸಮ್ಮುಖದಿಂದ ಹೊರಟುಹೋದನು. ಆಮೇಲೆ ಅವನ ಸಹೋದರ ಏಸಾವನು ಬೇಟೆಯಿಂದ ಬಂದನು.
३०जैसे ही यह आशीर्वाद इसहाक याकूब को दे चुका, और याकूब अपने पिता इसहाक के सामने से निकला ही था, कि एसाव अहेर लेकर आ पहुँचा।
31 ಅವನೂ ಸಹ ರುಚಿಯಾದ ಊಟವನ್ನು ಸಿದ್ಧಮಾಡಿ, ತನ್ನ ತಂದೆಯ ಬಳಿಗೆ ತಂದು, “ನನ್ನ ತಂದೆಯೇ, ಎದ್ದು ನನ್ನನ್ನು ಆಶೀರ್ವದಿಸುವಂತೆ ನಿನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.
३१तब वह भी स्वादिष्ट भोजन बनाकर अपने पिता के पास ले आया, और उसने कहा, “हे मेरे पिता, उठकर अपने पुत्र के अहेर का माँस खा, ताकि मुझे जी से आशीर्वाद दे।”
32 ಅವನ ತಂದೆ ಇಸಾಕನು ಅವನಿಗೆ, “ನೀನು ಯಾರು?” ಎಂದಾಗ. ಅವನು, “ನಾನು ನಿನ್ನ ಚೊಚ್ಚಲ ಮಗ ಏಸಾವನು,” ಎಂದನು.
३२उसके पिता इसहाक ने पूछा, “तू कौन है?” उसने कहा, “मैं तेरा जेठा पुत्र एसाव हूँ।”
33 ಆಗ ಇಸಾಕನು ಬಹಳವಾಗಿ ನಡುಗುತ್ತಾ, “ನೀನು ಬರುವುದಕ್ಕಿಂತ ಮೊದಲು ಬೇಟೆಯಾಡಿ ನನಗೆ ಊಟ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವುದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವದಿಸಿದೆನು. ಅವನು ಆಶೀರ್ವಾದ ಹೊಂದಿರುವನು,” ಎಂದನು.
३३तब इसहाक ने अत्यन्त थरथर काँपते हुए कहा, “फिर वह कौन था जो अहेर करके मेरे पास ले आया था, और मैंने तेरे आने से पहले सब में से कुछ कुछ खा लिया और उसको आशीर्वाद दिया? वरन् उसको आशीष लगी भी रहेगी।”
34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ, ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ, “ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು,” ಎಂದನು.
३४अपने पिता की यह बात सुनते ही एसाव ने अत्यन्त ऊँचे और दुःख भरे स्वर से चिल्लाकर अपने पिता से कहा, “हे मेरे पिता, मुझ को भी आशीर्वाद दे!”
35 ಇಸಾಕನು, “ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡಿದ್ದಾನೆ,” ಎಂದನು.
३५उसने कहा, “तेरा भाई धूर्तता से आया, और तेरे आशीर्वाद को लेकर चला गया।”
36 ಅದಕ್ಕೆ ಏಸಾವನು, “ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ? ಅವನು ನನ್ನನ್ನು ಎರಡು ಸಾರಿ ವಂಚಿಸಿದ್ದಾನೆ. ಅವನು ನನ್ನ ಚೊಚ್ಚಲತನವನ್ನು ತೆಗೆದುಕೊಂಡಿದ್ದಾನೆ. ಇಗೋ, ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸಲಿಲ್ಲವೋ?” ಎಂದನು.
३६उसने कहा, “क्या उसका नाम याकूब यथार्थ नहीं रखा गया? उसने मुझे दो बार अड़ंगा मारा, मेरा पहलौठे का अधिकार तो उसने ले ही लिया था; और अब देख, उसने मेरा आशीर्वाद भी ले लिया है।” फिर उसने कहा, “क्या तूने मेरे लिये भी कोई आशीर्वाद नहीं सोच रखा है?”
37 ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.
३७इसहाक ने एसाव को उत्तर देकर कहा, “सुन, मैंने उसको तेरा स्वामी ठहराया, और उसके सब भाइयों को उसके अधीन कर दिया, और अनाज और नया दाखमधु देकर उसको पुष्ट किया है। इसलिए अब, हे मेरे पुत्र, मैं तेरे लिये क्या करूँ?”
38 ಏಸಾವನು ತನ್ನ ತಂದೆಗೆ, “ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಆಶೀರ್ವದಿಸು,” ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
३८एसाव ने अपने पिता से कहा, “हे मेरे पिता, क्या तेरे मन में एक ही आशीर्वाद है? हे मेरे पिता, मुझ को भी आशीर्वाद दे।” यह कहकर एसाव फूट फूटकर रोया।
39 ಆಗ ಅವನ ತಂದೆ ಇಸಾಕನು ಉತ್ತರವಾಗಿ ಅವನಿಗೆ ಹೀಗೆ ಹೇಳಿದನು, “ನಿನ್ನ ನಿವಾಸವು ಭೂಮಿಯ ಐಶ್ವರ್ಯದಿಂದಲೂ ಮೇಲಿನ ಆಕಾಶದಿಂದ ಬೀಳುವ ಮಂಜಿನಿಂದಲೂ ಇರುವುದು.
३९उसके पिता इसहाक ने उससे कहा, “सुन, तेरा निवास उपजाऊ भूमि से दूर हो, और ऊपर से आकाश की ओस उस पर न पड़े।
40 ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”
४०तू अपनी तलवार के बल से जीवित रहे, और अपने भाई के अधीन तो होए; पर जब तू स्वाधीन हो जाएगा, तब उसके जूए को अपने कंधे पर से तोड़ फेंके।”
41 ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.
४१एसाव ने तो याकूब से अपने पिता के दिए हुए आशीर्वाद के कारण बैर रखा; और उसने सोचा, “मेरे पिता के अन्तकाल का दिन निकट है, फिर मैं अपने भाई याकूब को घात करूँगा।”
42 ರೆಬೆಕ್ಕಳಿಗೆ ತನ್ನ ಹಿರಿಯ ಮಗ ಏಸಾವನ ಬಗ್ಗೆ ಗ್ರಹಿಸಿದಾಗ, ಆಕೆಯು ತನ್ನ ಕಿರಿಯ ಮಗ ಯಾಕೋಬನನ್ನು ಕರೆದು ಅವನಿಗೆ, “ನಿನ್ನ ಸಹೋದರ ಏಸಾವನು ನಿನ್ನನ್ನು ಕೊಂದು, ತನ್ನನ್ನು ಸಂತೈಸಿಕೊಳ್ಳುವುದಕ್ಕಿದ್ದಾನೆ.
४२जब रिबका को अपने पहलौठे पुत्र एसाव की ये बातें बताई गईं, तब उसने अपने छोटे पुत्र याकूब को बुलाकर कहा, “सुन, तेरा भाई एसाव तुझे घात करने के लिये अपने मन में धीरज रखे हुए है।
43 ಆದ್ದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು. ಎದ್ದು ಹಾರಾನಿನಲ್ಲಿರುವ ನನ್ನ ಸಹೋದರ ಲಾಬಾನನ ಬಳಿಗೆ ಓಡಿಹೋಗು.
४३इसलिए अब, हे मेरे पुत्र, मेरी सुन, और हारान को मेरे भाई लाबान के पास भाग जा;
44 ನಿನ್ನ ಸಹೋದರನ ಕೋಪವು ತೀರುವವರೆಗೆ ಕೆಲವು ದಿವಸಗಳು ಅಲ್ಲೇ ಇರು.
४४और थोड़े दिन तक, अर्थात् जब तक तेरे भाई का क्रोध न उतरे तब तक उसी के पास रहना।
45 ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ, ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವವರೆಗೆ ನೀನು ಅಲ್ಲೇ ಇರು. ತರುವಾಯ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದಳು.
४५फिर जब तेरे भाई का क्रोध तुझ पर से उतरे, और जो काम तूने उससे किया है उसको वह भूल जाए; तब मैं तुझे वहाँ से बुलवा भेजूँगी। ऐसा क्यों हो कि एक ही दिन में मुझे तुम दोनों से वंचित होना पड़े?”
46 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.
४६फिर रिबका ने इसहाक से कहा, “हित्ती लड़कियों के कारण मैं अपने प्राण से घिन करती हूँ; इसलिए यदि ऐसी हित्ती लड़कियों में से, जैसी इस देश की लड़कियाँ हैं, याकूब भी एक को कहीं ब्याह ले, तो मेरे जीवन में क्या लाभ होगा?”