< ಆದಿಕಾಂಡ 29 >

1 ಆಗ ಯಾಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
याकोब अपनी यात्रा में आगे बढ़ते गए और पूर्वी देश में जा पहुंचे.
2 ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.
तब उन्हें मैदान में एक कुंआ और भेड़-बकरियों के तीन झुंड बैठे नज़र आये और उन्होंने देखा कि जिस कुएं से भेड़-बकरियों को पानी पिलाते थे उस कुएं पर बड़ा पत्थर रखा हुआ था.
3 ಅಲ್ಲಿ ಮಂದೆಗಳೆಲ್ಲಾ ಕೂಡಿದಾಗ, ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ, ಕುರಿಗಳಿಗೆ ನೀರನ್ನು ಕುಡಿಸಿ, ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
जब भेड़-बकरियां एक साथ इकट्ठी हो जातीं तब कुएं से पत्थर हटाकर भेड़-बकरियों को पानी पिलाया जाता था, फिर पत्थर कुएं पर वापस लुढ़का दिया जाता था.
4 ಯಾಕೋಬನು ಅವರಿಗೆ, “ನನ್ನ ಸಹೋದರರೇ, ನೀವು ಎಲ್ಲಿಯವರು?” ಎಂದಾಗ. ಅವರು, “ನಾವು ಹಾರಾನಿನವರು,” ಎಂದರು.
याकोब ने चरवाहों से पूछा, “मेरे भाइयो, आप कहां से आए हैं?” उन्होंने कहा, “हम हारान के हैं.”
5 ಅದಕ್ಕವನು ಅವರಿಗೆ, “ನಾಹೋರನ ಮೊಮ್ಮಗ ಲಾಬಾನನನ್ನು ನೀವು ಬಲ್ಲಿರೋ?” ಎಂದಾಗ. ಅವರು, “ನಾವು ಅವನನ್ನು ಬಲ್ಲೆವು,” ಎಂದರು.
याकोब ने पूछा, “क्या आप नाहोर के पोते लाबान को जानते हैं?” उन्होंने कहा, “हां, हम जानते हैं.”
6 ಯಾಕೋಬನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಿದಾಗ, ಆಗ ಅವರು, “ಕ್ಷೇಮವಾಗಿದ್ದಾನೆ, ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.
फिर याकोब ने पूछा, “क्या वे ठीक हैं?” उन्होंने कहा, “वे ठीक हैं और उनकी बेटी राहेल अपनी भेड़ों के साथ यहां आ रही है.”
7 ಯಾಕೋಬನು ಅವರಿಗೆ, “ಇನ್ನೂ ಬಹಳ ಹೊತ್ತು ಇದೆ. ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ. ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ,” ಎಂದನು.
याकोब ने कहा, “देखो, सूरज अभी भी ऊंचा है, अभी तो शाम नहीं हुई फिर इतनी जल्दी भेड़-बकरियों को क्यों इकट्ठा कर रहे हो, अभी उन्हें पानी पिलाकर चरने दो.”
8 ಅದಕ್ಕೆ ಅವರು, “ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಉರುಳಿಸುತ್ತಾರೆ. ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ,” ಎಂದರು.
लेकिन उन्होंने कहा, “नहीं, सब भेड़-बकरियां एक साथ आने पर ही कुएं से पत्थर हटाकर भेड़-बकरियों को जल पिलाया जाता है.”
9 ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
जब वे बात कर रहे थे, राहेल अपने पिता की भेड़ें लेकर वहां आ गई, क्योंकि वह पशु चराया करती थी.
10 ಯಾಕೋಬನು ತನ್ನ ತಾಯಿಯ ಸಹೋದರ ಲಾಬಾನನ ಮಗಳಾದ ರಾಹೇಲಳನ್ನೂ, ಅವಳ ಕುರಿಗಳನ್ನೂ ನೋಡಿದಾಗ, ಯಾಕೋಬನು ಹತ್ತಿರ ಬಂದು, ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ, ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
जब याकोब ने अपनी माता के भाई लाबान की पुत्री तथा भेड़-बकरी को देखा, तो उन्होंने जाकर कुएं के मुख से पत्थर हटाया और भेड़-बकरियों को पानी पिलाने लगे.
11 ಆಗ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು, ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
तब याकोब ने राहेल को चुंबन दिया और रोने लगे.
12 ಯಾಕೋಬನು ರಾಹೇಲಳಿಗೆ, ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
याकोब ने राहेल को बताया, कि वह उसके पिता के संबंधी हैं, और रेबेकाह के पुत्र हैं. राहेल दौड़ती हुई अपने पिता को यह बताने गई.
13 ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
जब लाबान ने अपनी बहन के पुत्र याकोब के बारे में सुना, वह भी दौड़कर उनसे मिलने आये. उन्होंने याकोब को चुंबन दिया और उन्हें अपने घर पर लाए. याकोब ने लाबान को अपने बारे में बताया.
14 ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
लाबान ने याकोब से कहा, “निःसंदेह तुम मेरी ही हड्डी एवं मांस हो.” याकोब वहां एक महीने रुके.
15 ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಕನಾಗಿರುವುದರಿಂದ ಸುಮ್ಮನೆ ನನಗೆ ಸೇವೆ ಮಾಡಬೇಕೆ? ನಿನ್ನ ಸಂಬಳ ಎಷ್ಟೆಂಬುದನ್ನು ನನಗೆ ಹೇಳು?” ಎಂದನು.
तब लाबान ने याकोब से कहा, “यद्यपि तुम मेरे संबंधी हो, यह अच्छा नहीं कि मेरे लिए तुम बिना वेतन के काम करते रहो! इसलिये तुम वेतन लेकर ही काम करना!”
16 ಲಾಬಾನನಿಗೆ ಇಬ್ಬರು ಪುತ್ರಿಯರಿದ್ದರು. ದೊಡ್ಡವಳ ಹೆಸರು ಲೇಯಳು, ಚಿಕ್ಕವಳ ಹೆಸರು ರಾಹೇಲಳು.
लाबान की दो पुत्रियां थीं. बड़ी का नाम लियाह तथा छोटी का नाम राहेल था.
17 ಲೇಯಳ ಕಣ್ಣುಗಳು ಕಾಂತಿಹೀನವಾಗಿದ್ದವು. ಆದರೆ ರಾಹೇಲಳು ಸುಂದರಿಯೂ ರೂಪವತಿಯೂ ಆಗಿದ್ದಳು.
लियाह की आंखें धुंधली थी पर राहेल सुंदर थी.
18 ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು.
याकोब राहेल को चाहने लगे, याकोब ने लाबान से कहा, “आपकी छोटी बेटी राहेल को पाने के लिए मैं सात वर्ष आपकी सेवा करने को तैयार हूं.”
19 ಅದಕ್ಕೆ ಲಾಬಾನನು, “ಅವಳನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ, ನಿನಗೆ ಕೊಡುವುದು ಒಳ್ಳೆಯದು. ಆದ್ದರಿಂದ ನನ್ನ ಸಂಗಡವಿರು,” ಎಂದನು.
लाबान ने कहा, “मैं राहेल को किसी अन्य पुरुष को देने से तुमको देना बेहतर है. तुम यहीं हमारे साथ रहो.”
20 ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.
इसलिये याकोब ने राहेल को पाने के लिए सात वर्ष सेवा की, लेकिन उसे यह समय बहुत कम लगा क्योंकि वह राहेल से बहुत प्रेम करता था.
21 ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.
फिर याकोब ने लाबान से कहा, “सात वर्ष हो गये; अब आपकी बेटी राहेल मुझे दीजिए ताकि उससे मेरी शादी हो जाये.”
22 ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣ ಮಾಡಿಸಿದನು.
लाबान ने अपने समाज के लोगों को बुलाकर सबको खाना खिलाया.
23 ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು.
शाम को उसने अपनी बेटी लियाह को याकोब को सौंप दी और याकोब ने उसके साथ विवाह किया.
24 ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಳನ್ನು, ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
लाबान ने अपनी दासी ज़िलपाह को भी लियाह को उसकी दासी होने के लिए दिया.
25 ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಯಾಕೋಬನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದೆ? ರಾಹೇಲಳಿಗೋಸ್ಕರ ನಾನು ನಿನಗೆ ಸೇವೆಮಾಡಿದೆನಲ್ಲಾ? ಏಕೆ ನನಗೆ ಮೋಸಮಾಡಿದೆ?” ಎಂದನು.
जब याकोब को मालूम पड़ा कि वह तो लियाह थी, याकोब ने लाबान से पूछा, “यह क्या किया आपने मेरे साथ? मैं आपकी सेवा राहेल के लिए कर रहा था? फिर आपने मेरे साथ ऐसा धोखा क्यों किया?”
26 ಅದಕ್ಕೆ ಲಾಬಾನನು, “ಹಿರಿಯಳಿಗಿಂತ ಮೊದಲು ಕಿರಿಯಳನ್ನು ಮದುವೆ ಮಾಡಿಕೊಡುವುದು ನಮ್ಮ ಪದ್ಧತಿಯಲ್ಲ.
लाबान ने कहा, “हमारे समाज में बड़ी को छोड़ पहले छोटी की शादी नहीं कर सकते.
27 ಹಿರಿಯಳೊಡನೆ ಈ ವಾರವನ್ನು ಪೂರೈಸು. ತರುವಾಯ ನೀನು ಇನ್ನು ಬೇರೆ ಏಳು ವರ್ಷಗಳವರೆಗೆ ಸೇವೆ ಮಾಡಲು ಒಪ್ಪಿಕೊಂಡರೆ, ನಾನು ಕಿರಿಯ ಮಗಳನ್ನು ನಿನಗೆ ಕೊಡುತ್ತೇನೆ,” ಎಂದನು.
विवाह के उत्सव को पूरे सप्‍ताह मनाते रहो और मैं राहेल को भी तुम्हें विवाह के लिए दूंगा; परंतु तुम्हें और सात वर्ष तक मेरी सेवा करनी पड़ेगी.”
28 ಯಾಕೋಬನು ಅದರಂತೆ ಮಾಡಿ, ವಾರವನ್ನು ಪೂರೈಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
इसलिये याकोब ने ऐसा ही किया. और समारोह का वह सप्‍ताह पूरा किया, तब लाबान ने याकोब को राहेल पत्नी स्वरूप सौंप दी.
29 ಲಾಬಾನನು ತನ್ನ ಮಗಳಾದ ರಾಹೇಲಳಿಗೆ, ತನ್ನ ದಾಸಿಯಾದ ಬಿಲ್ಹಳನ್ನು ದಾಸಿಯಾಗಿ ಕೊಟ್ಟನು.
लाबान ने अपनी दासी बिलहाह को भी राहेल की दासी होने के लिए उसे सौंप दिया.
30 ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು.
याकोब राहेल के पास गया और उसे राहेल लियाह से अधिक प्रिय थी. और उसने लाबान के लिए और सात साल सेवा की.
31 ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.
जब याहवेह ने देखा कि लियाह को प्यार नहीं मिल रहा, याहवेह ने लियाह को गर्भ से आशीषित किया और राहेल को बांझ कर दिया.
32 ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.
लियाह गर्भवती हुई और उसने एक बेटे को जन्म दिया और उसका नाम रियूबेन यह कहकर रखा, “याहवेह ने मेरे दुःख को देखा, और अब मेरे पति ज़रूर मुझसे प्रेम करेंगे.”
33 ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
लियाह का एक और पुत्र पैदा हुआ. उसने कहा, “क्योंकि याहवेह ने यह सुन लिया कि मैं प्रिय नहीं हूं और मुझे यह एक और पुत्र दिया.” उसने उसका नाम शिमओन रखा.
34 ಮತ್ತೊಮ್ಮೆ ಲೇಯಳು ಮಗನನ್ನು ಹೆತ್ತು, “ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಏಕೆಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ,” ಎಂದು ಹೇಳಿ, ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.
लियाह फिर से गर्भवती हुई और जब उसका एक पुत्र पैदा हुआ तब उसने कहा, “अब मेरे पति मुझसे जुड़ जायेंगे क्योंकि मैनें उनके तीन पुत्रों को जन्म दिया है.” इसलिये लियाह ने तीसरे बेटे का नाम लेवी रखा.
35 ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.
उसने एक और बेटे को जन्म दिया और कहा, “अब मैं याहवेह की स्तुति करूंगी,” इसलिये उसने उस बेटे का नाम यहूदाह रखा. उसके बाद लियाह के बच्‍चे होने बंद हो गए.

< ಆದಿಕಾಂಡ 29 >