< ಆದಿಕಾಂಡ 30 >

1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.
Raheli alipoona kwamba hamzalii Yakobo watoto, Raheli akamwonea wivu dada yake. Akamwambia Yakobo, “Nipe watoto, sivyo nitakufa.”
2 ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.
Hasira ya Yakobo ikawaka juu ya Raheli. Akasema, “Mimi ni badala ya Mungu, aliyekuzuilia usipate watoto?
3 ಅದಕ್ಕೆ ಆಕೆಯು, “ನನ್ನ ದಾಸಿ ಬಿಲ್ಹಳು ಇದ್ದಾಳೆ, ಅವಳ ಬಳಿಗೆ ಹೋಗು, ಅವಳು ಹೆತ್ತು ನನ್ನ ಮಡಿಲಲ್ಲಿ ಇಡಲಿ. ಅವಳಿಂದ ನನಗೆ ಮಕ್ಕಳಾಗುವರು,” ಎಂದಳು.
Akasema, “Tazama, kuna mjakazi wangu Bilha. Lala naye, hivyo aweze kuzaa watoto magotini pangu, nami nitapata watoto kwake.
4 ಹೀಗೆ ಅವನಿಗೆ ತನ್ನ ದಾಸಿ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳನ್ನು ಸ್ವೀಕರಿಸಿದನು.
Hivyo akampa Bilha mjakazi kama mke wake, na Yakobo akalala naye.
5 ಬಿಲ್ಹಳು ಗರ್ಭಿಣಿಯಾಗಿ, ಯಾಕೋಬನಿಗೆ ಮಗನನ್ನು ಹೆತ್ತಳು.
Bilha akashika mimba na kumzalia Yakobo mwana.
6 ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
Kisha Raheli akasema, “Mungu ameamua kwa faida yangu. Ameyasikiliza maombi yangu na kunipa mwana.” Kwa sababu hiyo akamwita jina lake Dani
7 ರಾಹೇಲಳ ದಾಸಿ ಬಿಲ್ಹಳು ಮತ್ತೆ ಗರ್ಭಿಣಿಯಾಗಿ, ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
Bilha, mjakazi wa Raheli, akashika mimba tena na kumzalia Yakobo mwana wa pili.
8 ಆಗ ರಾಹೇಲಳು, “ಅಧಿಕವಾದ ಹೋರಾಟಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ,” ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
Raheli akasema, “Kwa mashindano yenye nguvu nimeshindana na dada yangu na kushinda.” Akamwita jina lake Naftali.
9 ಲೇಯಳು ತಾನು ಹೆರುವುದು ನಿಂತಿತೆಂದು ತಿಳಿದು, ತನ್ನ ದಾಸಿ ಜಿಲ್ಪಳನ್ನು ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟಳು.
Lea alipoona kwamba ameacha kuzaa, akamchukua Zilpa, mjakazi wake, na kumpa Yakobo kama mke wake.
10 ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
Zilpa, mjakazi wa Lea, akamzalia Yakobo mwana.
11 ಆಗ ಲೇಯಳು, “ಎಂಥಾ ಸೌಭಾಗ್ಯ,” ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
Lea akasema, “Hii ni bahati njema!” Hivyo akamwita jina lake Gadi.
12 ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
Kisha Zilpa, mjakazi wa Lea, akamzalia Yakobo mwana wa pili.
13 ಆಗ ಲೇಯಳು, “ನಾನು ಧನ್ಯಳಾದೆನು, ಏಕೆಂದರೆ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು,” ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
Lea akasema, “Nina furaha! Kwa maana mabinti wataniita furaha.” Hivyo akamwita jina lake Asheri.
14 ರೂಬೇನನು ಗೋಧಿ ಕೊಯ್ಯುವ ಕಾಲದಲ್ಲಿ ಹೋಗಿ, ಹೊಲದಲ್ಲಿ ದುದಾಯಿ ಫಲಗಳನ್ನು ಕಂಡು, ತಾಯಿ ಲೇಯಳ ಬಳಿಗೆ ಕೆಲವು ಫಲಗಳನ್ನು ತಂದಾಗ, ರಾಹೇಲಳು ಲೇಯಳಿಗೆ, “ನಿನ್ನ ಮಗನು ತಂದ ಫಲಗಳಲ್ಲಿ ಕೆಲವನ್ನು ನನಗೆ ಕೊಡು,” ಎಂದಳು.
Siku za mavuno ya ngano Rubeni akaenda shambani na kuona tunguja. Akazileta kwa mama yake. Kisha Raheli akamwambia Lea, “Nipe baadhi ya tunguja za mwanao.”
15 ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು.
Lea akamwambia, “Je ni jambo dogo kwako, kumchukua mme wangu? Je na sasa unataka kuchukua tunguja za mwanangu pia? Raheli akasema, “Kisha atalala nawe leo usiku, kwa kubadilishana na tunguja za mwanao.
16 ಯಾಕೋಬನು ಸಾಯಂಕಾಲದಲ್ಲಿ ಹೊಲದಿಂದ ಬಂದಾಗ, ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನ ಬಳಿಗೆ ಬರಬೇಕು. ನನ್ನ ಮಗನು ತಂದ ದುದಾಯಿ ಫಲಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ,” ಎಂದಳು. ಆದ್ದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
Jioni Yakobo akaja kutoka uwandani. Lea akaenda kumlaki na kusema, “Leo usiku utalala nami, kwani nimekuajiri kwa tunguja za mwanangu.” Hivyo Yakobo akalala na Lea usiku huo.
17 ಆಗ ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದ್ದರಿಂದ, ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
Mungu akamsikia Lea, na akashika mimba na kumzalia Yakobo mwana wa tano.
18 ಲೇಯಳು, “ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅವನಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.
Lea akasema, “Mungu amenipa ujira wangu, kwa sababu nilimpa mme wangu mjakazi wangu.” Akamwita jina lake Isakari.
19 ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು,
Lea akashika mimba tena na kuzaa mwana wa tano kwa Yakobo.
20 ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ, ನನ್ನ ಗಂಡನು ಈಗಲಾದರೂ ನನ್ನನ್ನು ಗೌರವಿಸುವನು,” ಎಂದು ಹೇಳಿ, ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
Lea akasema, “Mungu amenipa zawadi njema. Sasa mme wangu ataniheshimu, kwa sababu nimemzalia wana sita.” Akamwita jina lake Zabuloni.
21 ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು, ಆಕೆಗೆ ದೀನಾ ಎಂದು ಹೆಸರಿಟ್ಟಳು.
Baadaye akazaa binti na kumwita jina lake Dina.
22 ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.
Mungu akamkumbuka Raheli na kumsikiliza. Akampa kushika mimba.
23 ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು, “ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾರೆ,” ಎಂದಳು.
Akashika mimba na kuzaa mwana. Akasema, “Mungu ameiondoa aibu yangu.”
24 ಆಕೆಯು, “ಯೆಹೋವ ದೇವರು ನನಗೆ ಮತ್ತೊಬ್ಬ ಮಗನನ್ನು ದಯಪಾಲಿಸುವರು,” ಎಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
Akamwita jina lake Yusufu, akisema, Yahwe ameniongeza mwana mwingine.”
25 ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ, “ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವಂತೆ ನನ್ನನ್ನು ಕಳುಹಿಸಿಕೊಡು.
Baada ya Raheli kumzaa Yusufu, Yakobo akamwambia Labani, “Niache niande, ili kwamba niende nyumbani kwetu na katika nchi yangu.
26 ನಾನು ಯಾರಿಗೋಸ್ಕರ ನಿನಗೆ ಸೇವೆ ಮಾಡಿದೆನೋ, ಆ ನನ್ನ ಹೆಂಡತಿಯರನ್ನೂ, ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀಯೆ,” ಎಂದನು.
Nipe wake zangu na watoto wangu niliokutumikia kwa ajili yao, na uniache niondoke, kwani unafahamu nilivyokutumikia.
27 ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.
Labani akamwambia, “Ikiwa nimepata kibali machoni pako, subiri, kwa sababu nimejifunza kwa kutumia uaguzi kwamba Yahwe amenibariki kwa ajili yako.”
28 ನೀನು ನಿನ್ನ ಸಂಬಳವನ್ನು ನಿರ್ಣಯಿಸು. ಅದನ್ನು ನಾನು ನಿನಗೆ ಕೊಡುವೆನು,” ಎಂದನು.
Kisha akasema, “Taja ujira wako, nami nitalipa.”
29 ಅದಕ್ಕೆ ಯಾಕೋಬನು ಅವನಿಗೆ, “ನಾನು ನಿನಗೆ ಮಾಡಿದ ಸೇವೆಯನ್ನೂ, ನಿನ್ನ ಪಶುಗಳು ನನ್ನ ಬಳಿಯಲ್ಲಿ ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀನು ಬಲ್ಲೆ.
Yakobo akamwambia, “Unajua nilivyokutumikia, na jinsi ambavyo mifugo wako wamekuwa nami.
30 ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು.
Kwani walikuwa wachache kabla sijaja, na wameongezeka kwa wingi. Popote nilipokutumikia Mungu amekubariki. Je ni lini mimi nitaandaa kwa ajili ya nyumba yangu pia?”
31 ಅದಕ್ಕೆ ಲಾಬಾನನು, “ನಿನಗೆ ನಾನು ಏನು ಕೊಡಲಿ?” ಎಂದನು. ಯಾಕೋಬನು, “ಏನೂ ಕೊಡಬೇಡ, ಒಂದು ವಿಷಯದಲ್ಲಿ ಒಪ್ಪಿಕೊಂಡರೆ, ನಾನು ಮತ್ತೆ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು.
Hivyo Labani akasema, “Je nikulipe nini? Yakobo akasema, 'Usinipe chochote. Ikiwa utafanya jambo hili kwa ajili yangu, nitawalisha tena kondoo wako na kuwatunza.
32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದು ಹೋಗುವೆನು. ಕುರಿಗಳಲ್ಲಿ ಕಂದುಬಣ್ಣದವುಗಳನ್ನೆಲ್ಲಾ, ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
Niache nipite kati ya kundi lako lote leo, kwa kuondoa kila kondoo mwenye milia na mabaka, na kila kondoo mweusi kati yao, na kati ya wenye mabaka na milia katika mbuzi. Hawa watakuwa ujira wangu.
33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ, ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿಕೊಡುವುದು. ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳು ನನ್ನ ಬಳಿಯಲ್ಲಿದ್ದರೆ, ಅವು ಕದ್ದವುಗಳು ಎಂದು ಎಣಿಕೆಯಾಗಿರಲಿ,” ಎಂದನು.
Uadilifu wangu utashuhudia kwa ajili yangu hapo baadaye, utakapokuja kuangalia ujira wangu. Kila ambaye hana milia na hana madoa miongoni mwa mbuzi, na mweusi kati ya kondoo, ikiwa wataonekana kwangu, watahesabiwa kuwa wameibwa.”
34 ಲಾಬಾನನು, “ನೀನು ಹೇಳಿದಂತೆಯೇ ಆಗಲಿ,” ಎಂದನು.
Labani akasema, “Nakubali. Na iwe kama yalivyo maneno yako.”
35 ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಂದು ಬಣ್ಣವಿದ್ದವುಗಳನ್ನೂ ವಿಂಗಡಿಸಿ, ತನ್ನ ಪುತ್ರರ ಕೈಗೆ ಕೊಟ್ಟನು.
Siku hiyo Labani akaondoa mabeberu yaliyokuwa na milia na madoa, na majike ya mbuzi yaliyokuwa na milia na madoa, kila aliyekuwa mweupe, na weusi wote katika mbuzi, akawakabidhi katika mikono ya wanaye.
36 ತನಗೂ, ಯಾಕೋಬನಿಗೂ ಮಧ್ಯದಲ್ಲಿ ಮೂರು ದಿನಗಳ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಯನ್ನು ಮೇಯಿಸಿದನು.
Pia Labani akaweka safari ya siku tatu kati yake na Yakobo. Hivyo Yakobo akabaki kuchunga wale kondoo wa Labani waliosalia.
37 ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು, ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು, ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು.
Yakobo akachukua matawi mabichi yaliyokatwa ya mipopla, mlozi na mwaramoni mbichi akatoa maganda ili michilizi myeupe ionekane, na akaifanya sehemu nyeupe ya ndani ya mti iliyokuwa ndani ya fito ionekane.
38 ಮಂದೆಗಳು ನೀರು ಕುಡಿಯುವುದಕ್ಕೆ ಬಂದಾಗ, ಅವು ಗರ್ಭಧರಿಸಬೇಕೆಂದು ನೀರು ಕುಡಿಯುವ ದೋಣಿಗಳಲ್ಲಿ ತಾನು ತೊಗಟೆ ಸುಲಿದ ಕೋಲುಗಳನ್ನು ಅವುಗಳ ಮುಂದೆ ಇಟ್ಟನು.
Kisha akaziweka fito alizokuwa amezibambua mbele ya makundi ya kondoo, mbele ya mabirika yakunyweshea walipokuja kunywa maji. Wakashika mimba walipokuja kunywa maji.
39 ಮಂದೆಗಳು ಆ ಕೋಲುಗಳನ್ನು ನೋಡಿ, ಸಂಗಮ ಮಾಡಿದ್ದರಿಂದ, ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
Wanyama wakapandana mbele ya fito; nao wakazaa watoto wenye milia, mabaka na wenye madoa.
40 ಯಾಕೋಬನು ಕುರಿಗಳನ್ನು ಬೇರೆ ಮಾಡಿ, ಲಾಬಾನನ ಮಂದೆಯಲ್ಲಿರುವ ರೇಖೆಗಳುಳ್ಳ ಆಡುಕುರಿಗಳೆದುರಾಗಿಯೂ ಕಂದು ಬಣ್ಣ ಉಳ್ಳವುಗಳೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ, ಅವುಗಳನ್ನು ಬೇರೆ ಇಟ್ಟುಕೊಂಡನು.
Yakobo akawatenga hawa wanakondoo, lakini akawafanya waliosalia kuelekea wanyama wenye milia na kondoo weusi wote katika kundi la Labani. Kisha akayatenga makundi yake mwenyewe pekee na hakuwaweka pamoja na wale wa Labani.
41 ಬಲವಾದ ಕುರಿಗಳು ಸಂಗಮ ಮಾಡುವಾಗ ಯಾಕೋಬನು ಆ ಕುರಿಗಳು ಕೋಲುಗಳನ್ನು ನೋಡುತ್ತಾ ಗರ್ಭಧರಿಸುವ ಹಾಗೆ ಕೋಲುಗಳನ್ನು ಕುರಿಗಳ ಕಣ್ಣೆದುರಾಗಿ ದೋಣಿಗಳಲ್ಲಿ ಇಡುತ್ತಿದ್ದನು.
Pindi kondoo wenye nguvu katika kundi walipopandana, Yakobo alilaza fito katika mabirika ya maji mbele ya macho ya kundi, ili kwamba washike mimba kati ya fito.
42 ಆದರೆ ಕುರಿಗಳು ಬಲಹೀನವಾಗಿದ್ದಾಗ, ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನವಾದವುಗಳು ಲಾಬಾನನಿಗೂ, ಬಲವಾದವುಗಳು ಯಾಕೋಬನಿಗೂ ಆದವು.
Lakini wakati waliodhaifu walipokuja, hakuweka fito mbele yao. Hivyo wanyama dhaifu wakawa wa Labani, na wenye nguvu wakawa wa Yakobo.
43 ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದ್ದರಿಂದ, ಬಹು ಕುರಿಗಳೂ ದಾಸದಾಸಿಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
Mtu huyo akastawi sana. Akawa na kundi kubwa la kondoo, wajakazi na wajoli, ngamia na punda.

< ಆದಿಕಾಂಡ 30 >