< ಆದಿಕಾಂಡ 33 >

1 ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ, ರಾಹೇಲಳಿಗೂ, ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ, ಅವರನ್ನು ಬೇರೆ ಬೇರೆ ಮಾಡಿದನು.
וַיִּשָּׂא יַעֲקֹב עֵינָיו וַיַּרְא וְהִנֵּה עֵשָׂו בָּא וְעִמּוֹ אַרְבַּע מֵאוֹת אִישׁ וַיַּחַץ אֶת־הַיְלָדִים עַל־לֵאָה וְעַל־רָחֵל וְעַל שְׁתֵּי הַשְּׁפָחֽוֹת׃
2 ದಾಸಿಯರನ್ನೂ, ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ; ಅವರ ಹಿಂದೆ ಲೇಯಳನ್ನೂ, ಆಕೆಯ ಮಕ್ಕಳನ್ನೂ; ಕಟ್ಟಕಡೆಯಲ್ಲಿ ರಾಹೇಲಳನ್ನೂ, ಯೋಸೇಫನನ್ನೂ ಇರಿಸಿದನು.
וַיָּשֶׂם אֶת־הַשְּׁפָחוֹת וְאֶת־יַלְדֵיהֶן רִֽאשֹׁנָה וְאֶת־לֵאָה וִֽילָדֶיהָ אַחֲרֹנִים וְאֶת־רָחֵל וְאֶת־יוֹסֵף אַחֲרֹנִֽים׃
3 ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವವರೆಗೆ ಏಳು ಸಾರಿ ನೆಲದವರೆಗೆ ಬಗ್ಗಿದನು.
וְהוּא עָבַר לִפְנֵיהֶם וַיִּשְׁתַּחוּ אַרְצָה שֶׁבַע פְּעָמִים עַד־גִּשְׁתּוֹ עַד־אָחִֽיו׃
4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.
וַיָּרׇץ עֵשָׂו לִקְרָאתוֹ וַֽיְחַבְּקֵהוּ וַיִּפֹּל עַל־צַוָּארָו וַיִּשָּׁקֵהוּ וַיִּבְכּֽוּ׃
5 ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.
וַיִּשָּׂא אֶת־עֵינָיו וַיַּרְא אֶת־הַנָּשִׁים וְאֶת־הַיְלָדִים וַיֹּאמֶר מִי־אֵלֶּה לָּךְ וַיֹּאמַר הַיְלָדִים אֲשֶׁר־חָנַן אֱלֹהִים אֶת־עַבְדֶּֽךָ׃
6 ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
וַתִּגַּשְׁןָ הַשְּׁפָחוֹת הֵנָּה וְיַלְדֵיהֶן וַתִּֽשְׁתַּחֲוֶֽיןָ׃
7 ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ, ರಾಹೇಲಳೂ ಬಂದು ಅಡ್ಡಬಿದ್ದರು.
וַתִּגַּשׁ גַּם־לֵאָה וִילָדֶיהָ וַיִּֽשְׁתַּחֲווּ וְאַחַר נִגַּשׁ יוֹסֵף וְרָחֵל וַיִּֽשְׁתַּחֲוֽוּ׃
8 ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.
וַיֹּאמֶר מִי לְךָ כׇּל־הַמַּחֲנֶה הַזֶּה אֲשֶׁר פָּגָשְׁתִּי וַיֹּאמֶר לִמְצֹא־חֵן בְּעֵינֵי אֲדֹנִֽי׃
9 ಅದಕ್ಕೆ ಏಸಾವನು, “ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ,” ಎಂದನು.
וַיֹּאמֶר עֵשָׂו יֶשׁ־לִי רָב אָחִי יְהִי לְךָ אֲשֶׁר־לָֽךְ׃
10 ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,
וַיֹּאמֶר יַעֲקֹב אַל־נָא אִם־נָא מָצָאתִי חֵן בְּעֵינֶיךָ וְלָקַחְתָּ מִנְחָתִי מִיָּדִי כִּי עַל־כֵּן רָאִיתִי פָנֶיךָ כִּרְאֹת פְּנֵי אֱלֹהִים וַתִּרְצֵֽנִי׃
11 ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.
קַח־נָא אֶת־בִּרְכָתִי אֲשֶׁר הֻבָאת לָךְ כִּֽי־חַנַּנִי אֱלֹהִים וְכִי יֶשׁ־לִי־כֹל וַיִּפְצַר־בּוֹ וַיִּקָּֽח׃
12 ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ನಿನ್ನ ಮುಂದೆ ಹೋಗುವೆನು,” ಎಂದನು.
וַיֹּאמֶר נִסְעָה וְנֵלֵכָה וְאֵלְכָה לְנֶגְדֶּֽךָ׃
13 ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.
וַיֹּאמֶר אֵלָיו אֲדֹנִי יֹדֵעַ כִּֽי־הַיְלָדִים רַכִּים וְהַצֹּאן וְהַבָּקָר עָלוֹת עָלָי וּדְפָקוּם יוֹם אֶחָד וָמֵתוּ כׇּל־הַצֹּֽאן׃
14 ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.
יַעֲבׇר־נָא אֲדֹנִי לִפְנֵי עַבְדּוֹ וַאֲנִי אֶֽתְנָהֲלָה לְאִטִּי לְרֶגֶל הַמְּלָאכָה אֲשֶׁר־לְפָנַי וּלְרֶגֶל הַיְלָדִים עַד אֲשֶׁר־אָבֹא אֶל־אֲדֹנִי שֵׂעִֽירָה׃
15 ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.
וַיֹּאמֶר עֵשָׂו אַצִּֽיגָה־נָּא עִמְּךָ מִן־הָעָם אֲשֶׁר אִתִּי וַיֹּאמֶר לָמָּה זֶּה אֶמְצָא־חֵן בְּעֵינֵי אֲדֹנִֽי׃
16 ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು.
וַיָּשׇׁב בַּיּוֹם הַהוּא עֵשָׂו לְדַרְכּוֹ שֵׂעִֽירָה׃
17 ಯಾಕೋಬನು ಪ್ರಯಾಣಮಾಡಿ, ಸುಕ್ಕೋತಿಗೆ ಹೋಗಿ, ಮನೆಯನ್ನು ಕಟ್ಟಿಸಿಕೊಂಡನು. ಇದಲ್ಲದೆ ತನ್ನ ಪಶುಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದ್ದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
וְיַעֲקֹב נָסַע סֻכֹּתָה וַיִּבֶן לוֹ בָּיִת וּלְמִקְנֵהוּ עָשָׂה סֻכֹּת עַל־כֵּן קָרָא שֵׁם־הַמָּקוֹם סֻכּֽוֹת׃
18 ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
וַיָּבֹא יַעֲקֹב שָׁלֵם עִיר שְׁכֶם אֲשֶׁר בְּאֶרֶץ כְּנַעַן בְּבֹאוֹ מִפַּדַּן אֲרָם וַיִּחַן אֶת־פְּנֵי הָעִֽיר׃
19 ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.
וַיִּקֶן אֶת־חֶלְקַת הַשָּׂדֶה אֲשֶׁר נָֽטָה־שָׁם אׇהֳלוֹ מִיַּד בְּנֵֽי־חֲמוֹר אֲבִי שְׁכֶם בְּמֵאָה קְשִׂיטָֽה׃
20 ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
וַיַּצֶּב־שָׁם מִזְבֵּחַ וַיִּקְרָא־לוֹ אֵל אֱלֹהֵי יִשְׂרָאֵֽל׃

< ಆದಿಕಾಂಡ 33 >