< ಆದಿಕಾಂಡ 34 >

1 ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವುದಕ್ಕಾಗಿ ಹೊರಗೆ ಹೋದಳು.
레아가 야곱에게 낳은 딸 디나가 그 땅 여자를 보러 나갔더니
2 ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.
히위 족속 중 하몰의 아들 그 땅 추장 세겜이 그를 보고 끌어들여 강간하여 욕되게 하고
3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಅವನು ಆ ಹುಡುಗಿಯನ್ನು ಪ್ರೀತಿಸಿ, ಆಕೆಯೊಂದಿಗೆ ಅನುರಾಗದಿಂದ ಮಾತನಾಡಿದನು.
그 마음이 깊이 야곱의 딸 디나에게 연련하며 그 소녀를 사랑하여 그의 마음을 말로 위로하고
4 ಶೆಕೆಮನು ತನ್ನ ತಂದೆ ಹಮೋರನಿಗೆ, “ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ಹೇಳು,” ಎಂದನು.
그 아비 하몰에게 청하여 가로되 이 소녀를 내 아내로 얻게 하여주소서 하였더라
5 ಯಾಕೋಬನು ತನ್ನ ಮಗಳಾದ ದೀನಳನ್ನು ಶೆಕೆಮನು ಕೆಡಿಸಿದ್ದಾನೆಂದು ಕೇಳಿದಾಗ, ಅವನ ಮಕ್ಕಳು ಅವನ ಪಶುಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವವರೆಗೆ ಯಾಕೋಬನು ಸುಮ್ಮನಿದ್ದನು.
야곱이 그 딸 디나를 그가 더럽혔다 함을 들었으나 자기 아들들이 들에서 목축하므로 그들의 돌아오기까지 잠잠하였고
6 ಆಗ ಶೆಕೆಮನ ತಂದೆ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
세겜의 아비 하몰은 야곱에게 말하러 왔으며
7 ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.
야곱의 아들들은 들에서 이를 듣고 돌아와서 사람 사람이 근심하고 심히 노하였으니 이는 세겜이 야곱의 딸을 강간하여 이스라엘에게 부끄러운 일 곧 행치 못할 일을 행하였음이더라
8 ಹಮೋರನು ಅವರಿಗೆ, “ನನ್ನ ಮಗ ಶೆಕೆಮನ ಮನಸ್ಸು ನಿಮ್ಮ ಮಗಳನ್ನು ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ, ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
하몰이 그들에게 이르되 내 아들 세겜이 마음으로 너희 딸을 연련하여 하니 원컨대 그를 세겜에게 주어 아내를 삼게 하라
9 ನೀವು ನಮ್ಮೊಂದಿಗೆ ಮದುವೆ ಸಂಬಂಧ ಮಾಡಿಕೊಳ್ಳಿರಿ. ನಿಮ್ಮ ಪುತ್ರಿಯರನ್ನು ನಮಗೆ ಕೊಡಿರಿ, ನಮ್ಮ ಪುತ್ರಿಯರನ್ನು ನೀವು ಮದುವೆಯಾಗಿರಿ.
너희가 우리와 통혼하여 너희 딸을 우리에게 주며 우리 딸을 너희가 취하고
10 ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು.
너희가 우리와 함께 거하되 땅이 너희 앞에 있으니 여기 머물러 매매하며 여기서 기업을 얻으라 하고
11 ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು.
세겜도 디나의 아비와 남형들에게 이르되 나로 너희에게 은혜를 입게 하라 너희가 내게 청구하는 것은 내가 수응하리니
12 ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು.
이 소녀만 내게 주어 아내가 되게 하라 아무리 큰 빙물과 예물을 청구할지라도 너희가 내게 말한 대로 수응하리라
13 ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.
야곱의 아들들이 세겜과 그 아비 하몰에게 속여 대답하였으니 이는 세겜이 그 누이 디나를 더럽혔음이라
14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿ ಇಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು. ಅದು ನಮಗೆ ಅವಮಾನ.
야곱의 아들들이 그들에게 말하되 우리는 그리하지 못하겠노라 할례 받지 아니한 사람에게 우리 누이를 줄 수 없노니 이는 우리의 수욕이 됨이니라
15 ಆದರೆ ನೀವು ನಮ್ಮ ಹಾಗಿದ್ದು, ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಂಡರೆ ಮಾತ್ರ ನಾವು ನಿಮಗೆ ಒಪ್ಪುವೆವು.
그런즉 이같이 하면 너희에게 허락하리라 만일 너희 중 남자가 다 할례를 받고 우리 같이 되면
16 ನಮ್ಮ ಪುತ್ರಿಯರನ್ನು ನಿಮಗೆ ಕೊಟ್ಟು, ನಿಮ್ಮ ಪುತ್ರಿಯರನ್ನು ತೆಗೆದುಕೊಳ್ಳುವೆವು. ಇದಲ್ಲದೆ ನಾವು ನಿಮ್ಮೊಂದಿಗೆ ವಾಸಮಾಡಿ, ಒಂದೇ ಜನಾಂಗವಾಗುವೆವು.
우리 딸을 너희에게 주며 너희 딸을 우리가 취하며 너희가 함께 거하여 한 민족이 되려니와
17 ಆದರೆ ನೀವು ನಮ್ಮ ಮಾತನ್ನು ಕೇಳದೆ, ಸುನ್ನತಿ ಮಾಡಿಸಿಕೊಳ್ಳದೆ ಹೋದರೆ, ನಮ್ಮ ಹುಡುಗಿಯನ್ನು ನಾವು ಕರೆದುಕೊಂಡು ಹೋಗಿಬಿಡುತ್ತೇವೆ,” ಎಂದು ಹೇಳಿದರು.
너희가 만일 우리를 듣지 아니하고 할례를 받지 아니하면 우리는 곧 우리 딸을 데리고 가리라
18 ಅವರ ಮಾತುಗಳು ಹಮೋರನಿಗೂ, ಅವನ ಮಗ ಶೆಕೆಮನಿಗೂ ಯೋಗ್ಯವಾಗಿ ಕಂಡವು.
그들의 말을 하몰과 그 아들 세겜이 좋게 여기므로
19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
이 소년이 그 일 행하기를 지체치 아니하였으니 그가 야곱의 딸을 사랑함이며 그는 그 아비 집에 가장 존귀함일러라
20 ಆಗ ಹಮೋರನೂ, ಅವನ ಮಗ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು, ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ,
하몰과 그 아들 세겜이 성문에 이르러 그 고을 사람에게 말하여 가로되
21 “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ದೇಶದಲ್ಲಿ ವಾಸಮಾಡಿ, ಅದರಲ್ಲಿ ವ್ಯಾಪಾರಮಾಡಲಿ. ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಪುತ್ರಿಯರನ್ನು ನಮಗೆ ಹೆಂಡತಿಯರನ್ನಾಗಿ ಮಾಡಿಕೊಳ್ಳೋಣ ಮತ್ತು ನಮ್ಮ ಪುತ್ರಿಯರನ್ನು ಅವರಿಗೆ ಕೊಡೋಣ.
이 사람들은 우리와 친목하고 이 땅은 넓어 그들을 용납할만하니 그들로 여기서 거주하며 매매하게 하고 우리가 그들의 딸들을 아내로 취하고 우리 딸들도 그들에게 주자
22 ಸುನ್ನತಿ ಮಾಡಿಸಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಮಾಡುವುದಕ್ಕೂ, ಒಂದೇ ಜನಾಂಗವಾಗುವುದಕ್ಕೂ ಒಪ್ಪುವರು.
그러나 우리 중에 모든 남자가 그들의 할례를 받음 같이 할례를 받아야 그 사람들이 우리와 함께 거하여 한 민족 되기를 허락할 것이라
23 ಅವರ ಮಂದೆಗಳೂ, ಅವರ ಸಂಪತ್ತೂ, ಅವರ ಎಲ್ಲಾ ಪಶುಗಳೂ ನಮ್ಮದಾಗುವುವು ಅಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ, ಅವರು ನಮ್ಮ ಸಂಗಡ ವಾಸಿಸುವರು,” ಎಂದರು.
그리하면 그들의 생축과 재산과 그 모든 짐승이 우리의 소유가 되지 않겠느냐 다만 그 말대로 하자 그리하면 그들이 우리와 함께 거하리라
24 ಆಗ ಪಟ್ಟಣದ ದ್ವಾರದಲ್ಲಿ ಹೋಗುವ ಗಂಡಸರೆಲ್ಲರೂ ಹಮೋರನೂ, ಅವನ ಮಗ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ, ಒಪ್ಪಿಕೊಂಡರು. ಹೀಗೆ ಪಟ್ಟಣದಲ್ಲಿದ್ದ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.
성문으로 출입하는 모든 자가 하몰과 그 아들 세겜의 말을 듣고 성문으로 출입하는 그 모든 남자가 할례를 받으니라
25 ಮೂರನೆಯ ದಿನದಲ್ಲಿ ಅವರಿಗೆ ನೋವುಂಟಾದಾಗ, ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ, ದೀನಳ ಸಹೋದರರಾದ ಸಿಮೆಯೋನನೂ, ಲೇವಿಯೂ ತಮ್ಮ ತಮ್ಮ ಖಡ್ಗಗಳನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು, ಗಂಡಸರನ್ನೆಲ್ಲಾ ಕೊಂದುಹಾಕಿದರು.
제삼일에 미쳐 그들이 고통할 때에 야곱의 두 아들 디나의 오라비 시므온과 레위가 각기 칼을 가지고 가서 부지 중에 성을 엄습하여 그 모든 남자를 죽이고
26 ಹಮೋರನನ್ನೂ, ಅವನ ಮಗನಾದ ಶೆಕೆಮನನ್ನೂ ಅವರು ಖಡ್ಗದಿಂದ ಕೊಂದುಹಾಕಿ, ದೀನಳನ್ನು ಶೆಕೆಮನ ಮನೆಯಿಂದ ಕರೆದುಕೊಂಡು ಹೊರಗೆ ಹೋದರು.
칼로 하몰과 그 아들 세겜을 죽이고 디나를 세겜의 집에서 데려 오고
27 ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.
야곱의 여러 아들이 그 시체있는 성으로 가서 노략하였으니 이는 그들이 그 누이를 더럽힌 연고라
28 ಪಟ್ಟಣದಲ್ಲಿಯೂ, ಹೊಲದಲ್ಲಿಯೂ ಇದ್ದ ಅವರ ಕುರಿ, ದನ, ಕತ್ತೆಗಳನ್ನು ತೆಗೆದುಕೊಂಡರು.
그들이 양과 소와 나귀와 그 성에 있는 것과 들에 있는 것과
29 ಅವರ ಎಲ್ಲಾ ಆಸ್ತಿಯನ್ನೂ, ಅವರ ಎಲ್ಲಾ ಚಿಕ್ಕ ಮಕ್ಕಳನ್ನೂ, ಅವರ ಹೆಂಡತಿಯರನ್ನೂ ಸೆರೆಹಿಡಿದು, ಮನೆಯಲ್ಲಿ ಇದ್ದದ್ದೆಲ್ಲವನ್ನೂ ಅವರು ಕೊಳ್ಳೆಹೊಡೆದರು.
그 모든 재물을 빼앗으며 그 자녀와 아내들을 사로잡고 집 속의 물건을 다 노략한지라
30 ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.
야곱이 시므온과 레위에게 이르되 너희가 내게 화를 끼쳐 나로 이 땅 사람 곧 가나안 족속과 브리스 족속에게 냄새를 내게 하였도다 나는 수가 적은즉 그들이 모여 나를 치고 나를 죽이리니 그리하면 나와 내 집이 멸망하리라
31 ಆದರೆ ಅವರು, “ಅವನು ನಮ್ಮ ತಂಗಿಯನ್ನು ವೇಶ್ಯೆಯಂತೆ ನಡೆಸಬಹುದೋ?” ಎಂದರು.
그들이 가로되 그가 우리 누이를 창녀 같이 대우함이 가하니이까

< ಆದಿಕಾಂಡ 34 >