< ಆದಿಕಾಂಡ 35 >

1 ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.
ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.
2 ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.
ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.
3 ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.
ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.
4 ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.
ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.
5 ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
6 ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು.
ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು.
7 ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
8 ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಮರಣಹೊಂದಿದಳು. ಬೇತೇಲಿನ ಕೆಳಗಿದ್ದ ಏಲಾ ಮರದ ಬುಡದಲ್ಲಿ ಆಕೆಯನ್ನು ಹೂಳಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಮರಣಹೊಂದಿದಳು. ಬೇತೇಲಿನ ಕೆಳಗಿದ್ದ ಏಲಾ ಮರದ ಬುಡದಲ್ಲಿ ಆಕೆಯನ್ನು ಹೂಳಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
9 ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ, ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ, ಅವನನ್ನು ಆಶೀರ್ವದಿಸಿದರು.
ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ, ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ, ಅವನನ್ನು ಆಶೀರ್ವದಿಸಿದರು.
10 ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.
ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.
11 ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.
ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.
12 ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.
ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.
13 ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದರು.
ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದರು.
14 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು.
15 ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
16 ಬೇತೇಲಿನಿಂದ ಅವರು ಪ್ರಯಾಣಮಾಡಿ, ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ, ರಾಹೇಲಳು ಪ್ರಸವವೇದನೆಯಿಂದ ಕಷ್ಟಪಟ್ಟಳು.
ಬೇತೇಲಿನಿಂದ ಅವರು ಪ್ರಯಾಣಮಾಡಿ, ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ, ರಾಹೇಲಳು ಪ್ರಸವವೇದನೆಯಿಂದ ಕಷ್ಟಪಟ್ಟಳು.
17 ಹೆರುವುದರಲ್ಲಿ ಆಕೆಯು ಕಷ್ಟಪಡುತ್ತಿದ್ದಾಗ, ಸೂಲಗಿತ್ತಿಯು ಅವಳಿಗೆ, “ನೀನು ಭಯಪಡಬೇಡ, ಈ ಮಗನನ್ನು ಸಹ ನೀನು ಪಡೆಯುವೆ,” ಎಂದಳು.
ಹೆರುವುದರಲ್ಲಿ ಆಕೆಯು ಕಷ್ಟಪಡುತ್ತಿದ್ದಾಗ, ಸೂಲಗಿತ್ತಿಯು ಅವಳಿಗೆ, “ನೀನು ಭಯಪಡಬೇಡ, ಈ ಮಗನನ್ನು ಸಹ ನೀನು ಪಡೆಯುವೆ,” ಎಂದಳು.
18 ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.
ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.
19 ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.
ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.
20 ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
21 ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು.
ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು.
22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.
23 ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.
ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.
24 ರಾಹೇಲಳ ಪುತ್ರರು: ಯೋಸೇಫ್ ಮತ್ತು ಬೆನ್ಯಾಮೀನ್.
ರಾಹೇಲಳ ಪುತ್ರರು: ಯೋಸೇಫ್ ಮತ್ತು ಬೆನ್ಯಾಮೀನ್.
25 ರಾಹೇಲಳ ದಾಸಿ ಬಿಲ್ಹಳ ಪುತ್ರರು: ದಾನ್, ನಫ್ತಾಲಿ.
ರಾಹೇಲಳ ದಾಸಿ ಬಿಲ್ಹಳ ಪುತ್ರರು: ದಾನ್, ನಫ್ತಾಲಿ.
26 ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.
ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.
27 ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.
ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.
28 ಆಗ ಇಸಾಕನು ನೂರ ಎಂಬತ್ತು ವರ್ಷದವನಾಗಿದ್ದನು.
ಆಗ ಇಸಾಕನು ನೂರ ಎಂಬತ್ತು ವರ್ಷದವನಾಗಿದ್ದನು.
29 ಇಸಾಕನು ಮುದುಕನಾಗಿಯೂ, ತುಂಬಾ ಆಯುಷ್ಯವುಳ್ಳವನಾಗಿಯೂ ಮರಣಹೊಂದಿ ತನ್ನ ಪಿತೃಗಳೊಂದಿಗೆ ಸೇರಿದನು. ಅವನ ಮಕ್ಕಳಾದ ಏಸಾವನೂ, ಯಾಕೋಬನೂ ಅವನನ್ನು ಸಮಾಧಿಮಾಡಿದರು.
ಇಸಾಕನು ಮುದುಕನಾಗಿಯೂ, ತುಂಬಾ ಆಯುಷ್ಯವುಳ್ಳವನಾಗಿಯೂ ಮರಣಹೊಂದಿ ತನ್ನ ಪಿತೃಗಳೊಂದಿಗೆ ಸೇರಿದನು. ಅವನ ಮಕ್ಕಳಾದ ಏಸಾವನೂ, ಯಾಕೋಬನೂ ಅವನನ್ನು ಸಮಾಧಿಮಾಡಿದರು.

< ಆದಿಕಾಂಡ 35 >