< ಆದಿಕಾಂಡ 37 >

1 ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.
וַיֵּשֶׁב יַעֲקֹב בְּאֶרֶץ מְגוּרֵי אָבִיו בְּאֶרֶץ כְּנָֽעַן׃
2 ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
אֵלֶּה ׀ תֹּלְדוֹת יַעֲקֹב יוֹסֵף בֶּן־שְׁבַֽע־עֶשְׂרֵה שָׁנָה הָיָה רֹעֶה אֶת־אֶחָיו בַּצֹּאן וְהוּא נַעַר אֶת־בְּנֵי בִלְהָה וְאֶת־בְּנֵי זִלְפָּה נְשֵׁי אָבִיו וַיָּבֵא יוֹסֵף אֶת־דִּבָּתָם רָעָה אֶל־אֲבִיהֶֽם׃
3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.
וְיִשְׂרָאֵל אָהַב אֶת־יוֹסֵף מִכָּל־בָּנָיו כִּֽי־בֶן־זְקֻנִים הוּא לוֹ וְעָשָׂה לוֹ כְּתֹנֶת פַּסִּֽים׃
4 ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು.
וַיִּרְאוּ אֶחָיו כִּֽי־אֹתוֹ אָהַב אֲבִיהֶם מִכָּל־אֶחָיו וַֽיִּשְׂנְאוּ אֹתוֹ וְלֹא יָכְלוּ דַּבְּרוֹ לְשָׁלֹֽם׃
5 ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
וַיַּחֲלֹם יוֹסֵף חֲלוֹם וַיַּגֵּד לְאֶחָיו וַיּוֹסִפוּ עוֹד שְׂנֹא אֹתֽוֹ׃
6 ಅವನು ಅವರಿಗೆ, “ನಾನು ಕಂಡ ಈ ಕನಸನ್ನು ಹೇಳುತ್ತೇನೆ ಕೇಳಿರಿ.
וַיֹּאמֶר אֲלֵיהֶם שִׁמְעוּ־נָא הַחֲלוֹם הַזֶּה אֲשֶׁר חָלָֽמְתִּי׃
7 ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.
וְהִנֵּה אֲנַחְנוּ מְאַלְּמִים אֲלֻמִּים בְּתוֹךְ הַשָּׂדֶה וְהִנֵּה קָמָה אֲלֻמָּתִי וְגַם־נִצָּבָה וְהִנֵּה תְסֻבֶּינָה אֲלֻמֹּתֵיכֶם וַתִּֽשְׁתַּחֲוֶיןָ לַאֲלֻמָּתִֽי׃
8 ಆಗ ಅವನ ಸಹೋದರರು ಅವನಿಗೆ, “ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವೆಯೋ? ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ?” ಎಂದು ಹೇಳಿ, ಅವನ ಕನಸು ಮತ್ತು ಅವನ ಮಾತುಗಳಿಗೆ ಅವನನ್ನು ಮತ್ತಷ್ಟೂ ದ್ವೇಷಿಸಿದರು.
וַיֹּאמְרוּ לוֹ אֶחָיו הֲמָלֹךְ תִּמְלֹךְ עָלֵינוּ אִם־מָשׁוֹל תִּמְשֹׁל בָּנוּ וַיּוֹסִפוּ עוֹד שְׂנֹא אֹתוֹ עַל־חֲלֹמֹתָיו וְעַל־דְּבָרָֽיו׃
9 ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.
וַיַּחֲלֹם עוֹד חֲלוֹם אַחֵר וַיְסַפֵּר אֹתוֹ לְאֶחָיו וַיֹּאמֶר הִנֵּה חָלַמְתִּֽי חֲלוֹם עוֹד וְהִנֵּה הַשֶּׁמֶשׁ וְהַיָּרֵחַ וְאַחַד עָשָׂר כּֽוֹכָבִים מִֽשְׁתַּחֲוִים לִֽי׃
10 ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ತಿಳಿಸಿದಾಗ, ಅವನ ತಂದೆಯು ಅವನನ್ನು ಗದರಿಸಿ, “ನೀನು ಕಂಡ ಈ ಕನಸು ಏನು? ನಾನು, ನಿನ್ನ ತಾಯಿ, ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬರಬೇಕೋ?” ಎಂದನು.
וַיְסַפֵּר אֶל־אָבִיו וְאֶל־אֶחָיו וַיִּגְעַר־בּוֹ אָבִיו וַיֹּאמֶר לוֹ מָה הַחֲלוֹם הַזֶּה אֲשֶׁר חָלָמְתָּ הֲבוֹא נָבוֹא אֲנִי וְאִמְּךָ וְאַחֶיךָ לְהִשְׁתַּחֲוֺת לְךָ אָֽרְצָה׃
11 ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
וַיְקַנְאוּ־בוֹ אֶחָיו וְאָבִיו שָׁמַר אֶת־הַדָּבָֽר׃
12 ಅವನ ಸಹೋದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವುದಕ್ಕೆ ಹೋದರು.
וַיֵּלְכוּ אֶחָיו לִרְעוֹת אֶת־צֹאן אֲבִיהֶם בִּשְׁכֶֽם׃
13 ಆದ್ದರಿಂದ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಸಹೋದರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ. ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು,” ಎಂದನು. ಅದಕ್ಕೆ ಅವನು, “ಆಗಲಿ ಹೋಗುತ್ತೇನೆ,” ಎಂದನು.
וַיֹּאמֶר יִשְׂרָאֵל אֶל־יוֹסֵף הֲלוֹא אַחֶיךָ רֹעִים בִּשְׁכֶם לְכָה וְאֶשְׁלָחֲךָ אֲלֵיהֶם וַיֹּאמֶר לוֹ הִנֵּֽנִי׃
14 ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,
וַיֹּאמֶר לוֹ לֶךְ־נָא רְאֵה אֶת־שְׁלוֹם אַחֶיךָ וְאֶת־שְׁלוֹם הַצֹּאן וַהֲשִׁבֵנִי דָּבָר וַיִּשְׁלָחֵהוּ מֵעֵמֶק חֶבְרוֹן וַיָּבֹא שְׁכֶֽמָה׃
15 ಒಬ್ಬಾನೊಬ್ಬ ಮನುಷ್ಯನು ಯೋಸೇಫನು ಹೊಲದಲ್ಲಿ ಅಲೆದಾಡುವುದನ್ನು ಕಂಡು ಅವನಿಗೆ, “ನೀನು ಏನು ಹುಡುಕುತ್ತಿದ್ದೀ?” ಎಂದು ಕೇಳಿದನು.
וַיִּמְצָאֵהוּ אִישׁ וְהִנֵּה תֹעֶה בַּשָּׂדֶה וַיִּשְׁאָלֵהוּ הָאִישׁ לֵאמֹר מַה־תְּבַקֵּֽשׁ׃
16 ಅದಕ್ಕೆ ಅವನು, “ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ, ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆಂದು ದಯವಿಟ್ಟು ನನಗೆ ಹೇಳು,” ಎಂದನು.
וַיֹּאמֶר אֶת־אַחַי אָנֹכִי מְבַקֵּשׁ הַגִּֽידָה־נָּא לִי אֵיפֹה הֵם רֹעִֽים׃
17 ಆ ಮನುಷ್ಯನು, “ಅವರು ಇಲ್ಲಿಂದ ಹೊರಟು ಹೋದರು. ಅವರು, ‘ನಾವು ದೋತಾನಿಗೆ ಹೋಗೋಣ,’ ಎಂದು ಮಾತಾಡುವದನ್ನು ನಾನು ಕೇಳಿಸಿಕೊಂಡೆ,” ಎಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡುಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
וַיֹּאמֶר הָאִישׁ נָסְעוּ מִזֶּה כִּי שָׁמַעְתִּי אֹֽמְרִים נֵלְכָה דֹּתָיְנָה וַיֵּלֶךְ יוֹסֵף אַחַר אֶחָיו וַיִּמְצָאֵם בְּדֹתָֽן׃
18 ಅವರು ದೂರದಿಂದ ಅವನನ್ನು ನೋಡಿದಾಗ, ಅವನು ಸಮೀಪಕ್ಕೆ ಬರುವ ಮುಂಚೆಯೇ ಅವನನ್ನು ಕೊಂದುಹಾಕಬೇಕೆಂದು ಅವನಿಗೆ ವಿರೋಧವಾಗಿ ಒಳಸಂಚು ಮಾಡಿಕೊಂಡರು.
וַיִּרְאוּ אֹתוֹ מֵרָחֹק וּבְטֶרֶם יִקְרַב אֲלֵיהֶם וַיִּֽתְנַכְּלוּ אֹתוֹ לַהֲמִיתֽוֹ׃
19 ಅವರು, “ಇಗೋ, ಈ ಕನಸುಗಾರ ಬರುತ್ತಿದ್ದಾನೆ,
וַיֹּאמְרוּ אִישׁ אֶל־אָחִיו הִנֵּה בַּעַל הַחֲלֹמוֹת הַלָּזֶה בָּֽא׃
20 ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
וְעַתָּה ׀ לְכוּ וְנַֽהַרְגֵהוּ וְנַשְׁלִכֵהוּ בְּאַחַד הַבֹּרוֹת וְאָמַרְנוּ חַיָּה רָעָה אֲכָלָתְהוּ וְנִרְאֶה מַה־יִּהְיוּ חֲלֹמֹתָֽיו׃
21 ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು.
וַיִּשְׁמַע רְאוּבֵן וַיַּצִּלֵהוּ מִיָּדָם וַיֹּאמֶר לֹא נַכֶּנּוּ נָֽפֶשׁ׃
22 ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ, ತನ್ನ ತಂದೆಯ ಬಳಿಗೆ ತಿರುಗಿ ಕರೆದುಕೊಂಡುಹೋಗುವ ಉದ್ದೇಶದಿಂದ ಅವರಿಗೆ, “ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ಗುಂಡಿಯಲ್ಲಿ ಹಾಕಿರಿ, ಆದರೆ ಅವನ ಮೇಲೆ ಕೈಹಾಕಬೇಡಿರಿ,” ಎಂದನು.
וַיֹּאמֶר אֲלֵהֶם ׀ רְאוּבֵן אַל־תִּשְׁפְּכוּ־דָם הַשְׁלִיכוּ אֹתוֹ אֶל־הַבּוֹר הַזֶּה אֲשֶׁר בַּמִּדְבָּר וְיָד אַל־תִּשְׁלְחוּ־בוֹ לְמַעַן הַצִּיל אֹתוֹ מִיָּדָם לַהֲשִׁיבוֹ אֶל־אָבִֽיו׃
23 ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ, ಅವರು ಯೋಸೇಫನ ಮೇಲಿದ್ದ ಬಣ್ಣಗಳ ಅಂಗಿಯನ್ನು ತೆಗೆದರು.
וֽ͏ַיְהִי כּֽ͏ַאֲשֶׁר־בָּא יוֹסֵף אֶל־אֶחָיו וַיַּפְשִׁיטוּ אֶת־יוֹסֵף אֶת־כֻּתָּנְתּוֹ אֶת־כְּתֹנֶת הַפַּסִּים אֲשֶׁר עָלָֽיו׃
24 ಅವನನ್ನು ತೆಗೆದುಕೊಂಡು ಗುಂಡಿಯಲ್ಲಿ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.
וַיִּקָּחֻהוּ וַיַּשְׁלִכוּ אֹתוֹ הַבֹּרָה וְהַבּוֹר רֵק אֵין בּוֹ מָֽיִם׃
25 ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.
וַיֵּשְׁבוּ לֶֽאֱכָל־לֶחֶם וַיִּשְׂאוּ עֵֽינֵיהֶם וַיִּרְאוּ וְהִנֵּה אֹרְחַת יִשְׁמְעֵאלִים בָּאָה מִגִּלְעָד וּגְמַלֵּיהֶם נֹֽשְׂאִים נְכֹאת וּצְרִי וָלֹט הוֹלְכִים לְהוֹרִיד מִצְרָֽיְמָה׃
26 ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು?
וַיֹּאמֶר יְהוּדָה אֶל־אֶחָיו מַה־בֶּצַע כִּי נַהֲרֹג אֶת־אָחִינוּ וְכִסִּינוּ אֶת־דָּמֽוֹ׃
27 ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
לְכוּ וְנִמְכְּרֶנּוּ לַיִּשְׁמְעֵאלִים וְיָדֵנוּ אַל־תְּהִי־בוֹ כִּֽי־אָחִינוּ בְשָׂרֵנוּ הוּא וַֽיִּשְׁמְעוּ אֶחָֽיו׃
28 ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.
וַיַּֽעַבְרוּ אֲנָשִׁים מִדְיָנִים סֹֽחֲרִים וַֽיִּמְשְׁכוּ וַיַּֽעֲלוּ אֶת־יוֹסֵף מִן־הַבּוֹר וַיִּמְכְּרוּ אֶת־יוֹסֵף לַיִּשְׁמְעֵאלִים בְּעֶשְׂרִים כָּסֶף וַיָּבִיאוּ אֶת־יוֹסֵף מִצְרָֽיְמָה׃
29 ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
וַיָּשָׁב רְאוּבֵן אֶל־הַבּוֹר וְהִנֵּה אֵין־יוֹסֵף בַּבּוֹר וַיִּקְרַע אֶת־בְּגָדָֽיו׃
30 ಅವನು ತನ್ನ ಸಹೋದರರ ಬಳಿಗೆ ತಿರುಗಿ ಹೋಗಿ, “ಬಾಲಕನು ಅಲ್ಲಿ ಇಲ್ಲವಲ್ಲಾ, ನಾನು ಎಲ್ಲಿಗೆ ಹೋಗಲಿ?” ಎಂದನು.
וַיָּשָׁב אֶל־אֶחָיו וַיֹּאמַר הַיֶּלֶד אֵינֶנּוּ וַאֲנִי אָנָה אֲנִי־בָֽא׃
31 ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ,
וַיִּקְחוּ אֶת־כְּתֹנֶת יוֹסֵף וַֽיִּשְׁחֲטוּ שְׂעִיר עִזִּים וַיִּטְבְּלוּ אֶת־הַכֻּתֹּנֶת בַּדָּֽם׃
32 ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.
וַֽיְשַׁלְּחוּ אֶת־כְּתֹנֶת הַפַּסִּים וַיָּבִיאוּ אֶל־אֲבִיהֶם וַיֹּאמְרוּ זֹאת מָצָאנוּ הַכֶּר־נָא הַכְּתֹנֶת בִּנְךָ הִוא אִם־לֹֽא׃
33 ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.
וַיַּכִּירָהּ וַיֹּאמֶר כְּתֹנֶת בְּנִי חַיָּה רָעָה אֲכָלָתְהוּ טָרֹף טֹרַף יוֹסֵֽף׃
34 ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
וַיִּקְרַע יַעֲקֹב שִׂמְלֹתָיו וַיָּשֶׂם שַׂק בְּמָתְנָיו וַיִּתְאַבֵּל עַל־בְּנוֹ יָמִים רַבִּֽים׃
35 ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು. (Sheol h7585)
וַיָּקֻמוּ כָל־בָּנָיו וְכָל־בְּנֹתָיו לְנַחֲמוֹ וַיְמָאֵן לְהִתְנַחֵם וַיֹּאמֶר כִּֽי־אֵרֵד אֶל־בְּנִי אָבֵל שְׁאֹלָה וַיֵּבְךְּ אֹתוֹ אָבִֽיו׃ (Sheol h7585)
36 ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.
וְהַמְּדָנִים מָכְרוּ אֹתוֹ אֶל־מִצְרָיִם לְפֽוֹטִיפַר סְרִיס פַּרְעֹה שַׂר הַטַּבָּחִֽים׃

< ಆದಿಕಾಂಡ 37 >