< ಆದಿಕಾಂಡ 4 >

1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, “ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ,” ಎಂದು ಹೇಳಿದಳು.
וְהָאָדָם יָדַע אֶת־חַוָּה אִשְׁתּוֹ וַתַּהַר וַתֵּלֶד אֶת־קַיִן וַתֹּאמֶר קָנִיתִי אִישׁ אֶת־יְהֹוָֽה׃
2 ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.
וַתֹּסֶף לָלֶדֶת אֶת־אָחִיו אֶת־הָבֶל וַֽיְהִי־הֶבֶל רֹעֵה צֹאן וְקַיִן הָיָה עֹבֵד אֲדָמָֽה׃
3 ಸ್ವಲ್ಪ ಕಾಲದ ತರುವಾಯ, ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು, ಯೆಹೋವ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದನು.
וַֽיְהִי מִקֵּץ יָמִים וַיָּבֵא קַיִן מִפְּרִי הָֽאֲדָמָה מִנְחָה לַֽיהֹוָֽה׃
4 ಹೇಬೆಲನು ಸಹ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನೂ ಅವುಗಳ ಕೊಬ್ಬನ್ನೂ ತಂದನು. ಯೆಹೋವ ದೇವರು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು.
וְהֶבֶל הֵבִיא גַם־הוּא מִבְּכֹרוֹת צֹאנוֹ וּמֵֽחֶלְבֵהֶן וַיִּשַׁע יְהֹוָה אֶל־הֶבֶל וְאֶל־מִנְחָתֽוֹ׃
5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ದೇವರು ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು. ಅವನ ಮುಖವು ಬಾಡಿತು.
וְאֶל־קַיִן וְאֶל־מִנְחָתוֹ לֹא שָׁעָה וַיִּחַר לְקַיִן מְאֹד וַֽיִּפְּלוּ פָּנָֽיו׃
6 ಆಗ ಯೆಹೋವ ದೇವರು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? ಏಕೆ ನಿನ್ನ ಮುಖವು ಬಾಡಿದೆ?
וַיֹּאמֶר יְהֹוָה אֶל־קָיִן לָמָּה חָרָה לָךְ וְלָמָּה נָפְלוּ פָנֶֽיךָ׃
7 ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.
הֲלוֹא אִם־תֵּיטִיב שְׂאֵת וְאִם לֹא תֵיטִיב לַפֶּתַח חַטָּאת רֹבֵץ וְאֵלֶיךָ תְּשׁוּקָתוֹ וְאַתָּה תִּמְשׇׁל־בּֽוֹ׃
8 ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.
וַיֹּאמֶר קַיִן אֶל־הֶבֶל אָחִיו וַֽיְהִי בִּהְיוֹתָם בַּשָּׂדֶה וַיָּקׇם קַיִן אֶל־הֶבֶל אָחִיו וַיַּהַרְגֵֽהוּ׃
9 ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.
וַיֹּאמֶר יְהֹוָה אֶל־קַיִן אֵי הֶבֶל אָחִיךָ וַיֹּאמֶר לֹא יָדַעְתִּי הֲשֹׁמֵר אָחִי אָנֹֽכִי׃
10 ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.
וַיֹּאמֶר מֶה עָשִׂיתָ קוֹל דְּמֵי אָחִיךָ צֹעֲקִים אֵלַי מִן־הָֽאֲדָמָֽה׃
11 ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.
וְעַתָּה אָרוּר אָתָּה מִן־הָֽאֲדָמָה אֲשֶׁר פָּצְתָה אֶת־פִּיהָ לָקַחַת אֶת־דְּמֵי אָחִיךָ מִיָּדֶֽךָ׃
12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.
כִּי תַֽעֲבֹד אֶת־הָאֲדָמָה לֹֽא־תֹסֵף תֵּת־כֹּחָהּ לָךְ נָע וָנָד תִּֽהְיֶה בָאָֽרֶץ׃
13 ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.
וַיֹּאמֶר קַיִן אֶל־יְהֹוָה גָּדוֹל עֲוֺנִי מִנְּשֹֽׂא׃
14 ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.
הֵן גֵּרַשְׁתָּ אֹתִי הַיּוֹם מֵעַל פְּנֵי הָֽאֲדָמָה וּמִפָּנֶיךָ אֶסָּתֵר וְהָיִיתִי נָע וָנָד בָּאָרֶץ וְהָיָה כׇל־מֹצְאִי יַֽהַרְגֵֽנִי׃
15 ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.
וַיֹּאמֶר לוֹ יְהֹוָה לָכֵן כׇּל־הֹרֵג קַיִן שִׁבְעָתַיִם יֻקָּם וַיָּשֶׂם יְהֹוָה לְקַיִן אוֹת לְבִלְתִּי הַכּוֹת־אֹתוֹ כׇּל־מֹצְאֽוֹ׃
16 ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು.
וַיֵּצֵא קַיִן מִלִּפְנֵי יְהֹוָה וַיֵּשֶׁב בְּאֶֽרֶץ־נוֹד קִדְמַת־עֵֽדֶן׃
17 ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.
וַיֵּדַע קַיִן אֶת־אִשְׁתּוֹ וַתַּהַר וַתֵּלֶד אֶת־חֲנוֹךְ וַֽיְהִי בֹּנֶה עִיר וַיִּקְרָא שֵׁם הָעִיר כְּשֵׁם בְּנוֹ חֲנֽוֹךְ׃
18 ಹನೋಕನಿಂದ ಈರಾದನು ಹುಟ್ಟಿದನು. ಈರಾದನಿಂದ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಂದ ಮೆತೂಷಾಯೇಲನು ಹುಟ್ಟಿದನು. ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
וַיִּוָּלֵד לַֽחֲנוֹךְ אֶת־עִירָד וְעִירָד יָלַד אֶת־מְחֽוּיָאֵל וּמְחִיָּיאֵל יָלַד אֶת־מְתוּשָׁאֵל וּמְתוּשָׁאֵל יָלַד אֶת־לָֽמֶךְ׃
19 ಲೆಮೆಕನು ಇಬ್ಬರು ಸ್ತ್ರೀಯರನ್ನು ಮದುವೆಯಾದನು. ಒಬ್ಬಳ ಹೆಸರು ಆದಾ ಮತ್ತೊಬ್ಬಳ ಹೆಸರು ಚಿಲ್ಲಾ.
וַיִּֽקַּֽח־לוֹ לֶמֶךְ שְׁתֵּי נָשִׁים שֵׁם הָֽאַחַת עָדָה וְשֵׁם הַשֵּׁנִית צִלָּֽה׃
20 ಆದಾಳು ಯಾಬಾಲನನ್ನು ಹೆತ್ತಳು. ಪಶುಗಳನ್ನು ಸಾಕುತ್ತಾ, ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.
וַתֵּלֶד עָדָה אֶת־יָבָל הוּא הָיָה אֲבִי יֹשֵׁב אֹהֶל וּמִקְנֶֽה׃
21 ಇವನ ತಮ್ಮನ ಹೆಸರು ಯೂಬಾಲನು. ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರ ಮೂಲಪುರುಷನು.
וְשֵׁם אָחִיו יוּבָל הוּא הָיָה אֲבִי כׇּל־תֹּפֵשׂ כִּנּוֹר וְעוּגָֽב׃
22 ಚಿಲ್ಲಾ ತೂಬಲ್ ಕಾಯಿನನನ್ನು ಪಡೆದಳು. ಅವನು ಕಂಚು ಮತ್ತು ಕಬ್ಬಿಣದ ಆಯುಧಗಳನ್ನು ಮಾಡುವವನಾಗಿದ್ದನು. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
וְצִלָּה גַם־הִוא יָֽלְדָה אֶת־תּוּבַל קַיִן לֹטֵשׁ כׇּל־חֹרֵשׁ נְחֹשֶׁת וּבַרְזֶל וַֽאֲחוֹת תּֽוּבַל־קַיִן נַֽעֲמָֽה׃
23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.
וַיֹּאמֶר לֶמֶךְ לְנָשָׁיו עָדָה וְצִלָּה שְׁמַעַן קוֹלִי נְשֵׁי לֶמֶךְ הַאְזֵנָּה אִמְרָתִי כִּי אִישׁ הָרַגְתִּי לְפִצְעִי וְיֶלֶד לְחַבֻּרָתִֽי׃
24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.”
כִּי שִׁבְעָתַיִם יֻקַּם־קָיִן וְלֶמֶךְ שִׁבְעִים וְשִׁבְעָֽה׃
25 ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು,” ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು.
וַיֵּדַע אָדָם עוֹד אֶת־אִשְׁתּוֹ וַתֵּלֶד בֵּן וַתִּקְרָא אֶת־שְׁמוֹ שֵׁת כִּי שָֽׁת־לִי אֱלֹהִים זֶרַע אַחֵר תַּחַת הֶבֶל כִּי הֲרָגוֹ קָֽיִן׃
26 ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.
וּלְשֵׁת גַּם־הוּא יֻלַּד־בֵּן וַיִּקְרָא אֶת־שְׁמוֹ אֱנוֹשׁ אָז הוּחַל לִקְרֹא בְּשֵׁם יְהֹוָֽה׃

< ಆದಿಕಾಂಡ 4 >