< ಆದಿಕಾಂಡ 40 >

1 ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.
مدتی پس از زندانی شدن یوسف، رئیس ساقیان و رئیس نانوایان فرعون به سَروَر خود، پادشاه مصر، خیانت ورزیدند.
2 ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು,
فرعون بر این دو خدمتگزار خود خشمگین شده،
3 ಅವರನ್ನು ಮೈಗಾವಲಿನವರ ದಳಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸ್ಥಳವಾಗಿತ್ತು.
آنها را به زندان رئیس نگهبانان دربار که یوسف در آنجا بود، انداخت.
4 ಮೈಗಾವಲಿನ ದಳಪತಿಯು ಅವರನ್ನೂ ನೋಡಿಕೊಳ್ಳುವದಕ್ಕೆ ಯೋಸೇಫನನ್ನು ನೇಮಿಸಿದ್ದರಿಂದ, ಅವನು ಅವರನ್ನು ನೋಡಿಕೊಳ್ಳುತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
آنها مدت طولانی در زندان ماندند و رئیس نگهبانان یوسف را به خدمت آنها گماشت.
5 ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು.
یک شب هر دو آنها خواب دیدند.
6 ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ, ಅವರು ಚಿಂತೆಯುಳ್ಳವರಾಗಿದ್ದರು.
صبح روز بعد، یوسف دید که آنها ناراحت هستند.
7 ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು.
پس، از آنها که همراه او در زندان سَروَرش بودند، پرسید: «چرا امروز غمگین هستید؟»
8 ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.
گفتند: «دیشب ما هر دو خواب دیدیم و کسی نیست که آن را تعبیر کند.» یوسف گفت: «تعبیر کردن خوابها کار خداست. به من بگویید چه خوابهایی دیده‌اید؟»
9 ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುತ್ತಾ, “ಕನಸಿನಲ್ಲಿ ನನ್ನ ಮುಂದೆ ದ್ರಾಕ್ಷಿಬಳ್ಳಿ ಇತ್ತು.
اول رئیس ساقیان خوابی را که دیده بود، برای یوسف تعریف کرد: «دیشب در خواب درخت انگوری را دیدم که سه شاخه داشت. ناگاه شاخه‌ها شکفتند و خوشه‌های زیادی انگور رسیده دادند.
10 ಆ ದ್ರಾಕ್ಷಿಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ, ಹೂವು ಅರಳಿ, ಅದರ ಗೊಂಚಲುಗಳು ಹಣ್ಣಾದವು.
11 ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ, ನಾನು ಆ ದ್ರಾಕ್ಷಿಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ, ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು,” ಎಂದನು.
من جام شراب فرعون را در دست داشتم، پس خوشه‌های انگور را چیده، در جام فشردم و به او دادم تا بنوشد.»
12 ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
یوسف گفت: «تعبیر خواب تو این است: منظور از سه شاخه، سه روز است.
13 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.
تا سه روز دیگر فرعون تو را از زندان آزاد کرده، دوباره ساقی خود خواهد ساخت.
14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು.
پس خواهش می‌کنم وقتی دوباره مورد لطف او قرار گرفتی، مرا به یاد آور و سرگذشتم را برای فرعون شرح بده و از او خواهش کن تا مرا از این زندان آزاد کند.
15 ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.
زیرا مرا که عبرانی هستم از وطنم دزدیده، به اینجا آورده‌اند. حالا هم بدون آنکه مرتکب جرمی شده باشم، مرا در زندان انداخته‌اند.»
16 ಯೋಸೇಫನು ಒಳ್ಳೆಯ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ತಿಳಿದಾಗ, ಅವನು ಯೋಸೇಫನಿಗೆ, “ನನ್ನ ಕನಸಿನಲ್ಲಿಯೂ ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.
وقتی رئیس نانوایان دید که تعبیر خواب دوستش خیر بود، او نیز خواب خود را برای یوسف بیان کرده، گفت: «در خواب دیدم که سه سبد پر از نان روی سر خود دارم.
17 ಮೇಲಿದ್ದ ಪುಟ್ಟಿಯಲ್ಲಿ ಫರೋಹನಿಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿದ್ದ ಅದನ್ನು ಪಕ್ಷಿಗಳು ತಿಂದವು,” ಎಂದನು.
در سبد بالایی چندین نوع نان برای فرعون گذاشته بودم، اما پرندگان آمده آنها را خوردند.»
18 ಅದಕ್ಕೆ ಯೋಸೇಫನು ಉತ್ತರವಾಗಿ, “ಅದರ ಅರ್ಥವು ಇದೇ: ಆ ಮೂರು ಪುಟ್ಟಿಗಳು, ಮೂರು ದಿನಗಳು.
یوسف به او گفت: «تعبیر خواب این است: سه سبد، سه روز است.
19 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.
سه روز دیگر فرعون سرت را از تنت جدا کرده، بدنت را به دار می‌آویزد و پرندگان آمده گوشت بدنت را خواهند خورد.»
20 ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೂ ಔತಣವನ್ನು ಮಾಡಿಸಿ, ಮುಖ್ಯ ಪಾನದಾಯಕನನ್ನು ಮತ್ತು ಮುಖ್ಯ ರೊಟ್ಟಿಗಾರನನ್ನು ತನ್ನ ಅಧಿಕಾರಿಗಳ ಮುಂದೆ ನಿಲ್ಲಿಸಿದನು.
سه روز بعد، جشن تولد فرعون بود و به همین مناسبت ضیافتی برای مقامات مملکتی ترتیب داد. او فرستاد تا رئیس ساقیان و رئیس نانوایان را از زندان به حضورش آورند.
21 ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು.
سپس رئیس ساقیان را به کار سابقش گمارد،
22 ಆದರೆ ಮುಖ್ಯ ರೊಟ್ಟಿಗಾರನನ್ನು ಗಲ್ಲಿಗೇರಿಸಿದನು. ಹೀಗೆ ಯೋಸೇಫನು ಹೇಳಿದ ಹೇಳಿದಂತೆಯೇ ಆಯಿತು.
ولی رئیس نانوایان را به دار آویخت، همان‌طور که یوسف گفته بود.
23 ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
اما رئیس ساقیان یوسف را به یاد نیاورد.

< ಆದಿಕಾಂಡ 40 >