< ಆದಿಕಾಂಡ 41 >

1 ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.
וַיְהִי מִקֵּץ שְׁנָתַיִם יָמִים וּפַרְעֹה חֹלֵם וְהִנֵּה עֹמֵד עַל־הַיְאֹֽר׃
2 ಲಕ್ಷಣವಾದ ಮತ್ತು ಕೊಬ್ಬಿದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
וְהִנֵּה מִן־הַיְאֹר עֹלֹת שֶׁבַע פָּרוֹת יְפוֹת מַרְאֶה וּבְרִיאֹת בָּשָׂר וַתִּרְעֶינָה בָּאָֽחוּ׃
3 ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು.
וְהִנֵּה שֶׁבַע פָּרוֹת אֲחֵרוֹת עֹלוֹת אַחֲרֵיהֶן מִן־הַיְאֹר רָעוֹת מַרְאֶה וְדַקּוֹת בָּשָׂר וַֽתַּעֲמֹדְנָה אֵצֶל הַפָּרוֹת עַל־שְׂפַת הַיְאֹֽר׃
4 ಆ ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನು ಎಚ್ಚೆತ್ತನು.
וַתֹּאכַלְנָה הַפָּרוֹת רָעוֹת הַמַּרְאֶה וְדַקֹּת הַבָּשָׂר אֵת שֶׁבַע הַפָּרוֹת יְפֹת הַמַּרְאֶה וְהַבְּרִיאֹת וַיִּיקַץ פַּרְעֹֽה׃
5 ಅವನು ತಿರುಗಿ ನಿದ್ರೆ ಮಾಡಿದಾಗ, ಎರಡನೆಯ ಸಾರಿ ಕನಸನ್ನು ಕಂಡನು. ಒಂದೇ ದಂಟಿನಲ್ಲಿ ಏಳು ಒಳ್ಳೆಯ ಪುಷ್ಟಿಯಾದ ತೆನೆಗಳು ಎದ್ದವು.
וַיִּישָׁן וַֽיַּחֲלֹם שֵׁנִית וְהִנֵּה ׀ שֶׁבַע שִׁבֳּלִים עֹלוֹת בְּקָנֶה אֶחָד בְּרִיאוֹת וְטֹבֽוֹת׃
6 ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.
וְהִנֵּה שֶׁבַע שִׁבֳּלִים דַּקּוֹת וּשְׁדוּפֹת קָדִים צֹמְחוֹת אַחֲרֵיהֶֽן׃
7 ಆ ಬತ್ತಿ ಹೋಗಿದ್ದ ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿ ಬಿಟ್ಟವು. ಫರೋಹನು ಎಚ್ಚೆತ್ತಾಗ ಅದು ಕನಸಾಗಿತ್ತು.
וַתִּבְלַעְנָה הַשִּׁבֳּלִים הַדַּקּוֹת אֵת שֶׁבַע הַֽשִּׁבֳּלִים הַבְּרִיאוֹת וְהַמְּלֵאוֹת וַיִּיקַץ פַּרְעֹה וְהִנֵּה חֲלֽוֹם׃
8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
וַיְהִי בַבֹּקֶר וַתִּפָּעֶם רוּחוֹ וַיִּשְׁלַח וַיִּקְרָא אֶת־כׇּל־חַרְטֻמֵּי מִצְרַיִם וְאֶת־כׇּל־חֲכָמֶיהָ וַיְסַפֵּר פַּרְעֹה לָהֶם אֶת־חֲלֹמוֹ וְאֵין־פּוֹתֵר אוֹתָם לְפַרְעֹֽה׃
9 ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
וַיְדַבֵּר שַׂר הַמַּשְׁקִים אֶת־פַּרְעֹה לֵאמֹר אֶת־חֲטָאַי אֲנִי מַזְכִּיר הַיּֽוֹם׃
10 ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ, ನನ್ನನ್ನೂ, ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ದಳಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಿದ್ದೀರಿ.
פַּרְעֹה קָצַף עַל־עֲבָדָיו וַיִּתֵּן אֹתִי בְּמִשְׁמַר בֵּית שַׂר הַטַּבָּחִים אֹתִי וְאֵת שַׂר הָאֹפִֽים׃
11 ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
וַנַּֽחַלְמָה חֲלוֹם בְּלַיְלָה אֶחָד אֲנִי וָהוּא אִישׁ כְּפִתְרוֹן חֲלֹמוֹ חָלָֽמְנוּ׃
12 ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು.
וְשָׁם אִתָּנוּ נַעַר עִבְרִי עֶבֶד לְשַׂר הַטַּבָּחִים וַנְּסַפֶּר־לוֹ וַיִּפְתׇּר־לָנוּ אֶת־חֲלֹמֹתֵינוּ אִישׁ כַּחֲלֹמוֹ פָּתָֽר׃
13 ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನಾನು ನನ್ನ ಸ್ಥಾನವನ್ನು ಪುನಃ ಪಡೆದುಕೊಂಡೆನು, ಇನ್ನೊಬ್ಬನನ್ನು ಗಲ್ಲಿಗೇರಿಸಲಾಯಿತು,” ಎಂದು ಹೇಳಿದನು.
וַיְהִי כַּאֲשֶׁר פָּֽתַר־לָנוּ כֵּן הָיָה אֹתִי הֵשִׁיב עַל־כַּנִּי וְאֹתוֹ תָלָֽה׃
14 ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
וַיִּשְׁלַח פַּרְעֹה וַיִּקְרָא אֶת־יוֹסֵף וַיְרִיצֻהוּ מִן־הַבּוֹר וַיְגַלַּח וַיְחַלֵּף שִׂמְלֹתָיו וַיָּבֹא אֶל־פַּרְעֹֽה׃
15 ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.
וַיֹּאמֶר פַּרְעֹה אֶל־יוֹסֵף חֲלוֹם חָלַמְתִּי וּפֹתֵר אֵין אֹתוֹ וַאֲנִי שָׁמַעְתִּי עָלֶיךָ לֵאמֹר תִּשְׁמַע חֲלוֹם לִפְתֹּר אֹתֽוֹ׃
16 ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು.
וַיַּעַן יוֹסֵף אֶת־פַּרְעֹה לֵאמֹר בִּלְעָדָי אֱלֹהִים יַעֲנֶה אֶת־שְׁלוֹם פַּרְעֹֽה׃
17 ಅದಕ್ಕೆ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
וַיְדַבֵּר פַּרְעֹה אֶל־יוֹסֵף בַּחֲלֹמִי הִנְנִי עֹמֵד עַל־שְׂפַת הַיְאֹֽר׃
18 ಆಗ ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
וְהִנֵּה מִן־הַיְאֹר עֹלֹת שֶׁבַע פָּרוֹת בְּרִיאוֹת בָּשָׂר וִיפֹת תֹּאַר וַתִּרְעֶינָה בָּאָֽחוּ׃
19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬೇರೆ ಏಳು ಬಡಹಸುಗಳು ಏರಿ ಬಂದವು. ಅಂಥ ಬಡ ಹಸುಗಳನ್ನು, ನಾನು ಈಜಿಪ್ಟ್ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
וְהִנֵּה שֶֽׁבַע־פָּרוֹת אֲחֵרוֹת עֹלוֹת אַחֲרֵיהֶן דַּלּוֹת וְרָעוֹת תֹּאַר מְאֹד וְרַקּוֹת בָּשָׂר לֹֽא־רָאִיתִי כָהֵנָּה בְּכׇל־אֶרֶץ מִצְרַיִם לָרֹֽעַ׃
20 ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು.
וַתֹּאכַלְנָה הַפָּרוֹת הָרַקּוֹת וְהָרָעוֹת אֵת שֶׁבַע הַפָּרוֹת הָרִאשֹׁנוֹת הַבְּרִיאֹֽת׃
21 ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಲಿಲ್ಲ. ಅವು ಮೊದಲಿನಂತೆ ಬಡಕಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
וַתָּבֹאנָה אֶל־קִרְבֶּנָה וְלֹא נוֹדַע כִּי־בָאוּ אֶל־קִרְבֶּנָה וּמַרְאֵיהֶן רַע כַּאֲשֶׁר בַּתְּחִלָּה וָאִיקָֽץ׃
22 “ನನಗೆ ಇನ್ನೊಂದು ಕನಸು ಬಂತು. ನಾನು ಆ ಕನಸಿನಲ್ಲಿ, ಒಂದೇ ದಂಟಿನಲ್ಲಿ ಪುಷ್ಟಿಯುಳ್ಳ ಏಳು ತೆನೆಗಳು ಇದ್ದವು.
וָאֵרֶא בַּחֲלֹמִי וְהִנֵּה ׀ שֶׁבַע שִׁבֳּלִים עֹלֹת בְּקָנֶה אֶחָד מְלֵאֹת וְטֹבֽוֹת׃
23 ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
וְהִנֵּה שֶׁבַע שִׁבֳּלִים צְנֻמוֹת דַּקּוֹת שְׁדֻפוֹת קָדִים צֹמְחוֹת אַחֲרֵיהֶֽם׃
24 ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು.
וַתִּבְלַעְןָ הַשִּׁבֳּלִים הַדַּקֹּת אֵת שֶׁבַע הַֽשִּׁבֳּלִים הַטֹּבוֹת וָֽאֹמַר אֶל־הַֽחַרְטֻמִּים וְאֵין מַגִּיד לִֽי׃
25 ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.
וַיֹּאמֶר יוֹסֵף אֶל־פַּרְעֹה חֲלוֹם פַּרְעֹה אֶחָד הוּא אֵת אֲשֶׁר הָאֱלֹהִים עֹשֶׂה הִגִּיד לְפַרְעֹֽה׃
26 ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.
שֶׁבַע פָּרֹת הַטֹּבֹת שֶׁבַע שָׁנִים הֵנָּה וְשֶׁבַע הַֽשִּׁבֳּלִים הַטֹּבֹת שֶׁבַע שָׁנִים הֵנָּה חֲלוֹם אֶחָד הֽוּא׃
27 ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು.
וְשֶׁבַע הַפָּרוֹת הָֽרַקּוֹת וְהָרָעֹת הָעֹלֹת אַחֲרֵיהֶן שֶׁבַע שָׁנִים הֵנָּה וְשֶׁבַע הַֽשִּׁבֳּלִים הָרֵקוֹת שְׁדֻפוֹת הַקָּדִים יִהְיוּ שֶׁבַע שְׁנֵי רָעָֽב׃
28 “ನಾನು ಫರೋಹನಿಗೆ ಹೇಳಿದ ಮಾತಿನಂತೆ ದೇವರು ಮಾಡಲಿರುವುದನ್ನು ಫರೋಹನಿಗೆ ತೋರಿಸಿದ್ದಾರೆ.
הוּא הַדָּבָר אֲשֶׁר דִּבַּרְתִּי אֶל־פַּרְעֹה אֲשֶׁר הָאֱלֹהִים עֹשֶׂה הֶרְאָה אֶת־פַּרְעֹֽה׃
29 ಈಜಿಪ್ಟ್ ದೇಶದಲ್ಲೆಲ್ಲಾ ಬಹುಸಮೃದ್ಧಿಯ ಸುಭಿಕ್ಷ ವರ್ಷಗಳು ಬರುತ್ತವೆ.
הִנֵּה שֶׁבַע שָׁנִים בָּאוֹת שָׂבָע גָּדוֹל בְּכׇל־אֶרֶץ מִצְרָֽיִם׃
30 ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.
וְקָמוּ שֶׁבַע שְׁנֵי רָעָב אַחֲרֵיהֶן וְנִשְׁכַּח כׇּל־הַשָּׂבָע בְּאֶרֶץ מִצְרָיִם וְכִלָּה הָרָעָב אֶת־הָאָֽרֶץ׃
31 ತರುವಾಯ ಬರಗಾಲವು ಬಹಳ ಕಠಿಣವಾಗಿರುವುದರಿಂದ, ಸುಭಿಕ್ಷ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವುದು.
וְלֹֽא־יִוָּדַע הַשָּׂבָע בָּאָרֶץ מִפְּנֵי הָרָעָב הַהוּא אַחֲרֵי־כֵן כִּֽי־כָבֵד הוּא מְאֹֽד׃
32 ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.
וְעַל הִשָּׁנוֹת הַחֲלוֹם אֶל־פַּרְעֹה פַּעֲמָיִם כִּֽי־נָכוֹן הַדָּבָר מֵעִם הָאֱלֹהִים וּמְמַהֵר הָאֱלֹהִים לַעֲשֹׂתֽוֹ׃
33 “ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.
וְעַתָּה יֵרֶא פַרְעֹה אִישׁ נָבוֹן וְחָכָם וִישִׁיתֵהוּ עַל־אֶרֶץ מִצְרָֽיִם׃
34 ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.
יַעֲשֶׂה פַרְעֹה וְיַפְקֵד פְּקִדִים עַל־הָאָרֶץ וְחִמֵּשׁ אֶת־אֶרֶץ מִצְרַיִם בְּשֶׁבַע שְׁנֵי הַשָּׂבָֽע׃
35 ಅಧಿಕಾರಿಗಳು ಮುಂಬರುವ ಈ ಒಳ್ಳೆಯ ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
וְיִקְבְּצוּ אֶת־כׇּל־אֹכֶל הַשָּׁנִים הַטֹּבוֹת הַבָּאֹת הָאֵלֶּה וְיִצְבְּרוּ־בָר תַּחַת יַד־פַּרְעֹה אֹכֶל בֶּעָרִים וְשָׁמָֽרוּ׃
36 ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.
וְהָיָה הָאֹכֶל לְפִקָּדוֹן לָאָרֶץ לְשֶׁבַע שְׁנֵי הָרָעָב אֲשֶׁר תִּהְיֶיןָ בְּאֶרֶץ מִצְרָיִם וְלֹֽא־תִכָּרֵת הָאָרֶץ בָּרָעָֽב׃
37 ಈ ಮಾತುಗಳು ಫರೋಹನಿಗೂ, ಅವನ ಸೇವಕರಿಗೂ ಒಳ್ಳೆಯದೆಂದು ತೋರಿತು.
וַיִּיטַב הַדָּבָר בְּעֵינֵי פַרְעֹה וּבְעֵינֵי כׇּל־עֲבָדָֽיו׃
38 ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.
וַיֹּאמֶר פַּרְעֹה אֶל־עֲבָדָיו הֲנִמְצָא כָזֶה אִישׁ אֲשֶׁר רוּחַ אֱלֹהִים בּֽוֹ׃
39 ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
וַיֹּאמֶר פַּרְעֹה אֶל־יוֹסֵף אַחֲרֵי הוֹדִיעַ אֱלֹהִים אוֹתְךָ אֶת־כׇּל־זֹאת אֵין־נָבוֹן וְחָכָם כָּמֽוֹךָ׃
40 ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.
אַתָּה תִּהְיֶה עַל־בֵּיתִי וְעַל־פִּיךָ יִשַּׁק כׇּל־עַמִּי רַק הַכִּסֵּא אֶגְדַּל מִמֶּֽךָּ׃
41 ಇದಲ್ಲದೆ ಫರೋಹನು ಯೋಸೇಫನಿಗೆ, “ನೋಡು, ನಾನು ನಿನ್ನನ್ನು ಈಜಿಪ್ಟ್ ದೇಶದ ಮೇಲೆಲ್ಲಾ ನೇಮಿಸಿದ್ದೇನೆ,” ಎಂದನು.
וַיֹּאמֶר פַּרְעֹה אֶל־יוֹסֵף רְאֵה נָתַתִּי אֹֽתְךָ עַל כׇּל־אֶרֶץ מִצְרָֽיִם׃
42 ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.
וַיָּסַר פַּרְעֹה אֶת־טַבַּעְתּוֹ מֵעַל יָדוֹ וַיִּתֵּן אֹתָהּ עַל־יַד יוֹסֵף וַיַּלְבֵּשׁ אֹתוֹ בִּגְדֵי־שֵׁשׁ וַיָּשֶׂם רְבִד הַזָּהָב עַל־צַוָּארֽוֹ׃
43 ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.
וַיַּרְכֵּב אֹתוֹ בְּמִרְכֶּבֶת הַמִּשְׁנֶה אֲשֶׁר־לוֹ וַיִּקְרְאוּ לְפָנָיו אַבְרֵךְ וְנָתוֹן אֹתוֹ עַל כׇּל־אֶרֶץ מִצְרָֽיִם׃
44 ಇದಲ್ಲದೆ ಫರೋಹನು ಯೋಸೇಫನಿಗೆ, “ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟ್ ದೇಶದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ, ಕಾಲನ್ನಾಗಲಿ ಎತ್ತಬಾರದು,” ಎಂದನು.
וַיֹּאמֶר פַּרְעֹה אֶל־יוֹסֵף אֲנִי פַרְעֹה וּבִלְעָדֶיךָ לֹֽא־יָרִים אִישׁ אֶת־יָדוֹ וְאֶת־רַגְלוֹ בְּכׇל־אֶרֶץ מִצְרָֽיִם׃
45 ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
וַיִּקְרָא פַרְעֹה שֵׁם־יוֹסֵף צָֽפְנַת פַּעְנֵחַ וַיִּתֶּן־לוֹ אֶת־אָֽסְנַת בַּת־פּוֹטִי פֶרַע כֹּהֵן אֹן לְאִשָּׁה וַיֵּצֵא יוֹסֵף עַל־אֶרֶץ מִצְרָֽיִם׃
46 ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.
וְיוֹסֵף בֶּן־שְׁלֹשִׁים שָׁנָה בְּעׇמְדוֹ לִפְנֵי פַּרְעֹה מֶֽלֶךְ־מִצְרָיִם וַיֵּצֵא יוֹסֵף מִלִּפְנֵי פַרְעֹה וַֽיַּעֲבֹר בְּכׇל־אֶרֶץ מִצְרָֽיִם׃
47 ಆ ದೇಶವು ಸುಭಿಕ್ಷದ ಏಳು ವರ್ಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
וַתַּעַשׂ הָאָרֶץ בְּשֶׁבַע שְׁנֵי הַשָּׂבָע לִקְמָצִֽים׃
48 ಹೀಗಿರಲಾಗಿ ಅವನು ಈಜಿಪ್ಟ್ ದೇಶದಲ್ಲಿದ್ದ ಆ ಏಳು ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಪಟ್ಟಣಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
וַיִּקְבֹּץ אֶת־כׇּל־אֹכֶל ׀ שֶׁבַע שָׁנִים אֲשֶׁר הָיוּ בְּאֶרֶץ מִצְרַיִם וַיִּתֶּן־אֹכֶל בֶּעָרִים אֹכֶל שְׂדֵה־הָעִיר אֲשֶׁר סְבִיבֹתֶיהָ נָתַן בְּתוֹכָֽהּ׃
49 ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕಮಾಡುವುದಕ್ಕೆ ಆಗದೆ ಹೋಯಿತು.
וַיִּצְבֹּר יוֹסֵף בָּר כְּחוֹל הַיָּם הַרְבֵּה מְאֹד עַד כִּי־חָדַל לִסְפֹּר כִּי־אֵין מִסְפָּֽר׃
50 ಇದಲ್ಲದೆ ಬರಗಾಲದ ವರ್ಷಗಳು ಬರುವುದಕ್ಕೆ ಮುಂಚೆ, ಯೋಸೇಫನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್, ಅವಳನ್ನು ಯೋಸೇಫನಿಗೆ ಹೆತ್ತಳು.
וּלְיוֹסֵף יֻלַּד שְׁנֵי בָנִים בְּטֶרֶם תָּבוֹא שְׁנַת הָרָעָב אֲשֶׁר יָֽלְדָה־לּוֹ אָֽסְנַת בַּת־פּוֹטִי פֶרַע כֹּהֵן אֽוֹן׃
51 ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.
וַיִּקְרָא יוֹסֵף אֶת־שֵׁם הַבְּכוֹר מְנַשֶּׁה כִּֽי־נַשַּׁנִי אֱלֹהִים אֶת־כׇּל־עֲמָלִי וְאֵת כׇּל־בֵּית אָבִֽי׃
52 ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.
וְאֵת שֵׁם הַשֵּׁנִי קָרָא אֶפְרָיִם כִּֽי־הִפְרַנִי אֱלֹהִים בְּאֶרֶץ עׇנְיִֽי׃
53 ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,
וַתִּכְלֶינָה שֶׁבַע שְׁנֵי הַשָּׂבָע אֲשֶׁר הָיָה בְּאֶרֶץ מִצְרָֽיִם׃
54 ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.
וַתְּחִלֶּינָה שֶׁבַע שְׁנֵי הָרָעָב לָבוֹא כַּאֲשֶׁר אָמַר יוֹסֵף וַיְהִי רָעָב בְּכׇל־הָאֲרָצוֹת וּבְכׇל־אֶרֶץ מִצְרַיִם הָיָה לָֽחֶם׃
55 ಈಜಿಪ್ಟ್‌ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು.
וַתִּרְעַב כׇּל־אֶרֶץ מִצְרַיִם וַיִּצְעַק הָעָם אֶל־פַּרְעֹה לַלָּחֶם וַיֹּאמֶר פַּרְעֹה לְכׇל־מִצְרַיִם לְכוּ אֶל־יוֹסֵף אֲשֶׁר־יֹאמַר לָכֶם תַּעֲשֽׂוּ׃
56 ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.
וְהָרָעָב הָיָה עַל כׇּל־פְּנֵי הָאָרֶץ וַיִּפְתַּח יוֹסֵף אֶֽת־כׇּל־אֲשֶׁר בָּהֶם וַיִּשְׁבֹּר לְמִצְרַיִם וַיֶּחֱזַק הָֽרָעָב בְּאֶרֶץ מִצְרָֽיִם׃
57 ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.
וְכׇל־הָאָרֶץ בָּאוּ מִצְרַיְמָה לִשְׁבֹּר אֶל־יוֹסֵף כִּֽי־חָזַק הָרָעָב בְּכׇל־הָאָֽרֶץ׃

< ಆದಿಕಾಂಡ 41 >