< ಆದಿಕಾಂಡ 42 >

1 ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ಯಾಕೋಬನು ತಿಳಿದಾಗ, ಅವನು ತನ್ನ ಪುತ್ರರಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡು ಸುಮ್ಮನಿರುವುದೇನು?” ಎಂದನು.
וַיַּרְא יַעֲקֹב כִּי יֶשׁ־שֶׁבֶר בְּמִצְרָיִם וַיֹּאמֶר יַעֲקֹב לְבָנָיו לָמָּה תִּתְרָאֽוּ׃
2 ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.
וַיֹּאמֶר הִנֵּה שָׁמַעְתִּי כִּי יֶשׁ־שֶׁבֶר בְּמִצְרָיִם רְדוּ־שָׁמָּה וְשִׁבְרוּ־לָנוּ מִשָּׁם וְנִחְיֶה וְלֹא נָמֽוּת׃
3 ಆಗ ಯೋಸೇಫನ ಹತ್ತು ಮಂದಿ ಸಹೋದರರು ಈಜಿಪ್ಟಿನಲ್ಲಿ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಹೋದರು.
וַיֵּרְדוּ אֲחֵֽי־יוֹסֵף עֲשָׂרָה לִשְׁבֹּר בָּר מִמִּצְרָֽיִם׃
4 ಆದರೆ ಯೋಸೇಫನ ಸಹೋದರನಾದ ಬೆನ್ಯಾಮೀನನನ್ನು ಕಳುಹಿಸಲಿಲ್ಲ. ಏಕೆಂದರೆ ಅವನಿಗೆ ಕೇಡು ಬಂದೀತೆಂದು ಹೇಳಿ, ಯಾಕೋಬನು ಅವನನ್ನು ಅವನ ಸಹೋದರರ ಸಂಗಡ ಕಳುಹಿಸಲಿಲ್ಲ.
וְאֶת־בִּנְיָמִין אֲחִי יוֹסֵף לֹא־שָׁלַח יַעֲקֹב אֶת־אֶחָיו כִּי אָמַר פֶּן־יִקְרָאֶנּוּ אָסֽוֹן׃
5 ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು.
וַיָּבֹאוּ בְּנֵי יִשְׂרָאֵל לִשְׁבֹּר בְּתוֹךְ הַבָּאִים כִּֽי־הָיָה הָרָעָב בְּאֶרֶץ כְּנָֽעַן׃
6 ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
וְיוֹסֵף הוּא הַשַּׁלִּיט עַל־הָאָרֶץ הוּא הַמַּשְׁבִּיר לְכָל־עַם הָאָרֶץ וַיָּבֹאוּ אֲחֵי יוֹסֵף וַיִּשְׁתַּֽחֲווּ־לוֹ אַפַּיִם אָֽרְצָה׃
7 ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು.
וַיַּרְא יוֹסֵף אֶת־אֶחָיו וַיַּכִּרֵם וַיִּתְנַכֵּר אֲלֵיהֶם וַיְדַבֵּר אִתָּם קָשׁוֹת וַיֹּאמֶר אֲלֵהֶם מֵאַיִן בָּאתֶם וַיֹּאמְרוּ מֵאֶרֶץ כְּנַעַן לִשְׁבָּר־אֹֽכֶל׃
8 ಯೋಸೇಫನು ತನ್ನ ಸಹೋದರರನ್ನು ಗುರುತಿಸಿದರೂ, ಅವರು ಅವನನ್ನು ಗುರುತಿಸಲಿಲ್ಲ.
וַיַּכֵּר יוֹסֵף אֶת־אֶחָיו וְהֵם לֹא הִכִּרֻֽהוּ׃
9 ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು.
וַיִּזְכֹּר יוֹסֵף אֵת הַחֲלֹמוֹת אֲשֶׁר חָלַם לָהֶם וַיֹּאמֶר אֲלֵהֶם מְרַגְּלִים אַתֶּם לִרְאוֹת אֶת־עֶרְוַת הָאָרֶץ בָּאתֶֽם׃
10 ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ.
וַיֹּאמְרוּ אֵלָיו לֹא אֲדֹנִי וַעֲבָדֶיךָ בָּאוּ לִשְׁבָּר־אֹֽכֶל׃
11 ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.
כֻּלָּנוּ בְּנֵי אִישׁ־אֶחָד נָחְנוּ כֵּנִים אֲנַחְנוּ לֹא־הָיוּ עֲבָדֶיךָ מְרַגְּלִֽים׃
12 ಆದರೆ ಅವನು ಅವರಿಗೆ, “ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳಿದುಕೊಳ್ಳುವುದಕ್ಕೋಸ್ಕರವೇ ಬಂದಿದ್ದೀರಿ,” ಎಂದನು.
וַיֹּאמֶר אֲלֵהֶם לֹא כִּֽי־עֶרְוַת הָאָרֶץ בָּאתֶם לִרְאֽוֹת׃
13 ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.
וַיֹּאמְרוּ שְׁנֵים עָשָׂר עֲבָדֶיךָ אַחִים ׀ אֲנַחְנוּ בְּנֵי אִישׁ־אֶחָד בְּאֶרֶץ כְּנָעַן וְהִנֵּה הַקָּטֹן אֶת־אָבִינוּ הַיּוֹם וְהָאֶחָד אֵינֶֽנּוּ׃
14 ಆಗ ಯೋಸೇಫನು ಅವರಿಗೆ, “ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ!
וַיֹּאמֶר אֲלֵהֶם יוֹסֵף הוּא אֲשֶׁר דִּבַּרְתִּי אֲלֵכֶם לֵאמֹר מְרַגְּלִים אַתֶּֽם׃
15 ಈಗ ನಿಮ್ಮನ್ನು ನಾನು ಪರೀಕ್ಷಿಸುತ್ತೇನೆ. ಹೇಗೆಂದರೆ, ನಿಮ್ಮ ಚಿಕ್ಕ ಸಹೋದರನು ಇಲ್ಲಿಗೆ ಬಂದ ಹೊರತು, ಫರೋಹನ ಜೀವದಾಣೆ ನೀವು ಇಲ್ಲಿಂದ ಹೋಗಬಾರದು.
בְּזֹאת תִּבָּחֵנוּ חֵי פַרְעֹה אִם־תֵּצְאוּ מִזֶּה כִּי אִם־בְּבוֹא אֲחִיכֶם הַקָּטֹן הֵֽנָּה׃
16 ನಿಮ್ಮಲ್ಲಿಂದ ಒಬ್ಬನನ್ನು ಕಳುಹಿಸಿರಿ, ಅವನು ನಿಮ್ಮ ಸಹೋದರನನ್ನು ಕರೆದುಕೊಂಡು ಬರಲಿ. ಆದರೆ ನೀವು ಸೆರೆಮನೆಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ, ಇಲ್ಲವೋ ಎಂದು ನಿಮ್ಮ ಮಾತುಗಳನ್ನು ಪರೀಕ್ಷಿಸುತ್ತೇನೆ. ಇಲ್ಲದಿದ್ದರೆ, ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು,” ಎಂದು ಹೇಳಿದನು.
שִׁלְחוּ מִכֶּם אֶחָד וְיִקַּח אֶת־אֲחִיכֶם וְאַתֶּם הֵאָסְרוּ וְיִבָּֽחֲנוּ דִּבְרֵיכֶם הַֽאֱמֶת אִתְּכֶם וְאִם־לֹא חֵי פַרְעֹה כִּי מְרַגְּלִים אַתֶּֽם׃
17 ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
וַיֶּאֱסֹף אֹתָם אֶל־מִשְׁמָר שְׁלֹשֶׁת יָמִֽים׃
18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.
וַיֹּאמֶר אֲלֵהֶם יוֹסֵף בַּיּוֹם הַשְּׁלִישִׁי זֹאת עֲשׂוּ וִֽחְיוּ אֶת־הָאֱלֹהִים אֲנִי יָרֵֽא׃
19 ನೀವು ಸತ್ಯವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿತನಾಗಿರಲಿ. ಆದರೆ ನೀವು ಎಲ್ಲರೂ ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.
אִם־כֵּנִים אַתֶּם אֲחִיכֶם אֶחָד יֵאָסֵר בְּבֵית מִשְׁמַרְכֶם וְאַתֶּם לְכוּ הָבִיאוּ שֶׁבֶר רַעֲבוֹן בָּתֵּיכֶֽם׃
20 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ಕರೆತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು. ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಿದರು.
וְאֶת־אֲחִיכֶם הַקָּטֹן תָּבִיאוּ אֵלַי וְיֵאָמְנוּ דִבְרֵיכֶם וְלֹא תָמוּתוּ וַיַּעֲשׂוּ־כֵֽן׃
21 ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.
וַיֹּאמְרוּ אִישׁ אֶל־אָחִיו אֲבָל אֲשֵׁמִים ׀ אֲנַחְנוּ עַל־אָחִינוּ אֲשֶׁר רָאִינוּ צָרַת נַפְשׁוֹ בְּהִתְחַֽנְנוֹ אֵלֵינוּ וְלֹא שָׁמָעְנוּ עַל־כֵּן בָּאָה אֵלֵינוּ הַצָּרָה הַזֹּֽאת׃
22 ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.
וַיַּעַן רְאוּבֵן אֹתָם לֵאמֹר הֲלוֹא אָמַרְתִּי אֲלֵיכֶם ׀ לֵאמֹר אַל־תֶּחֶטְאוּ בַיֶּלֶד וְלֹא שְׁמַעְתֶּם וְגַם־דָּמוֹ הִנֵּה נִדְרָֽשׁ׃
23 ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು.
וְהֵם לֹא יֽ͏ָדְעוּ כִּי שֹׁמֵעַ יוֹסֵף כִּי הַמֵּלִיץ בֵּינֹתָֽם׃
24 ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.
וַיִּסֹּב מֵֽעֲלֵיהֶם וַיֵּבְךְּ וַיָּשָׁב אֲלֵהֶם וַיְדַבֵּר אֲלֵהֶם וַיִּקַּח מֵֽאִתָּם אֶת־שִׁמְעוֹן וַיֶּאֱסֹר אֹתוֹ לְעֵינֵיהֶֽם׃
25 ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸಬೇಕೆಂದೂ, ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರುಗಿ ಇಡಬೇಕೆಂದೂ, ಪ್ರಯಾಣಕ್ಕಾಗಿ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು.
וַיְצַו יוֹסֵף וַיְמַלְאוּ אֶת־כְּלֵיהֶם בָּר וּלְהָשִׁיב כַּסְפֵּיהֶם אִישׁ אֶל־שַׂקּוֹ וְלָתֵת לָהֶם צֵדָה לַדָּרֶךְ וַיַּעַשׂ לָהֶם כֵּֽן׃
26 ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು, ಅಲ್ಲಿಂದ ಹೊರಟು ಹೋದರು.
וַיִּשְׂאוּ אֶת־שִׁבְרָם עַל־חֲמֹרֵיהֶם וַיֵּלְכוּ מִשָּֽׁם׃
27 ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು.
וַיִּפְתַּח הָאֶחָד אֶת־שַׂקּוֹ לָתֵת מִסְפּוֹא לַחֲמֹרוֹ בַּמָּלוֹן וַיַּרְא אֶת־כַּסְפּוֹ וְהִנֵּה־הוּא בְּפִי אַמְתַּחְתּֽוֹ׃
28 ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.
וַיֹּאמֶר אֶל־אֶחָיו הוּשַׁב כַּסְפִּי וְגַם הִנֵּה בְאַמְתַּחְתִּי וַיֵּצֵא לִבָּם וַיֶּֽחֶרְדוּ אִישׁ אֶל־אָחִיו לֵאמֹר מַה־זֹּאת עָשָׂה אֱלֹהִים לָֽנוּ׃
29 ಅವರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದಾಗ, ತಮಗೆ ಸಂಭವಿಸಿದ್ದೆಲ್ಲವನ್ನೂ ಅವನಿಗೆ ತಿಳಿಸಿದರು.
וַיָּבֹאוּ אֶל־יַעֲקֹב אֲבִיהֶם אַרְצָה כְּנָעַן וַיַּגִּידוּ לוֹ אֵת כָּל־הַקֹּרֹת אֹתָם לֵאמֹֽר׃
30 ದೇಶದ ಅಧಿಪತಿಯಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ, ದೇಶದ ಗೂಢಚಾರರನ್ನಾಗಿ ನಮ್ಮನ್ನು ಎಣಿಸಿದನು.
דִּבֶּר הָאִישׁ אֲדֹנֵי הָאָרֶץ אִתָּנוּ קָשׁוֹת וַיִּתֵּן אֹתָנוּ כִּֽמְרַגְּלִים אֶת־הָאָֽרֶץ׃
31 ನಾವು ಅವನಿಗೆ, “ನಾವು ಗೂಢಚಾರರಲ್ಲ, ಸತ್ಯವಂತರೇ.
וַנֹּאמֶר אֵלָיו כֵּנִים אֲנָחְנוּ לֹא הָיִינוּ מְרַגְּלִֽים׃
32 ನಾವು ಹನ್ನೆರಡು ಮಂದಿ ಸಹೋದರರಾಗಿದ್ದು, ಒಂದೇ ತಂದೆಯ ಪುತ್ರರಾಗಿದ್ದೇವೆ, ಒಬ್ಬನು ಇಲ್ಲ, ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ,” ಎಂದೆವು.
שְׁנֵים־עָשָׂר אֲנַחְנוּ אַחִים בְּנֵי אָבִינוּ הָאֶחָד אֵינֶנּוּ וְהַקָּטֹן הַיּוֹם אֶת־אָבִינוּ בְּאֶרֶץ כְּנָֽעַן׃
33 “ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು, ‘ನೀವು ಯಥಾರ್ಥರೆಂದು ನಾನು ಇದರಲ್ಲಿ ತಿಳಿದುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು, ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತೆಗೆದುಕೊಂಡು ಹೋಗಿರಿ.
וַיֹּאמֶר אֵלֵינוּ הָאִישׁ אֲדֹנֵי הָאָרֶץ בְּזֹאת אֵדַע כִּי כֵנִים אַתֶּם אֲחִיכֶם הָֽאֶחָד הַנִּיחוּ אִתִּי וְאֶת־רַעֲבוֹן בָּתֵּיכֶם קְחוּ וָלֵֽכוּ׃
34 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ. ಆಗ ನೀವು ಗೂಢಚಾರರಲ್ಲವೆಂದೂ, ಯಥಾರ್ಥರೆಂದೂ ತಿಳಿದುಕೊಂಡು, ನಿಮ್ಮ ಸಹೋದರರನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು,’ ಎಂದು ಹೇಳಿದನು,” ಎಂದರು.
וְהָבִיאוּ אֶת־אֲחִיכֶם הַקָּטֹן אֵלַי וְאֵֽדְעָה כִּי לֹא מְרַגְּלִים אַתֶּם כִּי כֵנִים אַתֶּם אֶת־אֲחִיכֶם אֶתֵּן לָכֶם וְאֶת־הָאָרֶץ תִּסְחָֽרוּ׃
35 ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
וַיְהִי הֵם מְרִיקִים שַׂקֵּיהֶם וְהִנֵּה־אִישׁ צְרוֹר־כַּסְפּוֹ בְּשַׂקּוֹ וַיִּרְאוּ אֶת־צְרֹרוֹת כַּסְפֵּיהֶם הֵמָּה וַאֲבִיהֶם וַיִּירָֽאוּ׃
36 ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.
וַיֹּאמֶר אֲלֵהֶם יַעֲקֹב אֲבִיהֶם אֹתִי שִׁכַּלְתֶּם יוֹסֵף אֵינֶנּוּ וְשִׁמְעוֹן אֵינֶנּוּ וְאֶת־בִּנְיָמִן תִּקָּחוּ עָלַי הָיוּ כֻלָּֽנָה׃
37 ರೂಬೇನನು ತನ್ನ ತಂದೆಗೆ, “ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ನನ್ನ ಇಬ್ಬರು ಪುತ್ರರನ್ನು ಕೊಂದುಬಿಡು. ನೀನು ಬೆನ್ಯಾಮೀನನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರುಗಿ ತರುವೆನು,” ಎಂದನು.
וַיֹּאמֶר רְאוּבֵן אֶל־אָבִיו לֵאמֹר אֶת־שְׁנֵי בָנַי תָּמִית אִם־לֹא אֲבִיאֶנּוּ אֵלֶיךָ תְּנָה אֹתוֹ עַל־יָדִי וַאֲנִי אֲשִׁיבֶנּוּ אֵלֶֽיךָ׃
38 ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು. (Sheol h7585)
וַיֹּאמֶר לֹֽא־יֵרֵד בְּנִי עִמָּכֶם כִּֽי־אָחִיו מֵת וְהוּא לְבַדּוֹ נִשְׁאָר וּקְרָאָהוּ אָסוֹן בַּדֶּרֶךְ אֲשֶׁר תֵּֽלְכוּ־בָהּ וְהוֹרַדְתֶּם אֶת־שֵׂיבָתִי בְּיָגוֹן שְׁאֽוֹלָה׃ (Sheol h7585)

< ಆದಿಕಾಂಡ 42 >