< ಆದಿಕಾಂಡ 46 >

1 ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.
וַיִּסַּ֤ע יִשְׂרָאֵל֙ וְכָל־אֲשֶׁר־ל֔וֹ וַיָּבֹ֖א בְּאֵ֣רָה שָּׁ֑בַע וַיִּזְבַּ֣ח זְבָחִ֔ים לֵאלֹהֵ֖י אָבִ֥יו יִצְחָֽק׃
2 ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.
וַיֹּ֨אמֶר אֱלֹהִ֤ים ׀ לְיִשְׂרָאֵל֙ בְּמַרְאֹ֣ת הַלַּ֔יְלָה וַיֹּ֖אמֶר יַעֲקֹ֣ב ׀ יַעֲקֹ֑ב וַיֹּ֖אמֶר הִנֵּֽנִי׃
3 ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.
וַיֹּ֕אמֶר אָנֹכִ֥י הָאֵ֖ל אֱלֹהֵ֣י אָבִ֑יךָ אַל־תִּירָא֙ מֵרְדָ֣ה מִצְרַ֔יְמָה כִּֽי־לְג֥וֹי גָּד֖וֹל אֲשִֽׂימְךָ֥ שָֽׁם׃
4 ನಾನೇ ನಿನ್ನ ಸಂಗಡ ಈಜಿಪ್ಟಿಗೆ ಹೋಗುವೆನು. ನಾನು ನಿಶ್ಚಯವಾಗಿ ನಿನ್ನನ್ನು ಕಾನಾನಿಗೆ ತಿರುಗಿ ಬರಮಾಡುವೆನು. ಯೋಸೇಫನು ನಿನ್ನ ಅಂತಿಮ ಕಾಲದಲ್ಲಿ ನೀನು ಕಣ್ಣುಮುಚ್ಚುವಾಗ ಇರುವನು,” ಎಂದನು.
אָנֹכִ֗י אֵרֵ֤ד עִמְּךָ֙ מִצְרַ֔יְמָה וְאָנֹכִ֖י אַֽעַלְךָ֣ גַם־עָלֹ֑ה וְיוֹסֵ֕ף יָשִׁ֥ית יָד֖וֹ עַל־עֵינֶֽיךָ׃
5 ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಆಗ ಇಸ್ರಾಯೇಲರು ತಮ್ಮ ತಂದೆ ಯಾಕೋಬನನ್ನೂ, ತಮ್ಮ ಮಕ್ಕಳನ್ನೂ, ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ರಥಗಳಲ್ಲಿ ಕೂರಿಸಿಕೊಂಡು ಹೋದರು.
וַיָּ֥קָם יַעֲקֹ֖ב מִבְּאֵ֣ר שָׁ֑בַע וַיִּשְׂא֨וּ בְנֵֽי־יִשְׂרָאֵ֜ל אֶת־יַעֲקֹ֣ב אֲבִיהֶ֗ם וְאֶת־טַפָּם֙ וְאֶת־נְשֵׁיהֶ֔ם בָּעֲגָל֕וֹת אֲשֶׁר־שָׁלַ֥ח פַּרְעֹ֖ה לָשֵׂ֥את אֹתֽוֹ׃
6 ಅವರು ತಮ್ಮ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತೆಗೆದುಕೊಂಡು ಈಜಿಪ್ಟಿಗೆ ಬಂದರು. ಯಾಕೋಬನು ತನ್ನ ಕುಟುಂಬ ಸಮೇತವಾಗಿ ಬಂದನು.
וַיִּקְח֣וּ אֶת־מִקְנֵיהֶ֗ם וְאֶת־רְכוּשָׁם֙ אֲשֶׁ֤ר רָֽכְשׁוּ֙ בְּאֶ֣רֶץ כְּנַ֔עַן וַיָּבֹ֖אוּ מִצְרָ֑יְמָה יַעֲקֹ֖ב וְכָל־זַרְע֥וֹ אִתּֽוֹ׃
7 ಅವನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮೊಕ್ಕಳನ್ನೂ, ಅಂತೂ ತನ್ನ ಇಡೀ ಕುಟುಂಬದವರೆಲ್ಲರನ್ನೂ ತನ್ನೊಂದಿಗೆ ಈಜಿಪ್ಟಿಗೆ ಕರೆದುಕೊಂಡು ಹೋದನು.
בָּנָ֞יו וּבְנֵ֤י בָנָיו֙ אִתּ֔וֹ בְּנֹתָ֛יו וּבְנ֥וֹת בָּנָ֖יו וְכָל־זַרְע֑וֹ הֵבִ֥יא אִתּ֖וֹ מִצְרָֽיְמָה׃ ס
8 ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು.
וְאֵ֨לֶּה שְׁמ֧וֹת בְּנֵֽי־יִשְׂרָאֵ֛ל הַבָּאִ֥ים מִצְרַ֖יְמָה יַעֲקֹ֣ב וּבָנָ֑יו בְּכֹ֥ר יַעֲקֹ֖ב רְאוּבֵֽן׃
9 ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್ ಮತ್ತು ಕರ್ಮೀ ಎಂಬುವರು.
וּבְנֵ֖י רְאוּבֵ֑ן חֲנ֥וֹךְ וּפַלּ֖וּא וְחֶצְר֥וֹן וְכַרְמִֽי׃
10 ಸಿಮೆಯೋನನ ಮಕ್ಕಳು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ ಎಂಬುವರು.
וּבְנֵ֣י שִׁמְע֗וֹן יְמוּאֵ֧ל וְיָמִ֛ין וְאֹ֖הַד וְיָכִ֣ין וְצֹ֑חַר וְשָׁא֖וּל בֶּן־הַֽכְּנַעֲנִֽית׃
11 ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.
וּבְנֵ֖י לֵוִ֑י גֵּרְשׁ֕וֹן קְהָ֖ת וּמְרָרִֽי׃
12 ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.
וּבְנֵ֣י יְהוּדָ֗ה עֵ֧ר וְאוֹנָ֛ן וְשֵׁלָ֖ה וָפֶ֣רֶץ וָזָ֑רַח וַיָּ֨מָת עֵ֤ר וְאוֹנָן֙ בְּאֶ֣רֶץ כְּנַ֔עַן וַיִּהְי֥וּ בְנֵי־פֶ֖רֶץ חֶצְר֥וֹן וְחָמֽוּל׃
13 ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್ ಎಂಬುವರು.
וּבְנֵ֖י יִשָׂשכָ֑ר תּוֹלָ֥ע וּפֻוָּ֖ה וְי֥וֹב וְשִׁמְרֽוֹן׃
14 ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹಲೇಲ್ ಎಂಬುವರು.
וּבְנֵ֖י זְבוּלֻ֑ן סֶ֥רֶד וְאֵל֖וֹן וְיַחְלְאֵֽל׃
15 ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ.
אֵ֣לֶּה ׀ בְּנֵ֣י לֵאָ֗ה אֲשֶׁ֨ר יָֽלְדָ֤ה לְיַעֲקֹב֙ בְּפַדַּ֣ן אֲרָ֔ם וְאֵ֖ת דִּינָ֣ה בִתּ֑וֹ כָּל־נֶ֧פֶשׁ בָּנָ֛יו וּבְנוֹתָ֖יו שְׁלֹשִׁ֥ים וְשָׁלֹֽשׁ׃
16 ಗಾದನ ಮಕ್ಕಳು: ಚಿಫ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ ಎಂಬುವರು.
וּבְנֵ֣י גָ֔ד צִפְי֥וֹן וְחַגִּ֖י שׁוּנִ֣י וְאֶצְבֹּ֑ן עֵרִ֥י וַֽאֲרוֹדִ֖י וְאַרְאֵלִֽי׃
17 ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಯ ಮತ್ತು ಅವರ ಸಹೋದರಿಯಾದ ಸೆರಹ. ಬೆರೀಗನ ಪುತ್ರರು: ಹೆಬೆರ, ಮಲ್ಕೀಯೇಲ್ ಎಂಬುವರು.
וּבְנֵ֣י אָשֵׁ֗ר יִמְנָ֧ה וְיִשְׁוָ֛ה וְיִשְׁוִ֥י וּבְרִיעָ֖ה וְשֶׂ֣רַח אֲחֹתָ֑ם וּבְנֵ֣י בְרִיעָ֔ה חֶ֖בֶר וּמַלְכִּיאֵֽל׃
18 ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಈಕೆಯಿಂದ ಯಾಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.
אֵ֚לֶּה בְּנֵ֣י זִלְפָּ֔ה אֲשֶׁר־נָתַ֥ן לָבָ֖ן לְלֵאָ֣ה בִתּ֑וֹ וַתֵּ֤לֶד אֶת־אֵ֙לֶּה֙ לְיַעֲקֹ֔ב שֵׁ֥שׁ עֶשְׂרֵ֖ה נָֽפֶשׁ׃
19 ಯಾಕೋಬನ ಹೆಂಡತಿಯಾದ ರಾಹೇಲಳ ಪುತ್ರರು: ಯೋಸೇಫ್, ಬೆನ್ಯಾಮೀನ್ ಎಂಬುವರು.
בְּנֵ֤י רָחֵל֙ אֵ֣שֶׁת יַֽעֲקֹ֔ב יוֹסֵ֖ף וּבִנְיָמִֽן׃
20 ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.
וַיִּוָּלֵ֣ד לְיוֹסֵף֮ בְּאֶ֣רֶץ מִצְרַיִם֒ אֲשֶׁ֤ר יָֽלְדָה־לּוֹ֙ אָֽסְנַ֔ת בַּת־פּ֥וֹטִי פֶ֖רַע כֹּהֵ֣ן אֹ֑ן אֶת־מְנַשֶּׁ֖ה וְאֶת־אֶפְרָֽיִם׃
21 ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಅಷ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್ ಎಂಬುವರು.
וּבְנֵ֣י בִנְיָמִ֗ן בֶּ֤לַע וָבֶ֙כֶר֙ וְאַשְׁבֵּ֔ל גֵּרָ֥א וְנַעֲמָ֖ן אֵחִ֣י וָרֹ֑אשׁ מֻפִּ֥ים וְחֻפִּ֖ים וָאָֽרְדְּ׃
22 ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಪುತ್ರರು. ಎಲ್ಲರೂ ಕೂಡಿ ಹದಿನಾಲ್ಕು ಮಂದಿ.
אֵ֚לֶּה בְּנֵ֣י רָחֵ֔ל אֲשֶׁ֥ר יֻלַּ֖ד לְיַעֲקֹ֑ב כָּל־נֶ֖פֶשׁ אַרְבָּעָ֥ה עָשָֽׂר׃
23 ದಾನನ ಮಗನು: ಹುಶೀಮನು.
וּבְנֵי־דָ֖ן חֻשִֽׁים׃
24 ನಫ್ತಾಲಿಯ ಪುತ್ರರು: ಯಹಚೇಲ, ಗೂನೀ, ಯೇಚೆರ್, ಶಿಲ್ಲೇಮ್ ಎಂಬುವರು.
וּבְנֵ֖י נַפְתָּלִ֑י יַחְצְאֵ֥ל וְגוּנִ֖י וְיֵ֥צֶר וְשִׁלֵּֽם׃
25 ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಪುತ್ರರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲರೂ ಕೂಡಿ ಏಳುಮಂದಿ.
אֵ֚לֶּה בְּנֵ֣י בִלְהָ֔ה אֲשֶׁר־נָתַ֥ן לָבָ֖ן לְרָחֵ֣ל בִּתּ֑וֹ וַתֵּ֧לֶד אֶת־אֵ֛לֶּה לְיַעֲקֹ֖ב כָּל־נֶ֥פֶשׁ שִׁבְעָֽה׃
26 ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ.
כָּל־הַ֠נֶּפֶשׁ הַבָּאָ֨ה לְיַעֲקֹ֤ב מִצְרַ֙יְמָה֙ יֹצְאֵ֣י יְרֵכ֔וֹ מִלְּבַ֖ד נְשֵׁ֣י בְנֵי־יַעֲקֹ֑ב כָּל־נֶ֖פֶשׁ שִׁשִּׁ֥ים וָשֵֽׁשׁ׃
27 ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
וּבְנֵ֥י יוֹסֵ֛ף אֲשֶׁר־יֻלַּד־ל֥וֹ בְמִצְרַ֖יִם נֶ֣פֶשׁ שְׁנָ֑יִם כָּל־הַנֶּ֧פֶשׁ לְבֵֽית־יַעֲקֹ֛ב הַבָּ֥אָה מִצְרַ֖יְמָה שִׁבְעִֽים׃ פ
28 ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು.
וְאֶת־יְהוּדָ֞ה שָׁלַ֤ח לְפָנָיו֙ אֶל־יוֹסֵ֔ף לְהוֹרֹ֥ת לְפָנָ֖יו גֹּ֑שְׁנָה וַיָּבֹ֖אוּ אַ֥רְצָה גֹּֽשֶׁן׃
29 ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.
וַיֶּאְסֹ֤ר יוֹסֵף֙ מֶרְכַּבְתּ֔וֹ וַיַּ֛עַל לִקְרַֽאת־יִשְׂרָאֵ֥ל אָבִ֖יו גֹּ֑שְׁנָה וַיֵּרָ֣א אֵלָ֗יו וַיִּפֹּל֙ עַל־צַוָּארָ֔יו וַיֵּ֥בְךְּ עַל־צַוָּארָ֖יו עֽוֹד׃
30 ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಂಡಿದ್ದರಿಂದ ಇನ್ನು ನಾನು ಮರಣ ಹೊಂದಲು ಸಿದ್ಧನಾಗಿದ್ದೇನೆ. ನೀನು ಇನ್ನೂ ಜೀವದಿಂದ ಇದ್ದೀಯೆ,” ಎಂದನು.
וַיֹּ֧אמֶר יִשְׂרָאֵ֛ל אֶל־יוֹסֵ֖ף אָמ֣וּתָה הַפָּ֑עַם אַחֲרֵי֙ רְאוֹתִ֣י אֶת־פָּנֶ֔יךָ כִּ֥י עוֹדְךָ֖ חָֽי׃
31 ಯೋಸೇಫನು ತನ್ನ ಸಹೋದರರಿಗೂ, ತನ್ನ ತಂದೆಯ ಮನೆಯವರಿಗೂ, “ನಾನು ಹೋಗಿ ಫರೋಹನಿಗೆ, ಕಾನಾನ್ ದೇಶದಲ್ಲಿದ್ದ ನನ್ನ ಸಹೋದರರೂ, ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
וַיֹּ֨אמֶר יוֹסֵ֤ף אֶל־אֶחָיו֙ וְאֶל־בֵּ֣ית אָבִ֔יו אֶעֱלֶ֖ה וְאַגִּ֣ידָה לְפַרְעֹ֑ה וְאֹֽמְרָ֣ה אֵלָ֔יו אַחַ֧י וּבֵית־אָבִ֛י אֲשֶׁ֥ר בְּאֶֽרֶץ־כְּנַ֖עַן בָּ֥אוּ אֵלָֽי׃
32 ಅವರು ಕುರಿಕಾಯುವವರು, ಅವರಿಗೆ ಪಶುಗಳು ಇವೆ. ತಮ್ಮ ಕುರಿದನಗಳನ್ನೂ, ತಮಗಿದ್ದದ್ದೆಲ್ಲವನ್ನೂ ತೆಗೆದುಕೊಂಡು ಬಂದಿದ್ದಾರೆ, ಎಂದು ಹೇಳುವೆನು.
וְהָאֲנָשִׁים֙ רֹ֣עֵי צֹ֔אן כִּֽי־אַנְשֵׁ֥י מִקְנֶ֖ה הָי֑וּ וְצֹאנָ֧ם וּבְקָרָ֛ם וְכָל־אֲשֶׁ֥ר לָהֶ֖ם הֵבִֽיאוּ׃
33 ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಕೆಲಸವೇನು?’ ಎಂದು ಕೇಳುವನು.
וְהָיָ֕ה כִּֽי־יִקְרָ֥א לָכֶ֖ם פַּרְעֹ֑ה וְאָמַ֖ר מַה־מַּעֲשֵׂיכֶֽם׃
34 ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.
וַאֲמַרְתֶּ֗ם אַנְשֵׁ֨י מִקְנֶ֜ה הָי֤וּ עֲבָדֶ֙יךָ֙ מִנְּעוּרֵ֣ינוּ וְעַד־עַ֔תָּה גַּם־אֲנַ֖חְנוּ גַּם־אֲבֹתֵ֑ינוּ בַּעֲב֗וּר תֵּשְׁבוּ֙ בְּאֶ֣רֶץ גֹּ֔שֶׁן כִּֽי־תוֹעֲבַ֥ת מִצְרַ֖יִם כָּל־רֹ֥עֵה צֹֽאן׃

< ಆದಿಕಾಂಡ 46 >