< ಆದಿಕಾಂಡ 5 >

1 ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.
Ndondomeko ya mibado ya Adamu ndi iyi: Pamene Mulungu analenga munthu, anamulenga mʼchifaniziro cha Mulungu.
2 ದೇವರು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅದೇ ದಿನದಲ್ಲಿ ಅವರನ್ನು ಆಶೀರ್ವದಿಸಿ, ಅವರಿಗೆ “ಮನುಷ್ಯ” ಎಂದು ಕರೆದರು.
Iye analenga mwamuna ndi mkazi. Anawadalitsa ndipo anawatcha “Munthu.”
3 ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ, “ಸೇತ್” ಎಂದು ಹೆಸರಿಟ್ಟನು.
Pamene Adamu anali ndi zaka 130, anabereka mwana wamwamuna wofanana naye ndipo anamutcha Seti.
4 ಸೇತನು ಹುಟ್ಟಿದ ಮೇಲೆ ಆದಾಮನು ಗಂಡು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರು ವರುಷ ಬದುಕಿದನು.
Atabadwa Seti, Adamu anakhala ndi moyo zaka zina 800 ndipo anabereka ana ena aamuna ndi aakazi.
5 ಆದಾಮನು ಒಟ್ಟು ಒಂಬೈನೂರ ಮೂವತ್ತು ವರುಷ ಬದುಕಿ ಸತ್ತನು.
Zaka zonse za Adamu zinali 930 ndipo anamwalira.
6 ಸೇತನು ನೂರ ಐದು ವರುಷದವನಾದಾಗ ಎನೋಷನನ್ನು ಪಡೆದನು.
Pamene Seti anali ndi zaka 105, anabereka Enosi.
7 ಎನೋಷನು ಹುಟ್ಟಿದ ಮೇಲೆ ಸೇತನು ಎಂಟುನೂರ ಏಳು ವರುಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.
Atabadwa Enosi, Seti anakhala ndi moyo zaka zina 807 ndipo anabereka ana ena aamuna ndi aakazi.
8 ಸೇತನು ಒಟ್ಟು ಒಂಬೈನೂರ ಹನ್ನೆರಡು ವರ್ಷ ಬದುಕಿ ಸತ್ತನು.
Zaka zonse za Seti zinali 912 ndipo anamwalira.
9 ಎನೋಷನು ತೊಂಬತ್ತು ವರ್ಷದವನಾದಾಗ ಕೇನಾನನನ್ನು ಪಡೆದನು.
Pamene Enosi anali ndi zaka 90, anabereka Kenani.
10 ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.
Atabadwa Kenani, Enosi anakhala ndi moyo zaka zina 815 ndipo anabereka ana ena aamuna ndi aakazi.
11 ಅವನು ಒಟ್ಟು ಒಂಬೈನೂರ ಐದು ವರುಷ ಬದುಕಿ ಸತ್ತನು.
Zaka zonse za Enosi pamodzi zinali 905 ndipo anamwalira.
12 ಕೇನಾನನು ಎಪ್ಪತ್ತು ವರುಷದವನಾದಾಗ, ಅವನಿಂದ ಮಹಲಲೇಲನು ಹುಟ್ಟಿದನು.
Pamene Kenani anali ndi zaka 70, anabereka Mahalaleli.
13 ಕೇನಾನನು ಮಹಲಲೇಲನು ಹುಟ್ಟಿದ ಮೇಲೆ ಎಂಟುನೂರ ನಲವತ್ತು ವರ್ಷ ಬದುಕಿ, ಗಂಡು ಹೆಣ್ಣು ಮಕ್ಕಳನ್ನು ಪಡೆದನು.
Atabadwa Mahalaleli, Kenani anakhala ndi moyo zaka zina 840 ndipo anabereka ana ena aamuna ndi aakazi.
14 ಕೇನಾನನು ಒಟ್ಟು ಒಂಬೈನೂರ ಹತ್ತು ವರ್ಷ ಬದುಕಿ ಸತ್ತನು.
Zaka zonse za Kenani zinali 910, ndipo anamwalira.
15 ಮಹಲಲೇಲನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಯೆರೆದನು ಹುಟ್ಟಿದನು.
Pamene Mahalaleli anali ndi zaka 65, anabereka Yaredi.
16 ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಎಂಟುನೂರ ಮೂವತ್ತು ವರ್ಷ ಬದುಕಿ ಗಂಡು, ಹೆಣ್ಣು ಮಕ್ಕಳನ್ನು ಪಡೆದನು.
Atabadwa Yaredi, Mahalaleli anakhala ndi moyo zaka zina 830 ndipo anabereka ana ena aamuna ndi aakazi.
17 ಮಹಲಲೇಲನು ಎಂಟುನೂರ ತೊಂಬತ್ತೈದು ವರ್ಷ ಬದುಕಿ ತರುವಾಯ ಸತ್ತನು.
Zaka zonse za Mahalaleli zinali 895 ndipo anamwalira.
18 ಯೆರೆದನು ನೂರ ಅರವತ್ತೆರಡು ವರುಷದವನಾಗಿದ್ದಾಗ, ಅವನಿಂದ ಹನೋಕನು ಹುಟ್ಟಿದನು.
Pamene Yaredi anali ndi zaka 162, anabereka Enoki.
19 ಹನೋಕನು ಹುಟ್ಟಿದ ಮೇಲೆ, ಯೆರೆದನು ಎಂಟುನೂರು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
Atabadwa Enoki, Yaredi anakhala ndi moyo zaka zina 800 ndipo anabereka ana ena aamuna ndi aakazi.
20 ಯೆರೆದನು ಒಟ್ಟು ಒಂಬೈನೂರ ಅರವತ್ತೆರಡು ವರ್ಷ ಬದುಕಿ, ತರುವಾಯ ಸತ್ತನು.
Zaka zonse za Yaredi zinali 962 ndipo anamwalira.
21 ಹನೋಕನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಮೆತೂಷೆಲಹನು ಹುಟ್ಟಿದನು.
Pamene Enoki anali ndi zaka 65, anabereka Metusela.
22 ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
Atabadwa Metusela, Enoki anayenda ndi Mulungu zaka 300 ndipo anabereka ana ena aamuna ndi aakazi.
23 ಹನೋಕನು ಒಟ್ಟು ಮುನ್ನೂರ ಅರವತ್ತೈದು ವರ್ಷ ಬದುಕಿದನು.
Zaka zonse za Enoki zinali 365.
24 ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.
Enoki anayenda ndi Mulungu; ndipo iye sanaonekenso chifukwa Mulungu anamutenga.
25 ಮೆತೂಷೆಲಹನು ನೂರ ಎಂಬತ್ತೇಳು ವರ್ಷದವನಾಗಿದ್ದಾಗ, ಅವನಿಂದ ಲೆಮೆಕನು ಹುಟ್ಟಿದನು.
Pamene Metusela anali ndi zaka 187, anabereka Lameki.
26 ಲೆಮೆಕನು ಹುಟ್ಟಿದ ಮೇಲೆ, ಮೆತೂಷೆಲಹನು ಏಳುನೂರ ಎಂಬತ್ತೆರಡು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
Ndipo atabadwa Lameki, Metusela anakhala ndi moyo zaka zina 782 ndipo anabereka ana ena aamuna ndi aakazi.
27 ಮೆತೂಷೆಲಹನಿಗೆ ಒಟ್ಟು ಒಂಬೈನೂರ ಅರವತ್ತೊಂಭತ್ತು ವರ್ಷಗಳಾಗಿದ್ದವು. ತರುವಾಯ ಅವನು ಸತ್ತನು.
Zaka zonse za Metusela zinali 969, ndipo anamwalira.
28 ಲೆಮೆಕನು ನೂರ ಎಂಬತ್ತೆರಡು ವರ್ಷದವನಾದಾಗ, ಒಬ್ಬ ಮಗನನ್ನು ಪಡೆದನು.
Pamene Lameki anali ndi zaka 182, anabereka mwana wamwamuna.
29 ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು.
Ndipo anamutcha Nowa ndipo anati, “Iyeyu adzatipumulitsa ku ntchito zathu zolemetsazi, zolima nthaka imene Yehova anayitemberera.”
30 ನೋಹನು ಹುಟ್ಟಿದ ಮೇಲೆ, ಲೆಮೆಕನು ಗಂಡು, ಹೆಣ್ಣು ಮಕ್ಕಳನ್ನು ಪಡೆದು, ಐನೂರ ತೊಂಬತ್ತೈದು ವರ್ಷ ಬದುಕಿದನು.
Atabadwa Nowa, Lameki anakhala zaka zina 595 ndipo anabereka ana ena aamuna ndi aakazi.
31 ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿದನು. ತರುವಾಯ ಅವನು ಸತ್ತನು.
Zaka zonse za Lameki zinali 777, ndipo kenaka anamwalira.
32 ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.
Pamene Nowa anali ndi zaka 500, anabereka Semu, Hamu ndi Yafeti.

< ಆದಿಕಾಂಡ 5 >