< ಆದಿಕಾಂಡ 50 >

1 ಆಗ ಯೋಸೇಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಅವನಿಗಾಗಿ ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.
וַיִפֹּל יוֹסֵף עַל־פְּנֵי אָבִיו וַיֵּבְךְּ עָלָיו וַיִּשַּׁק־לֽוֹ׃
2 ಯೋಸೇಫನು ತನ್ನ ತಂದೆ ಇಸ್ರಾಯೇಲನಿಗೆ ಸುಗಂಧದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಟ್ಟನು.
וַיְצַו יוֹסֵף אֶת־עֲבָדָיו אֶת־הָרֹפְאִים לַחֲנֹט אֶת־אָבִיו וַיַּחַנְטוּ הָרֹפְאִים אֶת־יִשְׂרָאֵֽל׃
3 ವೈದ್ಯರು ಇಸ್ರಾಯೇಲನಿಗೆ ನಲವತ್ತು ದಿನಗಳವರೆಗೆ ಸುಗಂಧದ್ರವ್ಯಗಳ ಲೇಪನ ಮಾಡಿದರು. ಅದಕ್ಕಾಗಿ ಅಷ್ಟು ಸಮಯ ಬೇಕಾಗಿತ್ತು. ಇದಲ್ಲದೆ ಈಜಿಪ್ಟಿನವರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
וַיִּמְלְאוּ־לוֹ אַרְבָּעִים יוֹם כִּי כֵּן יִמְלְאוּ יְמֵי הַחֲנֻטִים וַיִּבְכּוּ אֹתוֹ מִצְרַיִם שִׁבְעִים יֽוֹם׃
4 ಅವನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಆಸ್ಥಾನದವರಿಗೆ, “ನಾನು ನಿಮ್ಮ ಕಣ್ಣುಗಳ ಮುಂದೆ ದಯೆ ಹೊಂದಿದ್ದೇಯಾದರೆ, ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
וַיַּֽעַבְרוּ יְמֵי בְכִיתוֹ וַיְדַבֵּר יוֹסֵף אֶל־בֵּית פַּרְעֹה לֵאמֹר אִם־נָא מָצָאתִי חֵן בְּעֵינֵיכֶם דַּבְּרוּ־נָא בְּאָזְנֵי פַרְעֹה לֵאמֹֽר׃
5 ‘ನನಗೆ ನನ್ನ ತಂದೆ, “ನಾನು ಸಾಯುತ್ತೇನೆ, ನಾನು ಕಾನಾನ್ ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಸಮಾಧಿಮಾಡಬೇಕು,” ಎಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.’ ಹೀಗಿರುವುದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಳಿ, ತಿರುಗಿ ಬರುವ ಹಾಗೆ ಅಪ್ಪಣೆಯಾಗಬೇಕು,” ಎಂದನು.
אָבִי הִשְׁבִּיעַנִי לֵאמֹר הִנֵּה אָנֹכִי מֵת בְּקִבְרִי אֲשֶׁר כָּרִיתִי לִי בְּאֶרֶץ כְּנַעַן שָׁמָּה תִּקְבְּרֵנִי וְעַתָּה אֶֽעֱלֶה־נָּא וְאֶקְבְּרָה אֶת־אָבִי וְאָשֽׁוּבָה׃
6 ಆಗ ಫರೋಹನು, “ನಿನ್ನ ತಂದೆಯು ನಿನ್ನಿಂದ ಪ್ರಮಾಣ ಮಾಡಿಸಿದಂತೆ, ನೀನು ಹೋಗಿ ನಿನ್ನ ತಂದೆಯನ್ನು ಹೂಳಿಡು,” ಎಂದನು.
וַיֹּאמֶר פַּרְעֹה עֲלֵה וּקְבֹר אֶת־אָבִיךָ כַּאֲשֶׁר הִשְׁבִּיעֶֽךָ׃
7 ಹೀಗೆ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅರಮನೆಯ ಹಿರಿಯರೆಲ್ಲರೂ ಈಜಿಪ್ಟ್ ದೇಶದ ಮುಖ್ಯಸ್ಥರೆಲ್ಲರೂ,
וַיַּעַל יוֹסֵף לִקְבֹּר אֶת־אָבִיו וַיּֽ͏ַעֲלוּ אִתּוֹ כָּל־עַבְדֵי פַרְעֹה זִקְנֵי בֵיתוֹ וְכֹל זִקְנֵי אֶֽרֶץ־מִצְרָֽיִם׃
8 ಯೋಸೇಫನ ಮನೆಯವರೆಲ್ಲರೂ ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋದರು. ಅವರ ಮಕ್ಕಳನ್ನೂ, ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತದಲ್ಲಿ ಬಿಟ್ಟರು.
וְכֹל בֵּית יוֹסֵף וְאֶחָיו וּבֵית אָבִיו רַק טַפָּם וְצֹאנָם וּבְקָרָם עָזְבוּ בְּאֶרֶץ גֹּֽשֶׁן׃
9 ರಥಗಳೂ, ರಾಹುತರೂ ಅವನ ಸಂಗಡ ಹೊರಟು ಹೋದರು. ಸಮೂಹವು ಬಹಳ ದೊಡ್ಡದಾಗಿತ್ತು.
וַיַּעַל עִמּוֹ גַּם־רֶכֶב גַּם־פָּרָשִׁים וַיְהִי הַֽמַּחֲנֶה כָּבֵד מְאֹֽד׃
10 ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.
וַיָּבֹאוּ עַד־גֹּרֶן הָאָטָד אֲשֶׁר בְּעֵבֶר הַיַּרְדֵּן וַיִּסְפְּדוּ־שָׁם מִסְפֵּד גָּדוֹל וְכָבֵד מְאֹד וַיַּעַשׂ לְאָבִיו אֵבֶל שִׁבְעַת יָמִֽים׃
11 ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ಕಂಡಾಗ, “ಇದು ಈಜಿಪ್ಟಿನವರಿಗೆ ಘೋರವಾದ ದುಃಖ,” ಎಂದು ಹೇಳಿದರು. ಆದ್ದರಿಂದ ಅದಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆ ಇದೆ.
וַיַּרְא יוֹשֵׁב הָאָרֶץ הַֽכְּנַעֲנִי אֶת־הָאֵבֶל בְּגֹרֶן הָֽאָטָד וַיֹּאמְרוּ אֵֽבֶל־כָּבֵד זֶה לְמִצְרָיִם עַל־כֵּן קָרָא שְׁמָהּ אָבֵל מִצְרַיִם אֲשֶׁר בְּעֵבֶר הַיַּרְדֵּֽן׃
12 ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.
וַיַּעֲשׂוּ בָנָיו לוֹ כֵּן כַּאֲשֶׁר צִוָּֽם׃
13 ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.
וַיִּשְׂאוּ אֹתוֹ בָנָיו אַרְצָה כְּנַעַן וַיִּקְבְּרוּ אֹתוֹ בִּמְעָרַת שְׂדֵה הַמַּכְפֵּלָה אֲשֶׁר קָנָה אַבְרָהָם אֶת־הַשָּׂדֶה לַאֲחֻזַּת־קֶבֶר מֵאֵת עֶפְרֹן הַחִתִּי עַל־פְּנֵי מַמְרֵֽא׃
14 ಯೋಸೇಫನು ತನ್ನ ತಂದೆಯನ್ನು ಹೂಳಿದ ಮೇಲೆ, ತನ್ನ ಸಹೋದರರ ಸಂಗಡವೂ, ತನ್ನ ತಂದೆಯನ್ನು ಹೂಳುವುದಕ್ಕಾಗಿ ಅವನ ಸಂಗಡ ಹೋದವರೆಲ್ಲರೂ ಈಜಿಪ್ಟಿಗೆ ತಿರುಗಿ ಬಂದರು.
וַיָּשָׁב יוֹסֵף מִצְרַיְמָה הוּא וְאֶחָיו וְכָל־הָעֹלִים אִתּוֹ לִקְבֹּר אֶת־אָבִיו אַחֲרֵי קָבְרוֹ אֶת־אָבִֽיו׃
15 ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,
וַיִּרְאוּ אֲחֵֽי־יוֹסֵף כִּי־מֵת אֲבִיהֶם וַיֹּאמְרוּ לוּ יִשְׂטְמֵנוּ יוֹסֵף וְהָשֵׁב יָשִׁיב לָנוּ אֵת כָּל־הָרָעָה אֲשֶׁר גָּמַלְנוּ אֹתֽוֹ׃
16 ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ, “ನಿನ್ನ ತಂದೆಯು ಮರಣ ಹೊಂದುವುದಕ್ಕಿಂತ ಮುಂಚೆ,
וַיְצַוּוּ אֶל־יוֹסֵף לֵאמֹר אָבִיךָ צִוָּה לִפְנֵי מוֹתוֹ לֵאמֹֽר׃
17 ‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.
כֹּֽה־תֹאמְרוּ לְיוֹסֵף אָנָּא שָׂא נָא פֶּשַׁע אַחֶיךָ וְחַטָּאתָם כִּי־רָעָה גְמָלוּךָ וְעַתָּה שָׂא נָא לְפֶשַׁע עַבְדֵי אֱלֹהֵי אָבִיךָ וַיֵּבְךְּ יוֹסֵף בְּדַבְּרָם אֵלָֽיו׃
18 ಆಮೇಲೆ ಅವನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದು, “ನಿನ್ನ ದಾಸರಾಗಿದ್ದೇವೆ,” ಎಂದರು.
וַיֵּלְכוּ גַּם־אֶחָיו וֽ͏ַיִּפְּלוּ לְפָנָיו וַיֹּאמְרוּ הִנֶּנּֽוּ לְךָ לַעֲבָדִֽים׃
19 ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
וַיֹּאמֶר אֲלֵהֶם יוֹסֵף אַל־תִּירָאוּ כִּי הֲתַחַת אֱלֹהִים אָֽנִי׃
20 ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.
וְאַתֶּם חֲשַׁבְתֶּם עָלַי רָעָה אֱלֹהִים חֲשָׁבָהּ לְטֹבָה לְמַעַן עֲשֹׂה כַּיּוֹם הַזֶּה לְהַחֲיֹת עַם־רָֽב׃
21 ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.
וְעַתָּה אַל־תִּירָאוּ אָנֹכִי אֲכַלְכֵּל אֶתְכֶם וְאֶֽת־טַפְּכֶם וַיְנַחֵם אוֹתָם וַיְדַבֵּר עַל־לִבָּֽם׃
22 ಹೀಗೆ ಯೋಸೇಫನೂ, ಅವನ ತಂದೆಯ ಮನೆಯವರೂ ಸಹಿತವಾಗಿ ಈಜಿಪ್ಟಿನಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
וַיֵּשֶׁב יוֹסֵף בְּמִצְרַיִם הוּא וּבֵית אָבִיו וַיְחִי יוֹסֵף מֵאָה וָעֶשֶׂר שָׁנִֽים׃
23 ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
וַיַּרְא יוֹסֵף לְאֶפְרַיִם בְּנֵי שִׁלֵּשִׁים גַּם בְּנֵי מָכִיר בֶּן־מְנַשֶּׁה יֻלְּדוּ עַל־בִּרְכֵּי יוֹסֵֽף׃
24 ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.
וַיֹּאמֶר יוֹסֵף אֶל־אֶחָיו אָנֹכִי מֵת וֵֽאלֹהִים פָּקֹד יִפְקֹד אֶתְכֶם וְהֶעֱלָה אֶתְכֶם מִן־הָאָרֶץ הַזֹּאת אֶל־הָאָרֶץ אֲשֶׁר נִשְׁבַּע לְאַבְרָהָם לְיִצְחָק וּֽלְיַעֲקֹֽב׃
25 ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.
וַיַּשְׁבַּע יוֹסֵף אֶת־בְּנֵי יִשְׂרָאֵל לֵאמֹר פָּקֹד יִפְקֹד אֱלֹהִים אֶתְכֶם וְהַעֲלִתֶם אֶת־עַצְמֹתַי מִזֶּֽה׃
26 ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.
וַיָּמָת יוֹסֵף בֶּן־מֵאָה וָעֶשֶׂר שָׁנִים וַיַּחַנְטוּ אֹתוֹ וַיִּישֶׂם בָּאָרוֹן בְּמִצְרָֽיִם׃ 1533 50 4 4

< ಆದಿಕಾಂಡ 50 >