< ಆದಿಕಾಂಡ 6 >
1 ಭೂಮಿಯ ಮೇಲೆ ಜನರ ಸಂಖ್ಯೆ ಹೆಚ್ಚಾಗತೊಡಗಿದಾಗ ಅವರಿಗೆ ಪುತ್ರಿಯರು ಹುಟ್ಟಿದರು.
İnsanar ç'iyeyne aq'val geeb qebaxheeng'a manbışis yişba vuxooxa,
2 ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.
manbışde yişbışda micagiyvalla malaaikaaşik'le g'oocena. Cone yik'es yikkanna nenayiy məng'ı'ke xhunaşşe hee'e.
3 ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.
Rəbbee eyhen: – Yizın Rı'h insanee hammaşiys deş vod. Manbıb hammaşiysınbı deş vob. Manbışis huvuna ı'mı'r vəşşe g'ane senıle hexxaba vuxhes deş.
4 ಆ ದಿನಗಳಲ್ಲಿ ಭೂಮಿಯ ಮೇಲೆ ನೆಫೀಲಿಯೆಂಬ ರಾಕ್ಷಸ ವಂಶದವರು ಇದ್ದರು. ನಂತರದಲ್ಲಿಯೂ ಇದ್ದರು. ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಕೂಡಿದಾಗ, ಮಕ್ಕಳು ಹುಟ್ಟಿದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಿಗಳು.
Malaaikaaşe insanaaşin yişba haa'anee gahılib, mançile qiyğiyne dövurbışilib məxbın ç'ak'ın insanar ç'iyeyne aq'valqa vuxooxa vuxha. Manbı avalıyne dövrun kuşdukurar quvaats'an insanar vuxha.
5 ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.
Rəbbik'le g'ecen, ç'iyeyne aq'valyne insanaaşine ək'eele, fıkree pisvalla hav'uy vob.
6 ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.
Mana paşmanaxhena. Mang'un yik' gyoyxhan ç'iyeyne aq'valqa insanar ipxhınva.
7 ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.
Rəbbee eyhen: – İpxhınin insanar ç'iyeyne aq'vayle havaakal ha'asınbı. Man insanaaşika sacigee həyvanaşined, ç'iyeyl hadağvançined, şit'yaaşined vuk'lelqa qalya'asın. Manbı ipxhınva paşmanxhana.
8 ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು.
Saccu sa Nüh Rəbbine ulen aqqaqqa.
9 ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.
Nühun taarix inəxüd vod: Nüh qorkuna, məttın yik'nana cune nasılee insan ıxha. Mana Allahne yəqqı'lniy vor.
10 ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳಿದ್ದರು.
Nühuka xhebiyre dix eyxhe: Sam, Ham, Yafəs.
11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.
Allahne ulele dyunye g'e'exhan, pisvalin gyayts'e.
12 ದೇವರು ಭೂಮಿಯನ್ನು ನೋಡಲಾಗಿ ಅದು ಕೆಟ್ಟುಹೋಗಿತ್ತು, ಮನುಷ್ಯರೆಲ್ಲರೂ ಭೂಮಿಯ ಮೇಲೆ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
Gırgın insanar qopkune yəqqı'le qığebç'iynbı. Allahık'le g'ecen dyunye, badalxha vod.
13 ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.
Allahee Nühuk'le uvhuyn: – Yizde ək'elee gırgınçın q'omıd hitxhır. Dyunye manbışde pisvalika gyats'ı. Mançil-allab Zı manbı ç'iyeyne aq'vayka sa cıgee havaakal haa'as.
14 ಆದ್ದರಿಂದ ನಿನಗೋಸ್ಕರವಾಗಿ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ಕೋಣೆಗಳನ್ನು ಮಾಡು, ಅದರ ಒಳಭಾಗಕ್ಕೂ ಹೊರಭಾಗಕ್ಕೂ ರಾಳವನ್ನು ಹಚ್ಚು.
Vas goferne yiveke sa gamı he'e. Ad goozeer hı'ı, adğançed g'adğançed yivena mızla qabğvee.
15 ನೀನು ಅದನ್ನು ಈ ರೀತಿಯಾಗಿ ಮಾಡತಕ್ಕದ್ದು: ನಾವೆಯ ಉದ್ದವು ಸುಮಾರು ಒಂದುನೂರ ಮೂವತ್ತೈದು ಮೀಟರ್, ಅದರ ಅಗಲ ಇಪ್ಪತ್ತಮೂರು ಮೀಟರ್, ಅದರ ಎತ್ತರ ಹದಿನಾಲ್ಕು ಮೀಟರ್ ಇರಬೇಕು.
Gamı haynəxüd he'e: mançina xıliyvalla xhebıd vəş xılekkum, əq'valla xhots'al xılekkum, axtıvallab xhebts'al xılekkum vuxhecen.
16 ಅದಕ್ಕೆ ಚಾವಣಿಯನ್ನು ಮಾಡು, ಅದರ ಕೆಳಗೆ ಹದಿನೆಂಟು ಇಂಚಿನ ಕಿಟಕಿಯನ್ನು ನಾವೆಯ ಸುತ್ತಲೂ ಮಾಡಬೇಕು; ಅದರ ಪಕ್ಕದಲ್ಲಿ ನಾವೆಯ ಬಾಗಿಲನ್ನು ಇಡಬೇಕು. ಕೆಳಗಿನದು, ಎರಡನೆಯದು, ಮೂರನೆಯದು ಎಂಬ ಮೂರು ಅಂತಸ್ತುಗಳನ್ನು ಮಾಡಬೇಕು.
Gamıyne ooğançe sa xılekkum avud g'uly he'e. Mıgleked akka gixhxhe. Gamıyka avubna, yı'q'nekna, oona mərtaba vuxhecen.
17 ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.
Zı ç'iyeyn aq'va q'ıfrımıka qadıyne xhineka alyat'asın. Xəək avudun nafas alyat'an gırgın kar hakkal ha'asın. Ç'iyeyne aq'valin gırgın kar qik'asın.
18 ಆದರೆ ನಾನು ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀನು, ನಿನ್ನ ಸಂಗಡ ನಿನ್ನ ಮಕ್ಕಳು, ನಿನ್ನ ಹೆಂಡತಿ ಹಾಗೂ ಸೊಸೆಯರು ನಾವೆಯೊಳಗೆ ಸೇರಬೇಕು.
Zı mugaavile saccu vaka ha'a: ğu dixbışika, xhunaşşeyka, sossaaşika sacigee gameeqa ılqeç'e.
19 ಜೀವಿಗಳ ಪ್ರತಿಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು; ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಜೀವಂತವಾಗಿ ಉಳಿಸಿಕೊಳ್ಳಬೇಕು.
Vaka üç'üdda axvecenva, gırgıne həyvanaaşike nafas helenimeene karbışike q'öblena, vughulyna-xhuvulyna, gameeqa alet'e.
20 ಪಕ್ಷಿಗಳಲ್ಲಿ ಅವುಗಳ ಜಾತಿಗನುಸಾರವಾಗಿ, ಪ್ರಾಣಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಮತ್ತು ನೆಲದ ಮೇಲೆ ಹರಿದಾಡುವ ಸಕಲ ಜೀವಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಎರಡೆರಡು ಬದುಕಿಬಾಳಲು ಅವುಗಳನ್ನು ನೀನು ಕಾಪಾಡುವಂತೆ ನಿನ್ನ ಬಳಿಗೆ ಬರುವುವು.
Q'öblena gırgıne şit'yaaşike, həyvanaaşike, ç'iyeyl hadağvançike vasqa qales, üç'üdda axvecenva.
21 ನೀನು, ಎಲ್ಲ ವಿಧವಾದ ಆಹಾರ ಪದಾರ್ಥಗಳನ್ನು ಕೂಡಿಸಿಡಬೇಕು. ಅದು ನಿಮಗೂ ಮತ್ತು ಪ್ರಾಣಿಗಳಿಗೂ ಆಹಾರವಾಗಿರಬೇಕು,” ಎಂದು ಹೇಳಿದರು.
Vasqa oxhanas eyxhençike vasınıd, çisınıd se'e.
22 ದೇವರು ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನು ಮಾಡಿದನು.
Nühee gırgın kar Allahee uvhuyn xhinne ha'a.