< ಆದಿಕಾಂಡ 8 >
1 ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.
১আর ঈশ্বর নোহকে ও জাহাজে অবস্থিত তাঁর সঙ্গী পশু যাবতীয় প্রাণীকে স্মরণ করলেন, ঈশ্বর পৃথিবীতে বাতাস বহালেন, তাতে জল থামল।
2 ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.
২আর গভীর জলের উনুই ও আকাশের জানালা সকল বন্ধ এবং আকাশের মহাবৃষ্টি থামল।
3 ಹೀಗೆ ನೀರು ಭೂಮಿಯ ಮೇಲಿನಿಂದ ಕ್ರಮವಾಗಿ ಇಳಿಯಿತು. ನೀರು ನೂರೈವತ್ತು ದಿನಗಳ ಅಂತ್ಯದಲ್ಲಿ ಕಡಿಮೆಯಾಯಿತು.
৩আর জল ক্রমশঃ মাটির ওপর থেকে সরে গিয়ে একশো পঞ্চাশ দিনের র শেষে কমে গেল।
4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನಿಂತಿತು.
৪তাতে সপ্তম মাসে, সতেরো দিনের অরারটের পর্বতের ওপরে জাহাজ লেগে থাকল।
5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂತು, ಹತ್ತನೆಯ ತಿಂಗಳಿನ ಮೊದಲಿನ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
৫পরে দশ মাস পর্যন্ত জল কমতে থাকল, ঐ দশ মাসের প্রথম দিনের পর্বতের শৃঙ্গ দেখা গেল।
6 ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು.
৬আর চল্লিশ দিন পরে নোহ নিজের বানানো জাহাজের জানালা খুলে, একটা দাঁড়কাক ছেড়ে দিলেন;
7 ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.
৭তাতে সে উড়ে ভূমির উপরের জল শুকনো না হওয়া পর্যন্ত এখানে ওখানে ঘোরাফেরা করতে লাগলো।
8 ಭೂಮುಖದ ಮೇಲೆ ಜಲವು ಕಡಿಮೆಯಾಯಿತೋ ಇಲ್ಲವೋ ಎಂದು ನೋಡುವಂತೆ, ಒಂದು ಪಾರಿವಾಳವನ್ನೂ ಹೊರಕ್ಕೆ ಕಳುಹಿಸಿದನು.
৮আর মাটির ওপরে জল কমেছে কি না, তা জানবার জন্য তিনি নিজের কাছ থেকে এক ঘুঘু ছেড়ে দিলেন।
9 ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
৯তাতে সমস্ত পৃথিবী জলে ভরে থাকাতে ঘুঘু নামার জায়গা পেল না, তাই জাহাজে তাঁর কাছে ফিরে আসল। তখন তিনি হাত বাড়িয়ে তাকে ধরলেন ও জাহাজের ভিতরে নিজের কাছে রাখলেন।
10 ಅವನು ಇನ್ನೂ ಏಳು ದಿವಸ ತಡೆದು, ಪಾರಿವಾಳವನ್ನು ಪುನಃ ನಾವೆಯೊಳಗಿಂದ ಹೊರಕ್ಕೆ ಬಿಟ್ಟನು.
১০পরে তিনি আর সাত দিন অপেক্ষা করে জাহাজ থেকে সেই ঘুঘু আবার ছেড়ে দিলেন
11 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರುಗಿ ಬರಲು, ಅದರ ಬಾಯಿಯಲ್ಲಿ ಓಲಿವ್ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದಿದೆಯೆಂದು ತಿಳಿದುಕೊಂಡನು.
১১এবং ঘুঘুটি সন্ধ্যাবেলায় তাঁর কাছে ফিরে এল; আর দেখ, তার ঠোঁটে জিতগাছের একটা নতুন পাতা ছিল; এতে নোহ বুঝলেন, মাটির ওপরে জল কমেছে।
12 ಇನ್ನೂ ಏಳು ದಿನಗಳು ತಡೆದು, ಆ ಪಾರಿವಾಳವನ್ನು ಬಿಟ್ಟಾಗ, ಅದು ತಿರುಗಿ ಅವನ ಬಳಿಗೆ ಬರಲೇ ಇಲ್ಲ.
১২পরে তিনি আর সাত দিন অপেক্ষা করে সেই ঘুঘু ছেড়ে দিলেন, তখন সে তাঁর কাছে আর ফিরে এল না।
13 ಆರುನೂರ ಒಂದನೆಯ ವರ್ಷದ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಮೇಲಿನ ಮುಚ್ಚಳವನ್ನು ತೆಗೆದು ನೋಡಲಾಗಿ, ನೆಲವು ಒಣಗಿತ್ತು.
১৩[নোহের বয়সের] ছয়শো এক বছরের প্রথম মাসের প্রথম দিনের পৃথিবীর ওপরে জল শুকনো হল; তাতে নোহ জাহাজের ছাদ খুলে দেখলেন, আর দেখ, মাটিতে জল নেই।
14 ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
১৪পরে দ্বিতীয় মাসের সাতাশ দিনের ভূমি শুকনো হল।
16 “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ.
১৬তুমি নিজের বউ, ছেলেদের ও ছেলের বউদেরকে সঙ্গে নিয়ে জাহাজ থেকে বাইরে যাও।
17 ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.
১৭আর তোমার সঙ্গী পশু, পাখি ও মাটিতে চলা সরীসৃপ প্রভৃতি মাংসিক যত জীবজন্তু আছে, সেই সমস্ত কিছুকে তোমার সঙ্গে বাইরে আন, তারা পৃথিবীতে প্রাণীময় করুক এবং পৃথিবীতে ফলবান ও বহুবংশ হোক।
18 ಹೀಗೆ ನೋಹನು, ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ಹೊರಗೆ ಬಂದನು.
১৮তখন নোহ নিজের ছেলেদের এবং নিজের স্ত্রী ও ছেলের স্ত্রীদেরকে সঙ্গে নিয়ে বের হলেন।
19 ಎಲ್ಲಾ ಮೃಗಗಳೂ ಎಲ್ಲಾ ಕ್ರಿಮಿಗಳೂ ಎಲ್ಲಾ ಪಕ್ಷಿಗಳೂ ಭೂಮಿಯಲ್ಲಿ ಹರಿದಾಡುವ ಎಲ್ಲವೂ ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯೊಳಗಿಂದ ಹೊರಗೆ ಬಂದವು.
১৯আর নিজের নিজের জাতি অনুসারে প্রত্যেক পশু, সরীসৃপ জীব ও পাখি, সমস্ত মাটিতে চলনশীল প্রাণী জাহাজ থেকে বের হল।
20 ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
২০পরে নোহ সদাপ্রভুর উদ্দেশ্যে যজ্ঞবেদি নির্মাণ করলেন এবং সমস্ত রকমের শুচি পশুর ও সমস্ত রকমের শুচি পাখির মধ্যে কতকগুলি নিয়ে বেদির ওপরে হোম করলেন।
21 ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.
২১তাতে সদাপ্রভু তার সুগন্ধ গ্রহণ করলেন, আর সদাপ্রভু মনে মনে বললেন, “আমি মানুষের জন্য মাটিকে আর অভিশাপ দেব না, কারণ বাল্যকাল পর্যন্ত মানুষের মনের কল্পনা দুষ্ট; যেমন করলাম, তেমন আর কখনও সকল প্রাণীকে ধ্বংস করব না।
22 “ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.”
২২যতদিন পৃথিবী থাকবে, ততদিন শস্য বোনার ও শস্য কাটার দিন এবং শীত ও উত্তাপ এবং গ্রীষ্মকাল ও হেমন্তকাল এবং দিন ও রাত, এই সমস্ত থেমে যাবে না।”