< ಹಗ್ಗಾಯನು 1 >

1 ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:
בִּשְׁנַ֤ת שְׁתַּ֙יִם֙ לְדָרְיָ֣וֶשׁ הַמֶּ֔לֶךְ בַּחֹ֙דֶשׁ֙ הַשִּׁשִּׁ֔י בְּי֥וֹם אֶחָ֖ד לַחֹ֑דֶשׁ הָיָ֨ה דְבַר־יְהוָ֜ה בְּיַד־חַגַּ֣י הַנָּבִ֗יא אֶל־זְרֻבָּבֶ֤ל בֶּן־שְׁאַלְתִּיאֵל֙ פַּחַ֣ת יְהוּדָ֔ה וְאֶל־יְהוֹשֻׁ֧עַ בֶּן־יְהוֹצָדָ֛ק הַכֹּהֵ֥ן הַגָּד֖וֹל לֵאמֹֽר׃
2 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”
כֹּ֥ה אָמַ֛ר יְהוָ֥ה צְבָא֖וֹת לֵאמֹ֑ר הָעָ֤ם הַזֶּה֙ אָֽמְר֔וּ לֹ֥א עֶת־בֹּ֛א עֶת־בֵּ֥ית יְהוָ֖ה לְהִבָּנֽוֹת׃ פ
3 ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:
וַֽיְהִי֙ דְּבַר־יְהוָ֔ה בְּיַד־חַגַּ֥י הַנָּבִ֖יא לֵאמֹֽר׃
4 “ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”
הַעֵ֤ת לָכֶם֙ אַתֶּ֔ם לָשֶׁ֖בֶת בְּבָתֵּיכֶ֣ם סְפוּנִ֑ים וְהַבַּ֥יִת הַזֶּ֖ה חָרֵֽב׃
5 ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.
וְעַתָּ֕ה כֹּ֥ה אָמַ֖ר יְהוָ֣ה צְבָא֑וֹת שִׂ֥ימוּ לְבַבְכֶ֖ם עַל־דַּרְכֵיכֶֽם׃
6 ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”
זְרַעְתֶּ֨ם הַרְבֵּ֜ה וְהָבֵ֣א מְעָ֗ט אָכ֤וֹל וְאֵין־לְשָׂבְעָה֙ שָׁת֣וֹ וְאֵין־לְשָׁכְרָ֔ה לָב֖וֹשׁ וְאֵין־לְחֹ֣ם ל֑וֹ וְהַ֨מִּשְׂתַּכֵּ֔ר מִשְׂתַּכֵּ֖ר אֶל־צְר֥וֹר נָקֽוּב׃ פ
7 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.
כֹּ֥ה אָמַ֖ר יְהוָ֣ה צְבָא֑וֹת שִׂ֥ימוּ לְבַבְכֶ֖ם עַל־דַּרְכֵיכֶֽם׃
8 ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ.
עֲל֥וּ הָהָ֛ר וַהֲבֵאתֶ֥ם עֵ֖ץ וּבְנ֣וּ הַבָּ֑יִת וְאֶרְצֶה־בּ֥וֹ וְאֶכָּבְדָ֖ה אָמַ֥ר יְהוָֽה׃
9 ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.
פָּנֹ֤ה אֶל־הַרְבֵּה֙ וְהִנֵּ֣ה לִמְעָ֔ט וַהֲבֵאתֶ֥ם הַבַּ֖יִת וְנָפַ֣חְתִּי ב֑וֹ יַ֣עַן מֶ֗ה נְאֻם֙ יְהוָ֣ה צְבָא֔וֹת יַ֗עַן בֵּיתִי֙ אֲשֶׁר־ה֣וּא חָרֵ֔ב וְאַתֶּ֥ם רָצִ֖ים אִ֥ישׁ לְבֵיתֽוֹ׃
10 ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
עַל־כֵּ֣ן עֲלֵיכֶ֔ם כָּלְא֥וּ שָמַ֖יִם מִטָּ֑ל וְהָאָ֖רֶץ כָּלְאָ֥ה יְבוּלָֽהּ׃
11 ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”
וָאֶקְרָ֨א חֹ֜רֶב עַל־הָאָ֣רֶץ וְעַל־הֶהָרִ֗ים וְעַל־הַדָּגָן֙ וְעַל־הַתִּיר֣וֹשׁ וְעַל־הַיִּצְהָ֔ר וְעַ֛ל אֲשֶׁ֥ר תּוֹצִ֖יא הָאֲדָמָ֑ה וְעַל־הָֽאָדָם֙ וְעַל־הַבְּהֵמָ֔ה וְעַ֖ל כָּל־יְגִ֥יעַ כַּפָּֽיִם׃ ס
12 ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.
וַיִּשְׁמַ֣ע זְרֻבָּבֶ֣ל ׀ בֶּֽן־שַׁלְתִּיאֵ֡ל וִיהוֹשֻׁ֣עַ בֶּן־יְהוֹצָדָק֩ הַכֹּהֵ֨ן הַגָּד֜וֹל וְכֹ֣ל ׀ שְׁאֵרִ֣ית הָעָ֗ם בְּקוֹל֙ יְהוָ֣ה אֱלֹֽהֵיהֶ֔ם וְעַל־דִּבְרֵי֙ חַגַּ֣י הַנָּבִ֔יא כַּאֲשֶׁ֥ר שְׁלָח֖וֹ יְהוָ֣ה אֱלֹהֵיהֶ֑ם וַיִּֽירְא֥וּ הָעָ֖ם מִפְּנֵ֥י יְהוָֽה׃
13 ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.
וַ֠יֹּאמֶר חַגַּ֞י מַלְאַ֧ךְ יְהוָ֛ה בְּמַלְאֲכ֥וּת יְהוָ֖ה לָעָ֣ם לֵאמֹ֑ר אֲנִ֥י אִתְּכֶ֖ם נְאֻם־יְהוָֽה׃
14 ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,
וַיָּ֣עַר יְהוָ֡ה אֶת־רוּחַ֩ זְרֻבָּבֶ֨ל בֶּן־שַׁלְתִּיאֵ֜ל פַּחַ֣ת יְהוּדָ֗ה וְאֶת־ר֙וּחַ֙ יְהוֹשֻׁ֤עַ בֶּן־יְהוֹצָדָק֙ הַכֹּהֵ֣ן הַגָּד֔וֹל וְֽאֶת־ר֔וּחַ כֹּ֖ל שְׁאֵרִ֣ית הָעָ֑ם וַיָּבֹ֙אוּ֙ וַיַּעֲשׂ֣וּ מְלָאכָ֔ה בְּבֵית־יְהוָ֥ה צְבָא֖וֹת אֱלֹהֵיהֶֽם׃ פ
בְּי֨וֹם עֶשְׂרִ֧ים וְאַרְבָּעָ֛ה לַחֹ֖דֶשׁ בַּשִּׁשִּׁ֑י בִּשְׁנַ֥ת שְׁתַּ֖יִם לְדָרְיָ֥וֶשׁ הַמֶּֽלֶךְ׃

< ಹಗ್ಗಾಯನು 1 >