< ಇಬ್ರಿಯರಿಗೆ ಬರೆದ ಪತ್ರಿಕೆ 11 >
1 ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.
ino ulwitiko lwa kyang'haani luno alinalwo u muunhu pa ihuvila ikiinu kimonga nuvu kangali. Sa kyang'haani ku kinu kino bado nakivoneka.
2 ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು.
Vwimila vwa iili avisukulu vitu valivonesisie ku lwitiko luvanave.
3 ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ. (aiōn )
Ku lwitiko tukagula kuuti iisi jilya pelilue kululaghilo lwa Nguluve, neke kuuti kila kino kivoneka nakikatendalue kuhumilanila ni finu fino fikale fivoneka. (aiōn )
4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
Jilyale vwimila vwa lwitiko kuuti u Habili alyamumikisie u Nguluve ilitekelo lya kufua kukila vule akavombile u Kaini. Jilyale vwimila vwa iili kuuti valya mpalile kuuti nyavwa kyang'haani uNguluve uNguluve alya palilue vwimila vwa mbonolo sino asiletile. Vwimila vwa ilio, uHabili ajighe ijivo, nambe afuile.
5 ನಂಬಿಕೆಯಿಂದಲೇ ಹನೋಕನು ಮರಣ ಹೊಂದದೆ, ಒಯ್ಯಲಾದನು. “ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.” ಅವನು ಒಯ್ಯಲಾಗುವುದಕ್ಕಿಂತ ಮುಂಚೆ ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿಹೊಂದಿದನು.
Jilyale ku lwitiko kuti uEnoko alyatolilue n'kyanya nakavuvona uvufue. “Nalyavonike, ulwakuva u Nguluve alya n'tolile” Ulwakuva jilyajovilue vwimila umwene kuti akamunoghile u Nguluve ye akyale pitolua ku akyanya.
6 ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.
Pavusila lwitiko najivwezekana kumunoghela u Nguluve lasima itike kuuti uNguluve ikukala kuuti ikuvapela uluvonolo vala vano vikum'bingilila.
7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.
Jilyale nu kulwitiko kuti uNuhu, ikiwa akanilue nu Nguluve vwimila vwa masio ghano naghakavonike, ku vumofu vwa ki Nguluve alyabtendile i safina vwimila vwa kukipoka ikikolo kya mwene. kwa kuvomba ndiki, alyahighile iisi peakava muhaasi ghwa vwakyang'haani vuno vukwisa kukilila ulwitiko.
8 ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
Jingave ku lwitiko kuti uIbulahimu, pano alya kemelilue akitika na piluta pakighavo pano panobakanoghile kukwupila ndavule uvuhasi. Akahumile kisila kukagula kukighavo kiki kinoalyale iluta.
9 ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.
Jilyale ku lwitiko kuti alikalile mu iisi ja lufingo hwene mughesi. Alikalile mumahema palikimo nu Isaka nu Yakobo, Avahaasi vaninea va lufingo lula lula.
10 ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.
Ulu lwakuuti akafumbuagha kupata ili kaja lino likagulike nu njengi ghwa mwene asava ghwe Nguluve.
11 ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು.
Lulyale lwe lwitiko kuuti u Ibrahimu, nu Sara jujuo, valyupile ingufu sa kuhola nambmbe ulwakuuti valyale va ghogholo kyongo, ulwakuva vakitike kuuti uNguluve mwitiki, juno alyavafingile kupata u mwana undiimi.
12 ಆದ್ದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಮರಳಿನಂತೆ ಅಸಂಖ್ಯವಾಗಿಯೂ ಸಂತತಿಯವರು ಹುಟ್ಟಿದರು.
kwekuuti kange kuhuma ku muunhu uju jumo juno alyapipi kufua valyaholilue avaana vano navivalilika. Valyale vinga hwene nondue sa kukya kange vinga hwene meke sa mulihanga mulubale mu nyanja.
13 ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.
Ava vooni valyafwile mulwitiko kisila kyupila ulufingo. Pa uluo, vakasivwene na pikusiseghelela pa vutali, vakkitika kuuti valyale vahesia na vakilaji pakyanya pa iisi.
14 ಇಂಥಾ ಸಂಗತಿಗಳನ್ನು ಹೇಳುವ ಜನರು ತಮ್ಮ ಸ್ವಂತ ದೇಶಕ್ಕಾಗಿ ಎದುರುನೋಡುತ್ತಿದ್ದರು.
Kuvala vano vijova amasio ndavule agha vavikila bayana kuuti vilonda iisi jivanave vavuo.
15 ಒಂದು ವೇಳೆ ತಾವು ಬಿಟ್ಟುಬಂದ ದೇಶವನ್ನು ಕುರಿತು ಅವರು ಯೋಚಿಸುತ್ತಿದ್ದರೆ, ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.
Sa kyang'haani, ndavule vasavisagha visagha i iisi jino kuvanave valya humile, ndevalyale ni numbula ja kugomoka.
16 ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.
Looli nave lulivuo, vinoghelua i iisi jino nono, jino, ja ki vulanga. Pa uluo uNguluve naivona sooni ku tambulivua Nguluve ghuvanave, ulwakuva aling'anisie ilikaja vwimila vuvanave.
17 ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
Jilyale ku lwitiko kuuti Ibulahimu ye aghelilue, akamumisie u Isaka. Ena, umwene alyupile kulukelo ulufingo, alyamumisie umwanake jujuo,
18 ಅವನ ವಿಷಯದಲ್ಲಿ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅವನಿಗೆ ಹೇಳಿದ್ದರೂ ವಾಗ್ದಾನ ಸ್ವೀಕರಿಸಿದವನು ತನ್ನ ಒಬ್ಬನೇ ಮಗನನ್ನು ಬಲಿಗಾಗಿ ಅರ್ಪಿಸಿದನು.
juno pakyanya pa mwene jikajovilue, “Kuhima kwa Isaka ikikolo kwako kitambuluagha.”
19 ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.
Ibulahimu alya kaguile kuuti uNguluve alyale ni ngufu sa kyunsusia u Isaka kuhuma muvafue, nakujova kunjovele ja maumbo, alyamwupile.
20 ನಂಬಿಕೆಯಿಂದಲೇ ಇಸಾಕನು ಮುಂದೆ ಬರಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
Jilyale ku lwitiko kuuti uIsaka alyafunyilue uYakobo nu Esau kuhusu amasio ghono ghilikwisa.
21 ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
Lulyale lwitiko kuti uYakobo ye alimuvutavike vwavkufua, akavafunyia avaanha vooni ava Yusufu. UYakobo akifunya, akeghamila palukongojo lwake.
22 ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
Jilyale ku lwitiko kuti uYusufu unsiki ghamwene ghwa kuvusililo yeghuseghelile, akajuovu pakyanya pa lwa kuhuma kuhuma kwa mwana ghwa Israeli Misiri akavalaghila kutola palikimo navene ifijeghe fya mwene.
23 ನಂಬಿಕೆಯಿಂದಲೇ ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರುವುದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
Jilyale ku lwitiko kuti uMusa, yeaholilue, alyafisilue nava amesi gha tatu navapafi vamwene ulwakuva valya mwaghile kuti ghwe mwana n'dima juno alyale nono, navakoghwipe ni ndaghilo sa ntwa.
24 ಮೋಶೆಯು ದೊಡ್ಡವನಾಗಿ ಬೆಳೆದ ಮೇಲೆ ನಂಬಿಕೆಯಿಂದಲೇ ಫರೋಹನ ಪುತ್ರಿಯ ಮಗನೆಂದು ಕರೆಯಿಸಿಕೊಳ್ಳಲು ನಿರಾಕರಿಸಿದ್ದನು.
Jilyale kulwitiko kuti uMusa, ye alyale muunhu n'goyo, alyakanile kutambulivua mwana wa minja uFarao.
25 ಮೋಶೆ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟ ಅನುಭವಿಸುವುದನ್ನೇ ಆರಿಸಿಕೊಂಡನು.
Pa uluo akasalula kuhangilanila i mumuko na vaanha va Nguluve badala jakukela nuvuhosi uvuhosi vwa nyivi sivanave ku kasiki.
26 ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.
Akasaghile isooni sa kum'bingilila u Kilisite kuti vwe vumofu vuvaha kukila ilitekelo lya ku Misiri ulwakuva akalunguvilie amaaso ghake pa luvonolo lwa nsiki ghuno ghukwisa.
27 ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.
Jilyale ku lwitiko kuti uMusa akahumila ku Misiri. Nalyasaghile ilyoojo lya Ntwa, ulwakuva alyale nulugudo kwa kulola kwajuno na ivoneka.
28 ಚೊಚ್ಚಲ ಮಕ್ಕಳನ್ನು ಸಂಹರಿಸುವ ದೂತನು ಇಸ್ರಾಯೇಲರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ ಮೋಶೆ ನಂಬಿಕೆಯಿಂದಲೇ ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದನು.
Lulyale lwitiko kuti akajikolile ipasaka na pimisila idanda, neke kuuti vunangi vwa muholua ghwa kwasia kuuti nangaghelaghe kugusa avaholua va kwasia wakwasia ghwa kighosi ghwa vaIsiraeli.
29 ನಂಬಿಕೆಯಿಂದಲೇ ಇಸ್ರಾಯೇಲರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿ ಮುಳುಗಿ ಹೋದರು.
Lulyale lwitiko kuti valyakilile mu nyanja ja shamu ndavule mu lukuve. Unsiki avaMisiri ye vighela kukila, likagulubikivua.
30 ಇಸ್ರಾಯೇಲರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ, ಅವು ಬಿದ್ದು ಹೋದದ್ದು ನಂಬಿಕೆಯಿಂದಲೇ.
Jingave ku lwitiko kuti uluvumba lwa Yeriko vukaghile pasi, ye vasyunguite ifighino lekela lubale.
31 ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.
lulyale lwitiko kuuti u Rahabu jula mwenda mwelu nalya sovile palikimo navala vano navalyale vakola, ulwakuva akavupile avapelelezi na kuvavika pa vunono.
32 ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.
Nijove kiki fijo? Ulwakuva unsiki naghukwilabkuvolelela agha Gideoni, Barak, Samsoni, Yeftha, Daudi, Samweli ni savavili,
33 ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,
vano kukilila ulwitiko vakalefisie iNtwa, vavyavombile isakyang'aani, vakupile lufingo. Vakadindile amalomo gha nyalupala,
34 ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,
vaksimisi ingufu sa mwoto, vakapungile uvutemi vwa panga, valyasosivue kuhuma mu mu vutamu, valya valyale vagumu va vulugu, vavambwisisie avasikali avahesia kukimbila.
35 ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,
Avamama valyupile avafue vavanave musila jablusetulilo. Avange valyapumisivue, kisila kwitika kulekua muvwavuke neke kuuti vavwesie kupata vwa lusetulilo ulunono fijo.
36 ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,
Avange valepumusivue kwa dhihaka nifuchapo, naamu, nambe kuvudindilo na kuvikua mu ndinde.
37 ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ
Vakatovilue na mavue. Vakadimulilue fipisi nu nsumeno. Vakadumulilue ni panga. Vakalutii ni nguvu sa ng'olo ni nguvu sa mhene valyale vafumbue, vighendelela muvuvafi kange vivombeluaamavivi
38 ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.
(ghano iisi najikanoghile kuva nagho) vihangajika muvikwavo, mufidunda, mu maghenge na mumina gha iisi.
39 ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ.
Nambe avaanhu vooniava vakafunyilue nu Nguluve vwimila vwa lwitiko luvanave, nava lyupile kino akavafingile.
40 ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ.
UNguluve alyatalile kukutupela ikinu kino kinofu, neke kuuti kisila usue navale vighesia kumemesivua.