< ಇಬ್ರಿಯರಿಗೆ ಬರೆದ ಪತ್ರಿಕೆ 4 >
1 ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.
१इसलिए जबकि उसके विश्राम में प्रवेश करने की प्रतिज्ञा अब तक है, तो हमें डरना चाहिए; ऐसा न हो, कि तुम में से कोई जन उससे वंचित रह जाए।
2 ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.
२क्योंकि हमें उन्हीं के समान सुसमाचार सुनाया गया है, पर सुने हुए वचन से उन्हें कुछ लाभ न हुआ; क्योंकि सुननेवालों के मन में विश्वास के साथ नहीं बैठा।
3 ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.
३और हम जिन्होंने विश्वास किया है, उस विश्राम में प्रवेश करते हैं; जैसा उसने कहा, “मैंने अपने क्रोध में शपथ खाई, कि वे मेरे विश्राम में प्रवेश करने न पाएँगे।” यद्यपि जगत की उत्पत्ति के समय से उसके काम हो चुके थे।
4 ಪವಿತ್ರ ವೇದದ ಯಾವುದೋ ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು, “ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂತಲೂ,
४क्योंकि सातवें दिन के विषय में उसने कहीं ऐसा कहा है, “परमेश्वर ने सातवें दिन अपने सब कामों को निपटा करके विश्राम किया।”
5 ಮೇಲಿನ ವಾಕ್ಯಕ್ಕೆ ಸಂಬಂಧಿಸಿ, “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,” ಎಂದೂ ದೇವರು ಇನ್ನೊಂದು ಕಡೆ ಹೇಳಿದ್ದಾರೆ.
५और इस जगह फिर यह कहता है, “वे मेरे विश्राम में प्रवेश न करने पाएँगे।”
6 ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು.
६तो जब यह बात बाकी है कि कितने और हैं जो उस विश्राम में प्रवेश करें, और इस्राएलियों को, जिन्हें उसका सुसमाचार पहले सुनाया गया, उन्होंने आज्ञा न मानने के कारण उसमें प्रवेश न किया।
7 ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”
७तो फिर वह किसी विशेष दिन को ठहराकर इतने दिन के बाद दाऊद की पुस्तक में उसे ‘आज का दिन’ कहता है, जैसे पहले कहा गया, “यदि आज तुम उसका शब्द सुनो, तो अपने मनों को कठोर न करो।”
8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.
८और यदि यहोशू उन्हें विश्राम में प्रवेश करा लेता, तो उसके बाद दूसरे दिन की चर्चा न होती।
9 ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.
९इसलिए जान लो कि परमेश्वर के लोगों के लिये सब्त का विश्राम बाकी है।
10 ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.
१०क्योंकि जिसने उसके विश्राम में प्रवेश किया है, उसने भी परमेश्वर के समान अपने कामों को पूरा करके विश्राम किया है।
11 ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.
११इसलिए हम उस विश्राम में प्रवेश करने का प्रयत्न करें, ऐसा न हो, कि कोई जन उनके समान आज्ञा न मानकर गिर पड़े।
12 ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
१२क्योंकि परमेश्वर का वचन जीवित, प्रबल, और हर एक दोधारी तलवार से भी बहुत तेज है, प्राण, आत्मा को, गाँठ-गाँठ, और गूदे-गूदे को अलग करके, आर-पार छेदता है; और मन की भावनाओं और विचारों को जाँचता है।
13 ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.
१३और सृष्टि की कोई वस्तु परमेश्वर से छिपी नहीं है वरन् जिसे हमें लेखा देना है, उसकी आँखों के सामने सब वस्तुएँ खुली और प्रगट हैं।
14 ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.
१४इसलिए, जब हमारा ऐसा बड़ा महायाजक है, जो स्वर्गों से होकर गया है, अर्थात् परमेश्वर का पुत्र यीशु; तो आओ, हम अपने अंगीकार को दृढ़ता से थामे रहें।
15 ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.
१५क्योंकि हमारा ऐसा महायाजक नहीं, जो हमारी निर्बलताओं में हमारे साथ दुःखी न हो सके; वरन् वह सब बातों में हमारे समान परखा तो गया, तो भी निष्पाप निकला।
16 ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.
१६इसलिए आओ, हम अनुग्रह के सिंहासन के निकट साहस बाँधकर चलें, कि हम पर दया हो, और वह अनुग्रह पाएँ, जो आवश्यकता के समय हमारी सहायता करे।