< ಇಬ್ರಿಯರಿಗೆ ಬರೆದ ಪತ್ರಿಕೆ 9 >

1 ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು.
sa prathamo niyama ArAdhanAyA vividharItibhiraihikapavitrasthAnena cha vishiShTa AsIt|
2 ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು.
yato dUShyamekaM niramIyata tasya prathamakoShThasya nAma pavitrasthAnamityAsIt tatra dIpavR^ikSho bhojanAsanaM darshanIyapUpAnAM shreNI chAsIt|
3 ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.
tatpashchAd dvitIyAyAstiraShkariNyA abhyantare. atipavitrasthAnamitinAmakaM koShThamAsIt,
4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.
tatra cha suvarNamayo dhUpAdhAraH paritaH suvarNamaNDitA niyamama njUShA chAsIt tanmadhye mAnnAyAH suvarNaghaTo hAroNasya ma njaritadaNDastakShitau niyamaprastarau,
5 ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.
tadupari cha karuNAsane ChAyAkAriNau tejomayau kirUbAvAstAm, eteShAM visheShavR^ittAntakathanAya nAyaM samayaH|
6 ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು.
eteShvIdR^ik nirmmiteShu yAjakA IshvarasevAm anutiShThanato dUShyasya prathamakoShThaM nityaM pravishanti|
7 ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.
kintu dvitIyaM koShThaM prativarSham ekakR^itva ekAkinA mahAyAjakena pravishyate kintvAtmanimittaM lokAnAm aj nAnakR^itapApAnA ncha nimittam utsarjjanIyaM rudhiram anAdAya tena na pravishyate|
8 ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ
ityanena pavitra AtmA yat j nApayati tadidaM tat prathamaM dUShyaM yAvat tiShThati tAvat mahApavitrasthAnagAmI panthA aprakAshitastiShThati|
9 ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.
tachcha dUShyaM varttamAnasamayasya dR^iShTAntaH, yato hetoH sAmprataM saMshodhanakAlaM yAvad yannirUpitaM tadanusArAt sevAkAriNo mAnasikasiddhikaraNe. asamarthAbhiH
10 ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.
kevalaM khAdyapeyeShu vividhamajjaneShu cha shArIrikarItibhi ryuktAni naivedyAni balidAnAni cha bhavanti|
11 ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.
aparaM bhAvima NgalAnAM mahAyAjakaH khrIShTa upasthAyAhastanirmmitenArthata etatsR^iShTe rbahirbhUtena shreShThena siddhena cha dUShyeNa gatvA
12 ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು. (aiōnios g166)
ChAgAnAM govatsAnAM vA rudhiram anAdAya svIyarudhiram AdAyaikakR^itva eva mahApavitrasthAnaM pravishyAnantakAlikAM muktiM prAptavAn| (aiōnios g166)
13 ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು.
vR^iShaChAgAnAM rudhireNa gavIbhasmanaH prakShepeNa cha yadyashuchilokAH shArIrishuchitvAya pUyante,
14 ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ? (aiōnios g166)
tarhi kiM manyadhve yaH sadAtanenAtmanA niShkala Nkabalimiva svameveshvarAya dattavAn, tasya khrIShTasya rudhireNa yuShmAkaM manAMsyamareshvarasya sevAyai kiM mR^ityujanakebhyaH karmmabhyo na pavitrIkAriShyante? (aiōnios g166)
15 ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ. (aiōnios g166)
sa nUtananiyamasya madhyastho. abhavat tasyAbhiprAyo. ayaM yat prathamaniyamala NghanarUpapApebhyo mR^ityunA muktau jAtAyAm AhUtalokA anantakAlIyasampadaH pratij nAphalaM labheran| (aiōnios g166)
16 ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು.
yatra niyamo bhavati tatra niyamasAdhakasya bale rmR^ityunA bhavitavyaM|
17 ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ.
yato hatena balinA niyamaH sthirIbhavati kintu niyamasAdhako bali ryAvat jIvati tAvat niyamo nirarthakastiShThati|
18 ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ.
tasmAt sa pUrvvaniyamo. api rudhirapAtaM vinA na sAdhitaH|
19 ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.
phalataH sarvvalokAn prati vyavasthAnusAreNa sarvvA Aj nAH kathayitvA mUsA jalena sindUravarNalomnA eShovatR^iNena cha sArddhaM govatsAnAM ChAgAnA ncha rudhiraM gR^ihItvA granthe sarvvalokeShu cha prakShipya babhAShe,
20 ಹಾಗೆ ಚಿಮುಕಿಸುವಾಗ ಮೋಶೆಯು, “ಇದು ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯ ರಕ್ತ,” ಎಂದು ಹೇಳಿದನು.
yuShmAn adhIshvaro yaM niyamaM nirUpitavAn tasya rudhirametat|
21 ಅದೇ ರೀತಿಯಾಗಿ ಮೋಶೆಯು ಗುಡಾರದ ಮೇಲೆಯೂ ಸೇವೆಯ ಎಲ್ಲಾ ಉಪ ಪಾತ್ರೆಗಳ ಮೇಲೆಯೂ ರಕ್ತವನ್ನು ಚಿಮುಕಿಸಿದನು.
tadvat sa dUShye. api sevArthakeShu sarvvapAtreShu cha rudhiraM prakShiptavAn|
22 ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.
aparaM vyavasthAnusAreNa prAyashaH sarvvANi rudhireNa pariShkriyante rudhirapAtaM vinA pApamochanaM na bhavati cha|
23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ.
aparaM yAni svargIyavastUnAM dR^iShTAntAsteShAm etaiH pAvanam Avashyakam AsIt kintu sAkShAt svargIyavastUnAm etebhyaH shreShThe rbalidAnaiH pAvanamAvashyakaM|
24 ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.
yataH khrIShTaH satyapavitrasthAnasya dR^iShTAntarUpaM hastakR^itaM pavitrasthAnaM na praviShTavAn kintvasmannimittam idAnIm Ishvarasya sAkShAd upasthAtuM svargameva praviShTaH|
25 ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.
yathA cha mahAyAjakaH prativarShaM parashoNitamAdAya mahApavitrasthAnaM pravishati tathA khrIShTena punaH punarAtmotsargo na karttavyaH,
26 ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು. (aiōn g165)
karttavye sati jagataH sR^iShTikAlamArabhya bahuvAraM tasya mR^ityubhoga Avashyako. abhavat; kintvidAnIM sa AtmotsargeNa pApanAshArtham ekakR^itvo jagataH sheShakAle prachakAshe| (aiōn g165)
27 ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.
aparaM yathA mAnuShasyaikakR^itvo maraNaM tat pashchAd vichAro nirUpito. asti,
28 ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.
tadvat khrIShTo. api bahUnAM pApavahanArthaM balirUpeNaikakR^itva utsasR^ije, aparaM dvitIyavAraM pApAd bhinnaH san ye taM pratIkShante teShAM paritrANArthaM darshanaM dAsyati|

< ಇಬ್ರಿಯರಿಗೆ ಬರೆದ ಪತ್ರಿಕೆ 9 >