< ಇಬ್ರಿಯರಿಗೆ ಬರೆದ ಪತ್ರಿಕೆ 1 >

1 ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,
पुराने ज़माने में ख़ुदा ने बाप — दादा से हिस्सा — ब — हिस्सा और तरह — ब — तरह नबियों के ज़रिए कलाम करके,
2 ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು. (aiōn g165)
इस ज़माने के आख़िर में हम से बेटे के ज़रिए कलाम किया, जिसे उसने सब चीज़ों का वारिस ठहराया और जिसके वसीले से उसने आलम भी पैदा किए। (aiōn g165)
3 ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.
वो उसके जलाल की रोशनी और उसकी ज़ात का नक़्श होकर सब चीज़ों को अपनी क़ुदरत के कलाम से संभालता है। वो गुनाहों को धोकर 'आलम — ए — बाला पर ख़ुदा की दहनी तरफ़ जा बैठा,
4 ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.
और फ़रिश्तों से इस क़दर बड़ा हो गया, जिस क़दर उसने मीरास में उनसे अफ़ज़ल नाम पाया।
5 ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದೂ, “ನಾನು ಆತನ ತಂದೆಯಾಗಿರುವೆನು; ಆತನು ನನಗೆ ಮಗನಾಗಿರುವನು!”
क्यूँकि फ़रिश्तों में से उसने कब किसी से कहा, “तू मेरा बेटा है, आज तू मुझ से पैदा हुआ?” और फिर ये, “मैं उसका बाप हूँगा?”
6 ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.
और जब पहलौठे को दुनियाँ में फिर लाता है, तो कहता है, “ख़ुदा के सब फ़रिश्ते उसे सिज्दा करें।”
7 ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!” ಎಂದು ಹೇಳಿದ್ದಾರೆ.
और वो अपने फ़रिश्तों के बारे में ये कहता है, “वो अपने फ़रिश्तों को हवाएँ, और अपने ख़ादिमों को आग के शो'ले बनाता है।”
8 ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ. (aiōn g165)
मगर बेटे के बारे में कहता है, “ऐ ख़ुदा, तेरा तख़्त हमेशा से हमेशा तक रहेगा, और तेरी बादशाही की 'लाठी रास्तबाज़ी की 'लाठी है। (aiōn g165)
9 ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”
तू ने रास्तबाज़ी से मुहब्बत और बदकारी से 'अदावत रख्खी, इसी वजह से ख़ुदा, या'नी तेरे ख़ुदा ने ख़ुशी के तेल से तेरे साथियों की बनिस्बत तुझे ज़्यादा मसह किया।”
10 ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.
और ये कि, “ऐ ख़ुदावन्द! तू ने शुरू में ज़मीन की नीव डाली, और आसमान तेरे हाथ की कारीगरी है।
11 ಅವು ನಾಶವಾಗುವವು. ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
वो मिट जाएँगे, मगर तू बाक़ी रहेगा; और वो सब पोशाक की तरह पुराने हो जाएँगे।
12 ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, ಅವು ವಸ್ತ್ರದಂತೆ ಮಾರ್ಪಡುತ್ತವೆ. ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!”
तू उन्हें चादर की तरह लपेटेगा, और वो पोशाक की तरह बदल जाएँगे: मगर तू वही रहेगा और तेरे साल ख़त्म न होंगे।”
13 ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?
लेकिन उसने फ़रिश्तों में से किसी के बारे में कब कहा, “तू मेरी दहनी तरफ़ बैठ, जब तक मैं तेरे दुश्मनों को तेरे पाँव तले की चौकी न कर दूँ?”
14 ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?
क्या वो सब ख़िदमत गुज़ार रूहें नहीं, जो नजात की मीरास पानेवालों की ख़ातिर ख़िदमत को भेजी जाती हैं?

< ಇಬ್ರಿಯರಿಗೆ ಬರೆದ ಪತ್ರಿಕೆ 1 >