< ಹೋಶೇಯನು 1 >

1 ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು.
[前編:歐瑟亞結婚的意義]一:烏齊雅、約堂、[阿哈次和希則克亞]為猶大王,約阿士的兒子雅洛貝罕為以色列王時,上主有話傳給貝厄黎的兒子歐瑟亞。
2 ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.
上主開始藉歐瑟亞發言時,上主對歐瑟亞說:「你去娶一個娼婦為妻,讓她生淫亂的子女,因為此地淫亂放蕩,背離了上主。」
3 ಆಗ ಅವನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಬ್ಬ ಮಗನನ್ನು ಹೆತ್ತಳು.
歐瑟亞便去娶了狄布拉因的女兒默爾為妻;她懷孕,給他生了一個兒子。
4 ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.
上主對歐瑟亞說:「你要給他起名叫依次勒耳,因為過不久,我要向耶胡家追討依次勒耳的血債,要消滅以色列家的王室。
5 ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು.
到那一天,我必要在依次勒耳山谷折斷以色列的弓。」
6 ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.
哥默爾再懷孕,生了一個女兒,上主對歐瑟亞說:「你要給她起名叫羅魯阿瑪 (不受愛憐者,) 因為我不再愛憐以色列家,以致我不再寬宥他們。
7 ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.
但我要愛憐猶大家族,要拯救他們,因為我上主是他們的天主;但是我不以弓、弩、刀劍、戰爭、戰馬和騎士拯救他們。
8 ಗೋಮೆರಳು ಲೋರುಹಾಮಾಳನ್ನು ಎದೆಹಾಲಿನ ಸೇವನೆಯಿಂದ ಬಿಡಿಸಿದ ಮೇಲೆ ಪುನಃ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
羅魯阿瑪斷奶之後,哥默爾又懷孕,生了一個兒子。
9 ಆಗ ಯೆಹೋವ ದೇವರು, “‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.
上主說:「你給他起名叫羅阿米 (非我人民),因為你們已不是我的人民,我已也不是你們的的上主。」
10 “ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.
以色列子民的數目將如海邊的沙粒,不可斗量,不可勝數;在那裏人曾對他們說:「你們不是我的人民。」在那裏人也要對他們說:「你們是永生天主的人民。」
11 ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.
猶大子民和以色列子民將在一起,要為自己選定一個首領;他們要由此地擴展,因為依次勒耳的日子要成為偉大的。

< ಹೋಶೇಯನು 1 >