< ಹೋಶೇಯನು 11 >

1 “ಇಸ್ರಾಯೇಲನು ಹುಡುಗನಾಗಿದ್ದಾಗ, ನಾನು ಅವನನ್ನು ಪ್ರೀತಿ ಮಾಡಿದೆನು ಮತ್ತು ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು.
わたしはイスラエルの幼い時、これを愛した。わたしはわが子をエジプトから呼び出した。
2 ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
わたしが呼ばわるにしたがって、彼らはいよいよわたしから遠ざかり、もろもろのバアルに犠牲をささげ、刻んだ像に香をたいた。
3 ನಾನು ಎಫ್ರಾಯೀಮಿನ ತೋಳುಗಳನ್ನು ಹಿಡಿದು ನಡೆಯುವುದನ್ನು ಕಲಿಸಿದೆನು. ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.
わたしはエフライムに歩むことを教え、彼らをわたしの腕にいだいた。しかし彼らはわたしにいやされた事を知らなかった。
4 ನಾನು ಅವರನ್ನು ಮನುಷ್ಯನ ಹಗ್ಗಗಳಿಂದಲೂ, ಪ್ರೀತಿಯ ಬಂಧನಗಳಿಂದಲೂ ಎಳೆದೆನು. ಅವರಿಗೆ ನಾನು ಚಿಕ್ಕ ಮಗುವನ್ನು ಕೆನ್ನೆಯವರೆಗೆ ಎತ್ತುವವರಂತೆ ಇದ್ದೆ, ಮತ್ತು ನಾನು ಅವರಿಗೆ ಬಾಗಿ ತಿನ್ನಿಸುತ್ತಿದ್ದೆ.
わたしはあわれみの綱、すなわち愛のひもで彼らを導いた。わたしは彼らに対しては、あごから、くびきをはずす者のようになり、かがんで彼らに食物を与えた。
5 “ಅವರು ಮಾನಸಾಂತರಪಡಲು ನಿರಾಕರಿಸಿದ್ದರಿಂದ, ಪುನಃ ಈಜಿಪ್ಟಿಗೆ ಹಿಂದಿರುಗುವರು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವರು.
彼らはエジプトの地に帰り、アッスリヤびとが彼らの王となる。彼らがわたしに帰ることを拒んだからである。
6 ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.
つるぎは、そのもろもろの町にあれ狂い、その門の貫の木を砕き、その城の中に彼らを滅ぼす。
7 ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.
わが民はわたしからそむき去ろうとしている。それゆえ、彼らはくびきをかけられ、これを除きうる者はひとりもいない。
8 “ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.
エフライムよ、どうして、あなたを捨てることができようか。イスラエルよ、どうしてあなたを渡すことができようか。どうしてあなたをアデマのようにすることができようか。どうしてあなたをゼボイムのように扱うことができようか。わたしの心は、わたしのうちに変り、わたしのあわれみは、ことごとくもえ起っている。
9 ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ.
わたしはわたしの激しい怒りをあらわさない。わたしは再びエフライムを滅ぼさない。わたしは神であって、人ではなく、あなたのうちにいる聖なる者だからである。わたしは滅ぼすために臨むことをしない。
10 ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.
彼らは主に従って歩む。主はししのほえるように声を出される。主が声を出されると、子らはおののきつつ西から来る。
11 ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
彼らはエジプトから鳥のように、アッスリヤの地から、はとのように急いで来る。わたしは彼らをその家に帰らせると主は言われる。
12 ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.
エフライムは偽りをもって、わたしを囲み、イスラエルの家は欺きをもって、わたしを囲んだ。しかしユダはなお神に知られ、聖なる者に向かって真実である。

< ಹೋಶೇಯನು 11 >