< ಹೋಶೇಯನು 14 >

1 ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.
שׁ֚וּבָה יִשְׂרָאֵ֔ל עַ֖ד יְהוָ֣ה אֱלֹהֶ֑יךָ כִּ֥י כָשַׁ֖לְתָּ בַּעֲוֹנֶֽךָ׃
2 ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.
קְח֤וּ עִמָּכֶם֙ דְּבָרִ֔ים וְשׁ֖וּבוּ אֶל־יְהוָ֑ה אִמְר֣וּ אֵלָ֗יו כָּל־תִּשָּׂ֤א עָוֹן֙ וְקַח־ט֔וֹב וּֽנְשַׁלְּמָ֥ה פָרִ֖ים שְׂפָתֵֽינוּ׃
3 ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”
אַשּׁ֣וּר ׀ לֹ֣א יוֹשִׁיעֵ֗נוּ עַל־סוּס֙ לֹ֣א נִרְכָּ֔ב וְלֹא־נֹ֥אמַר ע֛וֹד אֱלֹהֵ֖ינוּ לְמַעֲשֵׂ֣ה יָדֵ֑ינוּ אֲשֶׁר־בְּךָ֖ יְרֻחַ֥ם יָתֽוֹם׃
4 “ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.
אֶרְפָּא֙ מְשׁ֣וּבָתָ֔ם אֹהֲבֵ֖ם נְדָבָ֑ה כִּ֛י שָׁ֥ב אַפִּ֖י מִמֶּֽנּוּ׃
5 ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.
אֶהְיֶ֤ה כַטַּל֙ לְיִשְׂרָאֵ֔ל יִפְרַ֖ח כַּשּֽׁוֹשַׁנָּ֑ה וְיַ֥ךְ שָׁרָשָׁ֖יו כַּלְּבָנֽוֹן׃
6 ಅವನ ಕೊಂಬೆಗಳು ಹರಡಿಕೊಂಡು, ಅವನ ಸೌಂದರ್ಯವು ಎಣ್ಣೆಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ದೇವದಾರಿನ ಹಾಗೆಯೂ ಇರುವುದು.
יֵֽלְכוּ֙ יֹֽנְקוֹתָ֔יו וִיהִ֥י כַזַּ֖יִת הוֹד֑וֹ וְרֵ֥יחַֽ ל֖וֹ כַּלְּבָנֽוֹן׃
7 ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.
יָשֻׁ֙בוּ֙ יֹשְׁבֵ֣י בְצִלּ֔וֹ יְחַיּ֥וּ דָגָ֖ן וְיִפְרְח֣וּ כַגָּ֑פֶן זִכְר֖וֹ כְּיֵ֥ין לְבָנֽוֹן׃ ס
8 ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”
אֶפְרַ֕יִם מַה־לִּ֥י ע֖וֹד לָֽעֲצַבִּ֑ים אֲנִ֧י עָנִ֣יתִי וַאֲשׁוּרֶ֗נּוּ אֲנִי֙ כִּבְר֣וֹשׁ רַֽעֲנָ֔ן מִמֶּ֖נִּי פֶּרְיְךָ֥ נִמְצָֽא׃
9 ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.
מִ֤י חָכָם֙ וְיָ֣בֵֽן אֵ֔לֶּה נָב֖וֹן וְיֵֽדָעֵ֑ם כִּֽי־יְשָׁרִ֞ים דַּרְכֵ֣י יְהוָ֗ה וְצַדִּקִים֙ יֵ֣לְכוּ בָ֔ם וּפֹשְׁעִ֖ים יִכָּ֥שְׁלוּ בָֽם׃

< ಹೋಶೇಯನು 14 >