< ಹೋಶೇಯನು 3 >
1 ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.
여호와께서 내게 이르시되 이스라엘 자손이 다른 신을 섬기고 건포도 떡을 즐길지라도 여호와가 저희를 사랑하나니 너는 또 가서 타인에게 연애를 받아 음부된 그 여인을 사랑하라 하시기로
2 ಅಂತೆಯೇ ನಾನು ಅವಳನ್ನು ನನಗಾಗಿ ಹದಿನೈದು ಶೆಕೆಲ್ ಬೆಳ್ಳಿ ಮತ್ತು ಸುಮಾರು ಒಂದು ಹೋಮೆರ್ ಹಾಗೂ ಒಂದು ಲೆಥೆಕ ಜವೆಗೋಧಿಗೂ ಕೊಂಡುಕೊಂಡೆನು.
내가 은 열다섯 개와 보리 한 호멜 반으로 나를 위하여 저를 사고
3 ನಾನು ಅವಳಿಗೆ, “ನನ್ನೊಂದಿಗೆ ಬಹಳ ದಿವಸಗಳು ನನಗಾಗಿ ಇರಬೇಕು. ನೀನು ವ್ಯಭಿಚಾರವನ್ನು ಮಾಡಬಾರದು. ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಿನ್ನೊಂದಿಗೆ ಇರುವೆನು,” ಎಂದು ಹೇಳಿದೆನು.
저에게 이르기를 너는 많은 날 동안 나와 함께 지내고 행음하지 말며 다른 남자를 좇지 말라 나도 네게 그리하리라 하였노라
4 ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.
이스라엘 자손들이 많은 날 동안 왕도 없고 군도 없고 제사도 없고 주상도 없고 에봇도 없고 드라빔도 없이 지내다가
5 ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.
그 후에 저희가 돌아와서 그 하나님 여호와와 그 왕 다윗을 구하고 말일에는 경외하므로 여호와께로 와 그 은총으로 나아가리라