< ಹೋಶೇಯನು 4 >

1 ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.
שִׁמְע֥וּ דְבַר־יְהוָ֖ה בְּנֵ֣י יִשְׂרָאֵ֑ל כִּ֣י רִ֤יב לַֽיהוָה֙ עִם־יוֹשְׁבֵ֣י הָאָ֔רֶץ כִּ֠י אֵין־אֱמֶ֧ת וְֽאֵין־חֶ֛סֶד וְאֵֽין־דַּ֥עַת אֱלֹהִ֖ים בָּאָֽרֶץ׃
2 ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.
אָלֹ֣ה וְכַחֵ֔שׁ וְרָצֹ֥חַ וְגָנֹ֖ב וְנָאֹ֑ף פָּרָ֕צוּ וְדָמִ֥ים בְּדָמִ֖ים נָגָֽעוּ׃
3 ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.
עַל־כֵּ֣ן ׀ תֶּאֱבַ֣ל הָאָ֗רֶץ וְאֻמְלַל֙ כָּל־יוֹשֵׁ֣ב בָּ֔הּ בְּחַיַּ֥ת הַשָּׂדֶ֖ה וּבְע֣וֹף הַשָּׁמָ֑יִם וְגַם־דְּגֵ֥י הַיָּ֖ם יֵאָסֵֽפוּ׃
4 “ಆದರೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವರನ್ನು ಖಂಡಿಸದಿರಲಿ. ಏಕೆಂದರೆ ನಿಮ್ಮ ಜನರೆಲ್ಲರೂ ಯಾಜಕನೊಂದಿಗೆ ವಾದಿಸುವವರಾಗಿದ್ದಾರೆ.
אַ֥ךְ אִ֛ישׁ אַל־יָרֵ֖ב וְאַל־יוֹכַ֣ח אִ֑ישׁ וְעַמְּךָ֖ כִּמְרִיבֵ֥י כֹהֵֽן׃
5 ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ. ಪ್ರವಾದಿಗಳು ನಿನ್ನ ಸಂಗಡ ಮುಗ್ಗರಿಸಿಬೀಳುವರು. ಆದ್ದರಿಂದ ನಾನು ನಿನ್ನ ತಾಯಿಯನ್ನು ನಾಶಮಾಡುವೆನು.
וְכָשַׁלְתָּ֣ הַיּ֔וֹם וְכָשַׁ֧ל גַּם־נָבִ֛יא עִמְּךָ֖ לָ֑יְלָה וְדָמִ֖יתִי אִמֶּֽךָ׃
6 ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.
נִדְמ֥וּ עַמִּ֖י מִבְּלִ֣י הַדָּ֑עַת כִּֽי־אַתָּ֞ה הַדַּ֣עַת מָאַ֗סְתָּ וְאֶמְאָֽסְאךָ֙ מִכַּהֵ֣ן לִ֔י וַתִּשְׁכַּח֙ תּוֹרַ֣ת אֱלֹהֶ֔יךָ אֶשְׁכַּ֥ח בָּנֶ֖יךָ גַּם־אָֽנִי׃
7 ಯಾಜಕರು ಹೆಚ್ಚಿದ ಹಾಗೆಲ್ಲಾ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ. ಆದ್ದರಿಂದ ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.
כְּרֻבָּ֖ם כֵּ֣ן חָֽטְאוּ־לִ֑י כְּבוֹדָ֖ם בְּקָל֥וֹן אָמִֽיר׃
8 ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ.
חַטַּ֥את עַמִּ֖י יֹאכֵ֑לוּ וְאֶל־עֲוֹנָ֖ם יִשְׂא֥וּ נַפְשֽׁוֹ׃
9 ಯಾಜಕನು ಹೇಗೋ ಹಾಗೆಯೇ ಜನರು ಇರುವರು. ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವೆನು.
וְהָיָ֥ה כָעָ֖ם כַּכֹּהֵ֑ן וּפָקַדְתִּ֤י עָלָיו֙ דְּרָכָ֔יו וּמַעֲלָלָ֖יו אָשִׁ֥יב לֽוֹ׃
10 “ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ. ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರನ್ನೇ ಬಿಟ್ಟುಬಿಟ್ಟಿದ್ದಾರೆ.
וְאָֽכְלוּ֙ וְלֹ֣א יִשְׂבָּ֔עוּ הִזְנ֖וּ וְלֹ֣א יִפְרֹ֑צוּ כִּֽי־אֶת־יְהוָ֥ה עָזְב֖וּ לִשְׁמֹֽר׃
11 ಮದ್ಯಪಾನ, ದ್ರಾಕ್ಷಾರಸ ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ.
זְנ֛וּת וְיַ֥יִן וְתִיר֖וֹשׁ יִֽקַּֽח־לֵֽב׃
12 ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.
עַמִּי֙ בְּעֵצ֣וֹ יִשְׁאָ֔ל וּמַקְל֖וֹ יַגִּ֣יד ל֑וֹ כִּ֣י ר֤וּחַ זְנוּנִים֙ הִתְעָ֔ה וַיִּזְנ֖וּ מִתַּ֥חַת אֱלֹהֵיהֶֽם׃
13 ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.
עַל־רָאשֵׁ֨י הֶהָרִ֜ים יְזַבֵּ֗חוּ וְעַל־הַגְּבָעוֹת֙ יְקַטֵּ֔רוּ תַּ֣חַת אַלּ֧וֹן וְלִבְנֶ֛ה וְאֵלָ֖ה כִּ֣י ט֣וֹב צִלָּ֑הּ עַל־כֵּ֗ן תִּזְנֶ֙ינָה֙ בְּנ֣וֹתֵיכֶ֔ם וְכַלּוֹתֵיכֶ֖ם תְּנָאַֽפְנָה׃
14 “ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.
לֹֽא־אֶפְק֨וֹד עַל־בְּנוֹתֵיכֶ֜ם כִּ֣י תִזְנֶ֗ינָה וְעַל־כַּלּֽוֹתֵיכֶם֙ כִּ֣י תְנָאַ֔פְנָה כִּי־הֵם֙ עִם־הַזֹּנ֣וֹת יְפָרֵ֔דוּ וְעִם־הַקְּדֵשׁ֖וֹת יְזַבֵּ֑חוּ וְעָ֥ם לֹֽא־יָבִ֖ין יִלָּבֵֽט׃
15 “ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.
אִם־זֹנֶ֤ה אַתָּה֙ יִשְׂרָאֵ֔ל אַל־יֶאְשַׁ֖ם יְהוּדָ֑ה וְאַל־תָּבֹ֣אוּ הַגִּלְגָּ֗ל וְאַֽל־תַּעֲלוּ֙ בֵּ֣ית אָ֔וֶן וְאַל־תִּשָּׁבְע֖וּ חַי־יְהוָֽה׃
16 ಹಠಮಾರಿ ಹಸುವಿನ ಹಾಗೆ ಇಸ್ರಾಯೇಲು ಹಟಮಾರಿಯಾಗಿದೆ. ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು?
כִּ֚י כְּפָרָ֣ה סֹֽרֵרָ֔ה סָרַ֖ר יִשְׂרָאֵ֑ל עַתָּה֙ יִרְעֵ֣ם יְהוָ֔ה כְּכֶ֖בֶשׂ בַּמֶּרְחָֽב׃
17 ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ. ಅವನನ್ನು ಅವನಷ್ಟಕ್ಕೆ ಬಿಟ್ಟುಬಿಡು.
חֲב֧וּר עֲצַבִּ֛ים אֶפְרָ֖יִם הַֽנַּֽח־לֽוֹ׃
18 ಅವರು ಮಿತಿಮೀರಿ ಕುಡಿಯುತ್ತಾರೆ. ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ. ಅವರನ್ನು ಆಳುವವರು ಅವಮಾನ ಕಾರ್ಯಗಳಲ್ಲಿ ಇಷ್ಟಪಡುತ್ತಾರೆ.
סָ֖ר סָבְאָ֑ם הַזְנֵ֣ה הִזְנ֔וּ אָהֲב֥וּ הֵב֛וּ קָל֖וֹן מָגִנֶּֽיהָ׃
19 ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸಿದೆ. ಅವರು ತಮ್ಮ ಬಲಿಗಳಿಂದ ನಾಚಿಕೆಪಡುವರು.
צָרַ֥ר ר֛וּחַ אוֹתָ֖הּ בִּכְנָפֶ֑יהָ וְיֵבֹ֖שׁוּ מִזִּבְחוֹתָֽם ס

< ಹೋಶೇಯನು 4 >