< ಹೋಶೇಯನು 8 >

1 “ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.
“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
2 ಇಸ್ರಾಯೇಲಿನವರು, ‘ನನ್ನ ದೇವರೇ, ನಾವು ನಿಮ್ಮನ್ನು ತಿಳಿದಿದ್ದೇವೆ,’ ಎಂದು ನನಗೆ ಕೂಗುತ್ತಿದ್ದಾರೆ.
ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.
3 ಆದರೆ ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಒಬ್ಬ ಶತ್ರುವು ಅವನನ್ನು ಹಿಂದಟ್ಟುವನು.
ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.
4 ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.
5 ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ?
ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?
6 ಅವರು ಇಸ್ರಾಯೇಲಿನಿಂದ ಬಂದವರು. ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. ಅದು ದೇವರಲ್ಲ, ಆದರೆ ಸಮಾರ್ಯದ ಬಸವನನ್ನು ಚೂರುಚೂರಾಗುವುದು.
ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
7 “ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.
ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.
8 ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.
ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.
9 ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.
ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.
10 ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.
೧೦ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.
11 “ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ.
೧೧ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.
12 ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.
೧೨ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.
13 ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.
೧೩ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
14 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”
೧೪ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”

< ಹೋಶೇಯನು 8 >