< ಯೆಶಾಯನು 1 >

1 ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.
חֲזוֹן֙ יְשַֽׁעְיָ֣הוּ בֶן־אָמ֔וֹץ אֲשֶׁ֣ר חָזָ֔ה עַל־יְהוּדָ֖ה וִירוּשָׁלִָ֑ם בִּימֵ֨י עֻזִּיָּ֧הוּ יוֹתָ֛ם אָחָ֥ז יְחִזְקִיָּ֖הוּ מַלְכֵ֥י יְהוּדָֽה׃
2 ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
שִׁמְע֤וּ שָׁמַ֙יִם֙ וְהַאֲזִ֣ינִי אֶ֔רֶץ כִּ֥י יְהוָ֖ה דִּבֵּ֑ר בָּנִים֙ גִּדַּ֣לְתִּי וְרוֹמַ֔מְתִּי וְהֵ֖ם פָּ֥שְׁעוּ בִֽי׃
3 ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”
יָדַ֥ע שׁוֹר֙ קֹנֵ֔הוּ וַחֲמ֖וֹר אֵב֣וּס בְּעָלָ֑יו יִשְׂרָאֵל֙ לֹ֣א יָדַ֔ע עַמִּ֖י לֹ֥א הִתְבּוֹנָֽן׃
4 ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.
ה֣וֹי ׀ גּ֣וֹי חֹטֵ֗א עַ֚ם כֶּ֣בֶד עָוֹ֔ן זֶ֣רַע מְרֵעִ֔ים בָּנִ֖ים מַשְׁחִיתִ֑ים עָזְב֣וּ אֶת־יְהוָ֗ה נִֽאֲצ֛וּ אֶת־קְד֥וֹשׁ יִשְׂרָאֵ֖ל נָזֹ֥רוּ אָחֽוֹר׃
5 ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.
עַ֣ל מֶ֥ה תֻכּ֛וּ ע֖וֹד תּוֹסִ֣יפוּ סָרָ֑ה כָּל־רֹ֣אשׁ לָחֳלִ֔י וְכָל־לֵבָ֖ב דַּוָּֽי׃
6 ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ, ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಿಲ್ಲ.
מִכַּף־רֶ֤גֶל וְעַד־רֹאשׁ֙ אֵֽין־בּ֣וֹ מְתֹ֔ם פֶּ֥צַע וְחַבּוּרָ֖ה וּמַכָּ֣ה טְרִיָּ֑ה לֹא־זֹ֙רוּ֙ וְלֹ֣א חֻבָּ֔שׁוּ וְלֹ֥א רֻכְּכָ֖ה בַּשָּֽׁמֶן׃
7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.
אַרְצְכֶ֣ם שְׁמָמָ֔ה עָרֵיכֶ֖ם שְׂרֻפ֣וֹת אֵ֑שׁ אַדְמַתְכֶ֗ם לְנֶגְדְּכֶם֙ זָרִים֙ אֹכְלִ֣ים אֹתָ֔הּ וּשְׁמָמָ֖ה כְּמַהְפֵּכַ֥ת זָרִֽים׃
8 ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.
וְנוֹתְרָ֥ה בַת־צִיּ֖וֹן כְּסֻכָּ֣ה בְכָ֑רֶם כִּמְלוּנָ֥ה בְמִקְשָׁ֖ה כְּעִ֥יר נְצוּרָֽה׃
9 ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
לוּלֵי֙ יְהוָ֣ה צְבָא֔וֹת הוֹתִ֥יר לָ֛נוּ שָׂרִ֖יד כִּמְעָ֑ט כִּסְדֹ֣ם הָיִ֔ינוּ לַעֲמֹרָ֖ה דָּמִֽינוּ׃ ס
10 ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.
שִׁמְע֥וּ דְבַר־יְהוָ֖ה קְצִינֵ֣י סְדֹ֑ם הַאֲזִ֛ינוּ תּוֹרַ֥ת אֱלֹהֵ֖ינוּ עַ֥ם עֲמֹרָֽה׃
11 “ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.
לָמָּה־לִּ֤י רֹב־זִבְחֵיכֶם֙ יֹאמַ֣ר יְהוָ֔ה שָׂבַ֛עְתִּי עֹל֥וֹת אֵילִ֖ים וְחֵ֣לֶב מְרִיאִ֑ים וְדַ֨ם פָּרִ֧ים וּכְבָשִׂ֛ים וְעַתּוּדִ֖ים לֹ֥א חָפָֽצְתִּי׃
12 ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ, ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು.
כִּ֣י תָבֹ֔אוּ לֵרָא֖וֹת פָּנָ֑י מִי־בִקֵּ֥שׁ זֹ֛את מִיֶּדְכֶ֖ם רְמֹ֥ס חֲצֵרָֽי׃
13 ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.
לֹ֣א תוֹסִ֗יפוּ הָבִיא֙ מִנְחַת־שָׁ֔וְא קְטֹ֧רֶת תּוֹעֵבָ֛ה הִ֖יא לִ֑י חֹ֤דֶשׁ וְשַׁבָּת֙ קְרֹ֣א מִקְרָ֔א לֹא־אוּכַ֥ל אָ֖וֶן וַעֲצָרָֽה׃
14 ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
חָדְשֵׁיכֶ֤ם וּמוֹעֲדֵיכֶם֙ שָׂנְאָ֣ה נַפְשִׁ֔י הָי֥וּ עָלַ֖י לָטֹ֑רַח נִלְאֵ֖יתִי נְשֹֽׂא׃
15 ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!
וּבְפָרִשְׂכֶ֣ם כַּפֵּיכֶ֗ם אַעְלִ֤ים עֵינַי֙ מִכֶּ֔ם גַּ֛ם כִּֽי־תַרְבּ֥וּ תְפִלָּ֖ה אֵינֶ֣נִּי שֹׁמֵ֑עַ יְדֵיכֶ֖ם דָּמִ֥ים מָלֵֽאוּ׃
16 “ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.
רַחֲצוּ֙ הִזַּכּ֔וּ הָסִ֛ירוּ רֹ֥עַ מַעַלְלֵיכֶ֖ם מִנֶּ֣גֶד עֵינָ֑י חִדְל֖וּ הָרֵֽעַ׃
17 ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.
לִמְד֥וּ הֵיטֵ֛ב דִּרְשׁ֥וּ מִשְׁפָּ֖ט אַשְּׁר֣וּ חָמ֑וֹץ שִׁפְט֣וּ יָת֔וֹם רִ֖יבוּ אַלְמָנָֽה׃ ס
18 “ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.
לְכוּ־נָ֛א וְנִוָּֽכְחָ֖ה יֹאמַ֣ר יְהוָ֑ה אִם־יִֽהְי֨וּ חֲטָאֵיכֶ֤ם כַּשָּׁנִים֙ כַּשֶּׁ֣לֶג יַלְבִּ֔ינוּ אִם־יַאְדִּ֥ימוּ כַתּוֹלָ֖ע כַּצֶּ֥מֶר יִהְיֽוּ׃
19 ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.
אִם־תֹּאב֖וּ וּשְׁמַעְתֶּ֑ם ט֥וּב הָאָ֖רֶץ תֹּאכֵֽלוּ׃
20 ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.
וְאִם־תְּמָאֲנ֖וּ וּמְרִיתֶ֑ם חֶ֣רֶב תְּאֻכְּל֔וּ כִּ֛י פִּ֥י יְהוָ֖ה דִּבֵּֽר׃ ס
21 ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.
אֵיכָה֙ הָיְתָ֣ה לְזוֹנָ֔ה קִרְיָ֖ה נֶאֱמָנָ֑ה מְלֵאֲתִ֣י מִשְׁפָּ֗ט צֶ֛דֶק יָלִ֥ין בָּ֖הּ וְעַתָּ֥ה מְרַצְּחִֽים׃
22 ನಿನ್ನ ಬೆಳ್ಳಿಯು ಕಂದಾಯಿತು. ನಿನ್ನ ದ್ರಾಕ್ಷಾರಸವು ನೀರಿನಿಂದ ಬೆರಕೆಯಾಯಿತು.
כַּסְפֵּ֖ךְ הָיָ֣ה לְסִיגִ֑ים סָבְאֵ֖ךְ מָה֥וּל בַּמָּֽיִם׃
23 ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.
שָׂרַ֣יִךְ סוֹרְרִ֗ים וְחַבְרֵי֙ גַּנָּבִ֔ים כֻּלּוֹ֙ אֹהֵ֣ב שֹׁ֔חַד וְרֹדֵ֖ף שַׁלְמֹנִ֑ים יָתוֹם֙ לֹ֣א יִשְׁפֹּ֔טוּ וְרִ֥יב אַלְמָנָ֖ה לֹֽא־יָב֥וֹא אֲלֵיהֶֽם׃ פ
24 ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.
לָכֵ֗ן נְאֻ֤ם הָֽאָדוֹן֙ יְהוָ֣ה צְבָא֔וֹת אֲבִ֖יר יִשְׂרָאֵ֑ל ה֚וֹי אֶנָּחֵ֣ם מִצָּרַ֔י וְאִנָּקְמָ֖ה מֵאוֹיְבָֽי׃
25 ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.
וְאָשִׁ֤יבָה יָדִי֙ עָלַ֔יִךְ וְאֶצְרֹ֥ף כַּבֹּ֖ר סִיגָ֑יִךְ וְאָסִ֖ירָה כָּל־בְּדִילָֽיִךְ׃
26 ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”
וְאָשִׁ֤יבָה שֹׁפְטַ֙יִךְ֙ כְּבָרִ֣אשֹׁנָ֔ה וְיֹעֲצַ֖יִךְ כְּבַתְּחִלָּ֑ה אַחֲרֵי־כֵ֗ן יִקָּ֤רֵא לָךְ֙ עִ֣יר הַצֶּ֔דֶק קִרְיָ֖ה נֶאֱמָנָֽה׃
27 ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
צִיּ֖וֹן בְּמִשְׁפָּ֣ט תִּפָּדֶ֑ה וְשָׁבֶ֖יהָ בִּצְדָקָֽה׃
28 ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.
וְשֶׁ֧בֶר פֹּשְׁעִ֛ים וְחַטָּאִ֖ים יַחְדָּ֑ו וְעֹזְבֵ֥י יְהוָ֖ה יִכְלֽוּ׃
29 “ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
כִּ֣י יֵבֹ֔שׁוּ מֵאֵילִ֖ים אֲשֶׁ֣ר חֲמַדְתֶּ֑ם וְתַ֨חְפְּר֔וּ מֵהַגַּנּ֖וֹת אֲשֶׁ֥ר בְּחַרְתֶּֽם׃
30 ನೀವು ಬಾಡಿದ ಎಲೆಯುಳ್ಳ ಏಲಾ ಮರದಂತೆಯೂ, ನೀರಿಲ್ಲದ ತೋಟದಂತೆಯೂ ಇರುವಿರಿ.
כִּ֣י תִֽהְי֔וּ כְּאֵלָ֖ה נֹבֶ֣לֶת עָלֶ֑הָ וּֽכְגַנָּ֔ה אֲשֶׁר־מַ֖יִם אֵ֥ין לָֽהּ׃
31 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”
וְהָיָ֤ה הֶחָסֹן֙ לִנְעֹ֔רֶת וּפֹעֲל֖וֹ לְנִיצ֑וֹץ וּבָעֲר֧וּ שְׁנֵיהֶ֛ם יַחְדָּ֖ו וְאֵ֥ין מְכַבֶּֽה׃ ס

< ಯೆಶಾಯನು 1 >