< ಯೆಶಾಯನು 10 >

1 ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!
הוֹי הַחֹֽקְקִים חִקְקֵי־אָוֶן וּֽמְכַתְּבִים עָמָל כִּתֵּֽבוּ׃
2 ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.
לְהַטּוֹת מִדִּין דַּלִּים וְלִגְזֹל מִשְׁפַּט עֲנִיֵּי עַמִּי לִֽהְיוֹת אַלְמָנוֹת שְׁלָלָם וְאֶת־יְתוֹמִים יָבֹֽזּוּ׃
3 ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?
וּמַֽה־תַּעֲשׂוּ לְיוֹם פְּקֻדָּה וּלְשׁוֹאָה מִמֶּרְחָק תָּבוֹא עַל־מִי תָּנוּסוּ לְעֶזְרָה וְאָנָה תַעַזְבוּ כְּבוֹדְכֶֽם׃
4 ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.
בִּלְתִּי כָרַע תַּחַת אַסִּיר וְתַחַת הֲרוּגִים יִפֹּלוּ בְּכׇל־זֹאת לֹא־שָׁב אַפּוֹ וְעוֹד יָדוֹ נְטוּיָֽה׃
5 “ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.
הוֹי אַשּׁוּר שֵׁבֶט אַפִּי וּמַטֶּה־הוּא בְיָדָם זַעְמִֽי׃
6 ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.
בְּגוֹי חָנֵף אֲשַׁלְּחֶנּוּ וְעַל־עַם עֶבְרָתִי אֲצַוֶּנּוּ לִשְׁלֹל שָׁלָל וְלָבֹז בַּז (ולשימו) [וּלְשׂוּמוֹ] מִרְמָס כְּחֹמֶר חוּצֽוֹת׃
7 ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.
וְהוּא לֹא־כֵן יְדַמֶּה וּלְבָבוֹ לֹא־כֵן יַחְשֹׁב כִּי לְהַשְׁמִיד בִּלְבָבוֹ וּלְהַכְרִית גּוֹיִם לֹא מְעָֽט׃
8 ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
כִּי יֹאמַר הֲלֹא שָׂרַי יַחְדָּו מְלָכִֽים׃
9 ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?
הֲלֹא כְּכַרְכְּמִישׁ כַּלְנוֹ אִם־לֹא כְאַרְפַּד חֲמָת אִם־לֹא כְדַמֶּשֶׂק שֹֽׁמְרֽוֹן׃
10 ಯೆರೂಸಲೇಮಿನಲ್ಲಿಯೂ ಸಮಾರ್ಯದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ,
כַּֽאֲשֶׁר מָצְאָה יָדִי לְמַמְלְכֹת הָֽאֱלִיל וּפְסִילֵיהֶם מִירוּשָׁלַ͏ִם וּמִשֹּׁמְרֽוֹן׃
11 ನಾನು ಸಮಾರ್ಯ ಮತ್ತು ಅದರ ವಿಗ್ರಹಗಳಿಗೆ ಮಾಡಿದಂತೆಯೇ ಯೆರೂಸಲೇಮಿಗೆ ಮತ್ತು ಅದರ ವಿಗ್ರಹಗಳಿಗೆ ಮಾಡುತ್ತೇನೆಯೇ?’”
הֲלֹא כַּאֲשֶׁר עָשִׂיתִי לְשֹׁמְרוֹן וְלֶאֱלִילֶיהָ כֵּן אֶעֱשֶׂה לִירֽוּשָׁלַ͏ִם וְלַעֲצַבֶּֽיהָ׃
12 ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”
וְהָיָה כִּֽי־יְבַצַּע אֲדֹנָי אֶת־כׇּל־מַֽעֲשֵׂהוּ בְּהַר צִיּוֹן וּבִירוּשָׁלָ͏ִם אֶפְקֹד עַל־פְּרִֽי־גֹדֶל לְבַב מֶלֶךְ־אַשּׁוּר וְעַל־תִּפְאֶרֶת רוּם עֵינָֽיו׃
13 ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
כִּי אָמַר בְּכֹחַ יָדִי עָשִׂיתִי וּבְחׇכְמָתִי כִּי נְבֻנוֹתִי וְאָסִיר ׀ גְּבוּלֹת עַמִּים (ועתידתיהם) [וַעֲתֽוּדֹתֵיהֶם] שׁוֹשֵׂתִי וְאוֹרִיד כַּאבִּיר יֽוֹשְׁבִֽים׃
14 ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’”
וַתִּמְצָא כַקֵּן ׀ יָדִי לְחֵיל הָעַמִּים וְכֶֽאֱסֹף בֵּיצִים עֲזֻבוֹת כׇּל־הָאָרֶץ אֲנִי אָסָפְתִּי וְלֹא הָיָה נֹדֵד כָּנָף וּפֹצֶה פֶה וּמְצַפְצֵֽף׃
15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!
הֲיִתְפָּאֵר הַגַּרְזֶן עַל הַחֹצֵב בּוֹ אִם־יִתְגַּדֵּל הַמַּשּׂוֹר עַל־מְנִיפוֹ כְּהָנִיף שֵׁבֶט וְאֶת־מְרִימָיו כְּהָרִים מַטֶּה לֹא־עֵֽץ׃
16 ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು.
לָכֵן יְשַׁלַּח הָֽאָדוֹן יְהֹוָה צְבָאוֹת בְּמִשְׁמַנָּיו רָזוֹן וְתַחַת כְּבֹדוֹ יֵקַד יְקֹד כִּיקוֹד אֵֽשׁ׃
17 ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.
וְהָיָה אֽוֹר־יִשְׂרָאֵל לְאֵשׁ וּקְדוֹשׁוֹ לְלֶהָבָה וּבָעֲרָה וְאָכְלָה שִׁיתוֹ וּשְׁמִירוֹ בְּיוֹם אֶחָֽד׃
18 ದೇಹಾತ್ಮದಂಥ ಅದರ ಉದ್ಯಾನವನವನ್ನೂ, ಫಲಭರಿತ ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
וּכְבוֹד יַעְרוֹ וְכַרְמִלּוֹ מִנֶּפֶשׁ וְעַד־בָּשָׂר יְכַלֶּה וְהָיָה כִּמְסֹס נֹסֵֽס׃
19 ಅವನ ಉಳಿದ ವನವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆಯಾಗಿರುವುದು.
וּשְׁאָר עֵץ יַעְרוֹ מִסְפָּר יִהְיוּ וְנַעַר יִכְתְּבֵֽם׃
20 ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.
וְהָיָה ׀ בַּיּוֹם הַהוּא לֹא־יוֹסִיף עוֹד שְׁאָר יִשְׂרָאֵל וּפְלֵיטַת בֵּֽית־יַעֲקֹב לְהִשָּׁעֵן עַל־מַכֵּהוּ וְנִשְׁעַן עַל־יְהֹוָה קְדוֹשׁ יִשְׂרָאֵל בֶּאֱמֶֽת׃
21 ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ಹಿಂದಿರುಗುವರು.
שְׁאָר יָשׁוּב שְׁאָר יַעֲקֹב אֶל־אֵל גִּבּֽוֹר׃
22 ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.
כִּי אִם־יִהְיֶה עַמְּךָ יִשְׂרָאֵל כְּחוֹל הַיָּם שְׁאָר יָשׁוּב בּוֹ כִּלָּיוֹן חָרוּץ שׁוֹטֵף צְדָקָֽה׃
23 ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ ಮಧ್ಯದಲ್ಲಿ ತಿಳಿಸಿದ ವಿನಾಶವನ್ನು ಉಂಟುಮಾಡುವರು.
כִּי כָלָה וְנֶחֱרָצָה אֲדֹנָי יֱהֹוִה צְבָאוֹת עֹשֶׂה בְּקֶרֶב כׇּל־הָאָֽרֶץ׃
24 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.
לָכֵן כֹּֽה־אָמַר אֲדֹנָי יֱהֹוִה צְבָאוֹת אַל־תִּירָא עַמִּי יֹשֵׁב צִיּוֹן מֵאַשּׁוּר בַּשֵּׁבֶט יַכֶּכָּה וּמַטֵּהוּ יִשָּֽׂא־עָלֶיךָ בְּדֶרֶךְ מִצְרָֽיִם׃
25 ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.
כִּי־עוֹד מְעַט מִזְעָר וְכָלָה זַעַם וְאַפִּי עַל־תַּבְלִיתָֽם׃
26 ಸೇನಾಧೀಶ್ವರ ಯೆಹೋವ ದೇವರು ಓರೇಬ್ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ, ಅವರು ಕೋಲನ್ನು ಸಮುದ್ರದ ಮೇಲೆ ಚಾಚಿ, ಈಜಿಪ್ಟಿನವರ ಮೇಲೆ ಎತ್ತಿದಂತೆ ಎತ್ತುವರು.
וְעוֹרֵר עָלָיו יְהֹוָה צְבָאוֹת שׁוֹט כְּמַכַּת מִדְיָן בְּצוּר עוֹרֵב וּמַטֵּהוּ עַל־הַיָּם וּנְשָׂאוֹ בְּדֶרֶךְ מִצְרָֽיִם׃
27 ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
וְהָיָה ׀ בַּיּוֹם הַהוּא יָסוּר סֻבֳּלוֹ מֵעַל שִׁכְמֶךָ וְעֻלּוֹ מֵעַל צַוָּארֶךָ וְחֻבַּל עֹל מִפְּנֵי־שָֽׁמֶן׃
28 ಅವರು ಅಯ್ಯಾಥಿಗೆ ಬಂದರು. ಮಿಗ್ರೋನನ್ನು ಹಾದು ಹೋಗಿ, ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟಿದ್ದಾರೆ.
בָּא עַל־עַיַּת עָבַר בְּמִגְרוֹן לְמִכְמָשׂ יַפְקִיד כֵּלָֽיו׃
29 ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ.
עָֽבְרוּ מַעְבָּרָה גֶּבַע מָלוֹן לָנוּ חָֽרְדָה הָרָמָה גִּבְעַת שָׁאוּל נָֽסָה׃
30 ಗಲ್ಲೀಮ್ ಮಗಳೇ, ನಿನ್ನ ಸ್ವರವೆತ್ತಿ ಕೂಗು; ಬಡ ಅನಾತೋತೇ, ಲಯೆಷಿನವರೆಗೂ ಕೇಳಿಸುವಂತೆ ಕೂಗು.
צַֽהֲלִי קוֹלֵךְ בַּת־גַּלִּים הַקְשִׁיבִי לַיְשָׁה עֲנִיָּה עֲנָתֽוֹת׃
31 ಮದ್ಮೇನ ದಿಕ್ಕುಪಾಲಾಯಿತು. ಗೆಬೀಮಿನ ನಿವಾಸಿಗಳು ಓಡಿಹೋಗಲು ಕೂಡಿಕೊಂಡರು.
נָֽדְדָה מַדְמֵנָה יֹשְׁבֵי הַגֵּבִים הֵעִֽיזוּ׃
32 ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
עוֹד הַיּוֹם בְּנֹב לַעֲמֹד יְנֹפֵף יָדוֹ הַר (בית) [בַּת־]צִיּוֹן גִּבְעַת יְרֽוּשָׁלָֽ͏ִם׃
33 ಇಗೋ, ಕರ್ತದೇವರು ಆಗಿರುವ ಸೇನಾಧೀಶ್ವರ ಯೆಹೋವ ದೇವರು ಭಯಂಕರವಾಗಿ ಕೊಂಬೆಯನ್ನು ಕತ್ತರಿಸುವರು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವುವು, ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.
הִנֵּה הָאָדוֹן יְהֹוָה צְבָאוֹת מְסָעֵף פֻּארָה בְּמַעֲרָצָה וְרָמֵי הַקּוֹמָה גְּדוּעִים וְהַגְּבֹהִים יִשְׁפָּֽלוּ׃
34 ಅವರು ಅಡವಿಯ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನು ಪರಾಕ್ರಮಿಯಾಗಿರುವವರ ಮುಂದೆ ಬಿದ್ದುಹೋಗುವುದು.
וְנִקַּף סִֽבְכֵי הַיַּעַר בַּבַּרְזֶל וְהַלְּבָנוֹן בְּאַדִּיר יִפּֽוֹל׃

< ಯೆಶಾಯನು 10 >