< ಯೆಶಾಯನು 12 >

1 ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?
到那日,你必說: 耶和華啊,我要稱謝你! 因為你雖然向我發怒, 你的怒氣卻已轉消; 你又安慰了我。
2 ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”
看哪!上帝是我的拯救; 我要倚靠他,並不懼怕。 因為主耶和華是我的力量, 是我的詩歌, 他也成了我的拯救。
3 ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
所以,你們必從救恩的泉源歡然取水。
4 ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.
在那日,你們要說: 當稱謝耶和華,求告他的名; 將他所行的傳揚在萬民中, 提說他的名已被尊崇。
5 ಯೆಹೋವ ದೇವರಿಗೆ ಹಾಡಿರಿ. ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
你們要向耶和華唱歌, 因他所行的甚是美好; 但願這事普傳天下。
6 ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”
錫安的居民哪,當揚聲歡呼, 因為在你們中間的以色列聖者乃為至大。

< ಯೆಶಾಯನು 12 >