< ಯೆಶಾಯನು 16 >
1 ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಯನ್ನು ಸೆಲ ಬಂಡೆಯಿಂದ ಮರುಭೂಮಿಯ ಕಡೆಗೆ, ಚೀಯೋನ್ ಪುತ್ರಿಯರ ಪರ್ವತಕ್ಕೆ ಕಳುಹಿಸಿರಿ.
那地的主宰從曠野的磐石,應傳達一言,至熙雍女兒的山嶺!
2 ಗೂಡಿನಿಂದ ಹೊರಗೆ ಬಂದ ಹಕ್ಕಿಗಳ ಮರಿಗಳಂತೆ ಅಲೆದಾಡುವ ಹಾಗೆ, ಮೋವಾಬಿನ ಪುತ್ರಿಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
當時摩阿布女兒,在阿爾農渡口,猶如逃遁的小鳥,傾巢的幼雛。
3 ಆಲೋಚಿಸಿ, ತೀರ್ಮಾನಿಸಿರಿ. ಮಟ್ಟ ಮಧ್ಯಾಹ್ನದಲ್ಲಿ ನಿಮ್ಮ ನೆರಳನ್ನು ರಾತ್ರಿಯಂತೆ ಮಾಡಿರಿ. ವಲಸಿಗರನ್ನು ಅಡಗಿಸಿರಿ. ಅಲೆಯುವವರನ್ನು ಬಯಲಿಗೆ ತರಬೇಡ.
「請給我們出個主意,快下個決斷!使你的蔭影在日中有如黑夜,遮蔽被驅逐的人,不要暴露出逃的人!
4 ಮೋವಾಬ್ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ. ವಿನಾಶಕರಿಗೆ ವಶವಾಗದಂತೆ ಅವರಿಗೆ ಆಶ್ರಯ ನೀಡಿರಿ. ದಬ್ಬಾಳಿಕೆ ಮುಗಿಯುತ್ತಾ ಬಂತು. ಸೂರೆಮಾಡುವುದು ನಿಲ್ಲುವುದು, ಪೀಡಿಸುವವರು ದೇಶದಿಂದ ಅಳಿದುಹೋಗುವರು.
讓被驅逐的摩阿布人僑居在你處,做他們的藏身地,以逃避劫掠者的面。」當壓迫終止,劫掠停止,蹂躪大地的人消滅時,
5 ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.
必有一個寶座建立在慈惠中,在達味的帳幕內,必有一位尋求公義,急行正義的判官,憑真實坐於寶座之上。
6 ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ. ಆಕೆಗೆ ಬಹಳ ಗರ್ವ. ಆಕೆಯ ಅಹಂಕಾರವು, ಆಕೆಯ ಗರ್ವವು ಮತ್ತು ಆಕೆಗೆ ಕೋಪವು ಸಹ ಉಂಟು. ಆದರೆ ಆಕೆಯ ಕೊಚ್ಚಿಕೊಳ್ಳುವಿಕೆ ಬರಿದಾದದ್ದು.
我們曾聽到摩阿布的驕傲,極其傲慢;聽到她的驕矜,她的傲慢,她的自負,她狂妄的矜誇。
7 ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ.
為此,摩阿布必將哀哭,人人都要為摩阿布哀哭:為克爾哈勒色特的葡萄乾餅,人人只有傷心嘆息!
8 ಹೆಷ್ಬೋನ್ ಊರಿನ ಹೊಲ ಮತ್ತು ಸಿಬ್ಮ ಊರಿನ ದ್ರಾಕ್ಷಿ ಸಹ ನಿಸ್ಸಾರವಾಗಿವೆ. ಇತರ ಜನರ ಪ್ರಭುಗಳು ವಿಶಾಲವಾದ ದ್ರಾಕ್ಷಿಗಿಡಗಳನ್ನು ತುಳಿದು ಹಾಕಿದ್ದಾರೆ, ಆ ದ್ರಾಕ್ಷಿಗಿಡಗಳು ಯಜ್ಜೇರ್ ಊರಿನವರೆಗೂ ವ್ಯಾಪಿಸಿ, ಮರುಭೂಮಿಯಲ್ಲಿ ಹರಡಿತ್ತು. ಅದರ ಕೊಂಬೆಗಳು ಹಬ್ಬಿ, ಸಮುದ್ರದವರೆಗೆ ವಿಶಾಲವಾಗಿತ್ತು.
因為赫市朋的田園已零落,息貝瑪的葡萄已凋謝!枝蔓為列國的君王所斬斷;那些枝蔓曾蔓延到雅則爾,漫遊至曠野;那些枝條曾向外伸展,越過了海洋!
9 ಆದಕಾರಣ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರ್ ಪಟ್ಟಣದೊಂದಿಗೆ ಅಳುವೆನು. ಓ ಹೆಷ್ಬೋನ್ ಮತ್ತು ಎಲೆಯಾಲೆ ಪಟ್ಟಣಗಳೇ, ನಿಮ್ಮನ್ನು ನನ್ನ ಕಣ್ಣೀರಿನಿಂದ ತೋಯಿಸುವೆನು! ಏಕೆಂದರೆ ಶತ್ರುಗಳು ಬಿದ್ದುಹೋದ ನಿಮ್ಮ ಬೇಸಿಗೆಯ ಫಲಗಳಿಗೂ, ಬೆಳೆಗಳಿಗೂ ಆರ್ಭಟಿಸುತ್ತಾರೆ.
為此我要參與雅則爾的痛哭,來痛哭息貝瑪的葡萄;赫市朋啊!厄肋阿肋啊!我要用我的眼淚來灌溉你!因為在你夏收和秋收時,戰爭的呼聲驟然降臨!
10 ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೊಲಗಿವೆ. ದ್ರಾಕ್ಷಿತೋಟಗಳಲ್ಲಿ ಕೀರ್ತನೆಗಳಾಗಲೀ, ಆರ್ಭಟವಾಗಲೀ ಇರುವದಿಲ್ಲ. ದ್ರಾಕ್ಷಿ ತೊಟ್ಟಿಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.
田園中的喜樂與歡欣已歛跡,葡萄園中再也沒有歌聲與歡呼;搾酒的人不再在搾酒池上搾酒,歡呼的歌聲已斷絕!
11 ಆದ್ದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವೂ, ಕೀರ್ ಹೆರೆಸೆಥ್ ನಿಮಿತ್ತ ನನ್ನ ಅಂತರಂಗವೂ ಕಿನ್ನರಿಯಂತೆ ಮಿಡಿಯುತ್ತಾ ದುಃಖಿಸುತ್ತಿದೆ.
為此,我的肝腸為摩阿布哀鳴,有如琴瑟;我的五內為克爾哈肋勒斯鳴咽,有如簫笙。
12 ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು, ಅವಳ ದೇವಾಲಯಕ್ಕೆ ಪ್ರಾರ್ಥಿಸುವುದಕ್ಕೆ ಬಂದರೂ ಅದಕ್ಕೆ ಸಫಲವಾಗದು.
摩阿布在高丘上縱然現得疲勞,縱然到廟宇裏去祈禱,盡屬枉然 !
13 ಯೆಹೋವ ದೇವರು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ:
這是上主以前反對摩阿布所說的話。
14 ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ.
但是現在,上主聲明說:「照僱工的年限計,三年之內,摩阿布的光榮將變為羞辱;縱然她的人數眾多,剩下來的甚是稀少,毫無勢力。」