< ಯೆಶಾಯನು 17 >

1 ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.
מַשָּׂ֖א דַּמָּ֑שֶׂק הִנֵּ֤ה דַמֶּ֙שֶׂק֙ מוּסָ֣ר מֵעִ֔יר וְהָיְתָ֖ה מְעִ֥י מַפָּלָֽה׃
2 ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ, ಅವು ಯಾರ ಹೆದರಿಕೆಯೂ ಇಲ್ಲದೆ ಮಲಗುವ ಮಂದೆಗಳಿಗೆ ಸ್ಥಳವಾಗುವುವು.
עֲזֻב֖וֹת עָרֵ֣י עֲרֹעֵ֑ר לַעֲדָרִ֣ים תִּֽהְיֶ֔ינָה וְרָבְצ֖וּ וְאֵ֥ין מַחֲרִֽיד׃
3 ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
וְנִשְׁבַּ֤ת מִבְצָר֙ מֵֽאֶפְרַ֔יִם וּמַמְלָכָ֥ה מִדַּמֶּ֖שֶׂק וּשְׁאָ֣ר אֲרָ֑ם כִּכְב֤וֹד בְּנֵֽי־יִשְׂרָאֵל֙ יִֽהְי֔וּ נְאֻ֖ם יְהוָ֥ה צְבָאֽוֹת׃ ס
4 ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.
וְהָיָה֙ בַּיּ֣וֹם הַה֔וּא יִדַּ֖ל כְּב֣וֹד יַעֲקֹ֑ב וּמִשְׁמַ֥ן בְּשָׂר֖וֹ יֵרָזֶֽה׃
5 ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ, ರೆಫಾಯಿಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವುದು.
וְהָיָ֗ה כֶּֽאֱסֹף֙ קָצִ֣יר קָמָ֔ה וּזְרֹע֖וֹ שִׁבֳּלִ֣ים יִקְצ֑וֹר וְהָיָ֛ה כִּמְלַקֵּ֥ט שִׁבֳּלִ֖ים בְּעֵ֥מֶק רְפָאִֽים׃
6 ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.
וְנִשְׁאַר־בּ֤וֹ עֽוֹלֵלֹת֙ כְּנֹ֣קֶף זַ֔יִת שְׁנַ֧יִם שְׁלֹשָׁ֛ה גַּרְגְּרִ֖ים בְּרֹ֣אשׁ אָמִ֑יר אַרְבָּעָ֣ה חֲמִשָּׁ֗ה בִּסְעִפֶ֙יהָ֙ פֹּֽרִיָּ֔ה נְאֻם־יְהוָ֖ה אֱלֹהֵ֥י יִשְׂרָאֵֽל׃ ס
7 ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು.
בַּיּ֣וֹם הַה֔וּא יִשְׁעֶ֥ה הָאָדָ֖ם עַל־עֹשֵׂ֑הוּ וְעֵינָ֕יו אֶל־קְד֥וֹשׁ יִשְׂרָאֵ֖ל תִּרְאֶֽינָה׃
8 ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.
וְלֹ֣א יִשְׁעֶ֔ה אֶל־הַֽמִּזְבְּח֖וֹת מַעֲשֵׂ֣ה יָדָ֑יו וַאֲשֶׁ֨ר עָשׂ֤וּ אֶצְבְּעֹתָיו֙ לֹ֣א יִרְאֶ֔ה וְהָאֲשֵׁרִ֖ים וְהָחַמָּנִֽים׃
9 ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.
בַּיּ֨וֹם הַה֜וּא יִהְי֣וּ ׀ עָרֵ֣י מָעֻזּ֗וֹ כַּעֲזוּבַ֤ת הַחֹ֙רֶשׁ֙ וְהָ֣אָמִ֔יר אֲשֶׁ֣ר עָזְב֔וּ מִפְּנֵ֖י בְּנֵ֣י יִשְׂרָאֵ֑ל וְהָיְתָ֖ה שְׁמָמָֽה׃
10 ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,
כִּ֤י שָׁכַ֙חַתְּ֙ אֱלֹהֵ֣י יִשְׁעֵ֔ךְ וְצ֥וּר מָעֻזֵּ֖ךְ לֹ֣א זָכָ֑רְתְּ עַל־כֵּ֗ן תִּטְּעִי֙ נִטְעֵ֣י נַעֲמָנִ֔ים וּזְמֹ֥רַת זָ֖ר תִּזְרָעֶֽנּוּ׃
11 ಬೆಳೆಸಲು ಸಸಿಯನ್ನು ಹಾಕಿದ ದಿನದಲ್ಲಿ ಬೇಲಿಹಾಕಿ ಮತ್ತು ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆಯುವಂತೆ ಮಾಡಿದರೂ, ರೋಗದ ಹಾಗೂ ಗುಣಪಡಿಸಲಾರದ ಬೇನೆಯ ದಿನದಲ್ಲಿ ನಿನ್ನ ಸುಗ್ಗಿ ಏನೂ ಇರುವುದಿಲ್ಲ.
בְּי֤וֹם נִטְעֵךְ֙ תְּשַׂגְשֵׂ֔גִי וּבַבֹּ֖קֶר זַרְעֵ֣ךְ תַּפְרִ֑יחִי נֵ֥ד קָצִ֛יר בְּי֥וֹם נַחֲלָ֖ה וּכְאֵ֥ב אָנֽוּשׁ׃ ס
12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!
ה֗וֹי הֲמוֹן֙ עַמִּ֣ים רַבִּ֔ים כַּהֲמ֥וֹת יַמִּ֖ים יֶהֱמָי֑וּן וּשְׁא֣וֹן לְאֻמִּ֔ים כִּשְׁא֛וֹן מַ֥יִם כַּבִּירִ֖ים יִשָּׁאֽוּן׃
13 ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.
לְאֻמִּ֗ים כִּשְׁא֞וֹן מַ֤יִם רַבִּים֙ יִשָּׁא֔וּן וְגָ֥עַר בּ֖וֹ וְנָ֣ס מִמֶּרְחָ֑ק וְרֻדַּ֗ף כְּמֹ֤ץ הָרִים֙ לִפְנֵי־ר֔וּחַ וּכְגַלְגַּ֖ל לִפְנֵ֥י סוּפָֽה׃
14 ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
לְעֵ֥ת עֶ֙רֶב֙ וְהִנֵּ֣ה בַלָּהָ֔ה בְּטֶ֥רֶם בֹּ֖קֶר אֵינֶ֑נּוּ זֶ֚ה חֵ֣לֶק שׁוֹסֵ֔ינוּ וְגוֹרָ֖ל לְבֹזְזֵֽינוּ׃ ס

< ಯೆಶಾಯನು 17 >