< ಯೆಶಾಯನು 20 >
1 ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.
В годината, в която Тартан дойде в Азот, когато го изпрати асирийският цар Саргон, та воюва против Азот и го превзе,
2 ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.
в същото време Господ говори чрез Амосовия син Исаия, като каза: Иди, разпаши вретището от кръста си, и изуй обущата си от нозете. И той направи така и ходеше гол и бос.
3 ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
Тогава рече Господ: Както слугата Ми Исаия е ходил гол и бос три години за знамение и предвещание против Египет и против Етиопия,
4 ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
така асирийският цар ще отведе египтяните в плен и етиопяните в заточение, млади и стари, голи и боси, и с голи задници за срам на Египет.
5 ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು.
Тогава те ще се ужасяват и засрамят за Етиопия упованието си, и за Египет хваленето си.
6 ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”
И в оня ден жители на тая крайбрежна страна ще кажат: Ето, такова е упованието ни, към което прибегнахме за помощ за да се избавим от асирийския цар! а ние как ще се избавим?