< ಯೆಶಾಯನು 22 >

1 ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
מַשָּׂ֖א גֵּ֣יא חִזָּי֑וֹן מַה־לָּ֣ךְ אֵפ֔וֹא כִּֽי־עָלִ֥ית כֻּלָּ֖ךְ לַגַּגּֽוֹת׃
2 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.
תְּשֻׁא֣וֹת ׀ מְלֵאָ֗ה עִ֚יר הֽוֹמִיָּ֔ה קִרְיָ֖ה עַלִּיזָ֑ה חֲלָלַ֙יִךְ֙ לֹ֣א חַלְלֵי־חֶ֔רֶב וְלֹ֖א מֵתֵ֥י מִלְחָמָֽה׃
3 ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ ಓಡಿದರೂ ಬಿಲ್ಲುಗಾರರಿಲ್ಲದೆಯೇ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದರೂ ನಿನ್ನ ಜನರು ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.
כָּל־קְצִינַ֥יִךְ נָֽדְדוּ־יַ֖חַד מִקֶּ֣שֶׁת אֻסָּ֑רוּ כָּל־נִמְצָאַ֙יִךְ֙ אֻסְּר֣וּ יַחְדָּ֔ו מֵרָח֖וֹק בָּרָֽחוּ׃
4 ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”
עַל־כֵּ֥ן אָמַ֛רְתִּי שְׁע֥וּ מִנִּ֖י אֲמָרֵ֣ר בַּבֶּ֑כִי אַל־תָּאִ֣יצוּ לְנַֽחֲמֵ֔נִי עַל־שֹׁ֖ד בַּת־עַמִּֽי׃
5 ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು, ದರ್ಶನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಭಯಭ್ರಾಂತಿಯ ದಿನವನ್ನು ಇಟ್ಟಿದ್ದಾರೆ. ಅದು ಗೋಡೆಗಳು ಹೊಡೆದುರುಳಿಸುವ ದಿನವು. ಪರ್ವತಗಳಿಗೆ ಜನರು ಕೂಗಾಡುವ ದಿನವದು.
כִּ֣י יוֹם֩ מְהוּמָ֨ה וּמְבוּסָ֜ה וּמְבוּכָ֗ה לַֽאדֹנָ֧י יְהוִ֛ה צְבָא֖וֹת בְּגֵ֣יא חִזָּי֑וֹן מְקַרְקַ֥ר קִ֖ר וְשׁ֥וֹעַ אֶל־הָהָֽר׃
6 ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.
וְעֵילָם֙ נָשָׂ֣א אַשְׁפָּ֔ה בְּרֶ֥כֶב אָדָ֖ם פָּֽרָשִׁ֑ים וְקִ֥יר עֵרָ֖ה מָגֵֽן׃
7 ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿರುವುವು. ರಾಹುತರು ಪಟ್ಟಣದ ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
וַיְהִ֥י מִבְחַר־עֲמָקַ֖יִךְ מָ֣לְאוּ רָ֑כֶב וְהַפָּ֣רָשִׁ֔ים שֹׁ֖ת שָׁ֥תוּ הַשָּֽׁעְרָה׃
8 ಕರ್ತರು ಯೆಹೂದದ ಸಂರಕ್ಷಣೆಯ ಮುಸುಕನ್ನು ತೆಗೆದಿದ್ದಾರೆ. ಆ ದಿವಸದಲ್ಲಿ ಅಡವಿ ಅರಮನೆಯ ಯುದ್ಧ ಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತೀಯೆ.
וַיְגַ֕ל אֵ֖ת מָסַ֣ךְ יְהוּדָ֑ה וַתַּבֵּט֙ בַּיּ֣וֹם הַה֔וּא אֶל־נֶ֖שֶׁק בֵּ֥ית הַיָּֽעַר׃
9 ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ.
וְאֵ֨ת בְּקִיעֵ֧י עִיר־דָּוִ֛ד רְאִיתֶ֖ם כִּי־רָ֑בּוּ וַֽתְּקַבְּצ֔וּ אֶת־מֵ֥י הַבְּרֵכָ֖ה הַתַּחְתּוֹנָֽה׃
10 ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
וְאֶת־בָּתֵּ֥י יְרוּשָׁלִַ֖ם סְפַרְתֶּ֑ם וַתִּתְֿצוּ֙ הַבָּ֣תִּ֔ים לְבַצֵּ֖ר הַחוֹמָֽה׃
11 ಎರಡು ಗೋಡೆಗಳ ನಡುವೆ ಹಳೆಯ ಕೆರೆಯ ನೀರಿಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಕಾಲುವೆ ಮಾಡುತ್ತೀರಿ. ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸುವುದಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದವರನ್ನು ನೀನು ಲಕ್ಷಿಸುವುದಿಲ್ಲ.
וּמִקְוָ֣ה ׀ עֲשִׂיתֶ֗ם בֵּ֚ין הַחֹ֣מֹתַ֔יִם לְמֵ֖י הַבְּרֵכָ֣ה הַיְשָׁנָ֑ה וְלֹ֤א הִבַּטְתֶּם֙ אֶל־עֹשֶׂ֔יהָ וְיֹצְרָ֥הּ מֵֽרָח֖וֹק לֹ֥א רְאִיתֶֽם׃
12 ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.
וַיִּקְרָ֗א אֲדֹנָ֧י יְהוִ֛ה צְבָא֖וֹת בַּיּ֣וֹם הַה֑וּא לִבְכִי֙ וּלְמִסְפֵּ֔ד וּלְקָרְחָ֖ה וְלַחֲגֹ֥ר שָֽׂק׃
13 ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
וְהִנֵּ֣ה ׀ שָׂשׂ֣וֹן וְשִׂמְחָ֗ה הָרֹ֤ג ׀ בָּקָר֙ וְשָׁחֹ֣ט צֹ֔אן אָכֹ֥ל בָּשָׂ֖ר וְשָׁת֣וֹת יָ֑יִן אָכ֣וֹל וְשָׁת֔וֹ כִּ֥י מָחָ֖ר נָמֽוּת׃
14 ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.
וְנִגְלָ֥ה בְאָזְנָ֖י יְהוָ֣ה צְבָא֑וֹת אִם־יְ֠כֻפַּר הֶעָוֹ֨ן הַזֶּ֤ה לָכֶם֙ עַד־תְּמֻת֔וּן אָמַ֛ר אֲדֹנָ֥י יְהוִ֖ה צְבָאֽוֹת׃ פ
15 ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು:
כֹּ֥ה אָמַ֛ר אֲדֹנָ֥י יְהוִ֖ה צְבָא֑וֹת לֶךְ־בֹּא֙ אֶל־הַסֹּכֵ֣ן הַזֶּ֔ה עַל־שֶׁבְנָ֖א אֲשֶׁ֥ר עַל־הַבָּֽיִת׃
16 ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ನಿನಗೆ ಸಮಾಧಿಯನ್ನು ತೋಡಿಸಿದೆ, ಬಂಡೆಯಲ್ಲಿ ನಿನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದಿ ಅಲ್ಲವೇ?
מַה־לְּךָ֥ פֹה֙ וּמִ֣י לְךָ֣ פֹ֔ה כִּֽי־חָצַ֧בְתָּ לְּךָ֛ פֹּ֖ה קָ֑בֶר חֹצְבִ֤י מָרוֹם֙ קִבְר֔וֹ חֹקְקִ֥י בַסֶּ֖לַע מִשְׁכָּ֥ן לֽוֹ׃
17 “ಯೆಹೋವ ದೇವರು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯುವರು.
הִנֵּ֤ה יְהוָה֙ מְטַלְטֶלְךָ֔ טַלְטֵלָ֖ה גָּ֑בֶר וְעֹטְךָ֖ עָטֹֽה׃
18 ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ, ವಿಸ್ತಾರವಾದ ದೇಶಕ್ಕೆ ಬಿಸಾಡುವರು. ಅಲ್ಲೇ ನೀನು ಸಾಯುವೆ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವುವು.
צָנ֤וֹף יִצְנָפְךָ֙ צְנֵפָ֔ה כַּדּ֕וּר אֶל־אֶ֖רֶץ רַחֲבַ֣ת יָדָ֑יִם שָׁ֣מָּה תָמ֗וּת וְשָׁ֙מָּה֙ מַרְכְּב֣וֹת כְּבוֹדֶ֔ךָ קְל֖וֹן בֵּ֥ית אֲדֹנֶֽיךָ׃
19 ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
וַהֲדַפְתִּ֖יךָ מִמַּצָּבֶ֑ךָ וּמִמַּעֲמָֽדְךָ֖ יֶהֶרְסֶֽךָ׃
20 “ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
וְהָיָ֖ה בַּיּ֣וֹם הַה֑וּא וְקָרָ֣אתִי לְעַבְדִּ֔י לְאֶלְיָקִ֖ים בֶּן־חִלְקִיָּֽהוּ׃
21 ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.
וְהִלְבַּשְׁתִּ֣יו כֻּתָּנְתֶּ֗ךָ וְאַבְנֵֽטְךָ֙ אֲחַזְּקֶ֔נּוּ וּמֶֽמְשֶׁלְתְּךָ֖ אֶתֵּ֣ן בְּיָד֑וֹ וְהָיָ֥ה לְאָ֛ב לְיוֹשֵׁ֥ב יְרוּשָׁלִַ֖ם וּלְבֵ֥ית יְהוּדָֽה׃
22 ದಾವೀದನ ಮನೆಗೆ ಬೀಗದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು. ಅವನು ತೆರೆದರೆ ಯಾರೂ ಮುಚ್ಚರು, ಅವನು ಮುಚ್ಚಿದರೆ ಯಾರೂ ತೆರೆಯರು.
וְנָתַתִּ֛י מַפְתֵּ֥חַ בֵּית־דָּוִ֖ד עַל־שִׁכְמ֑וֹ וּפָתַח֙ וְאֵ֣ין סֹגֵ֔ר וְסָגַ֖ר וְאֵ֥ין פֹּתֵֽחַ׃
23 ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.
וּתְקַעְתִּ֥יו יָתֵ֖ד בְּמָק֣וֹם נֶאֱמָ֑ן וְהָיָ֛ה לְכִסֵּ֥א כָב֖וֹד לְבֵ֥ית אָבִֽיו׃
24 ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.
וְתָל֨וּ עָלָ֜יו כֹּ֣ל ׀ כְּב֣וֹד בֵּית־אָבִ֗יו הַצֶּֽאֱצָאִים֙ וְהַצְּפִע֔וֹת כֹּ֖ל כְּלֵ֣י הַקָּטָ֑ן מִכְּלֵי֙ הָֽאַגָּנ֔וֹת וְעַ֖ד כָּל־כְּלֵ֥י הַנְּבָלִֽים׃
25 “ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.
בַּיּ֣וֹם הַה֗וּא נְאֻם֙ יְהוָ֣ה צְבָא֔וֹת תָּמוּשׁ֙ הַיָּתֵ֔ד הַתְּקוּעָ֖ה בְּמָק֣וֹם נֶאֱמָ֑ן וְנִגְדְּעָ֣ה וְנָפְלָ֗ה וְנִכְרַת֙ הַמַּשָּׂ֣א אֲשֶׁר־עָלֶ֔יהָ כִּ֥י יְהוָ֖ה דִּבֵּֽר׃ ס

< ಯೆಶಾಯನು 22 >