< ಯೆಶಾಯನು 25 >
1 ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.
主よ、あなたはわが神、わたしはあなたをあがめ、み名をほめたたえる。あなたはさきに驚くべきみわざを行い、いにしえから定めた計画を真実をもって行われたから。
2 ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.
あなたは町を石塚とし、堅固な町を荒塚とされた。外国人のやかたは、もはや町ではなく、とこしえに建てられることはない。
3 ಬಲಿಷ್ಠವಾದ ಜನಾಂಗವು ನಿಮ್ಮನ್ನು ಘನಪಡಿಸುವರು, ಭಯಂಕರವಾದ ಜನರ ಪಟ್ಟಣವು ನಿಮಗೆ ಅಂಜುವುದು.
それゆえ、強い民はあなたを尊び、あらぶる国々の町はあなたを恐れる。
4 ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.
あなたは貧しい者のとりでとなり、乏しい者の悩みのときのとりでとなり、あらしをさける避け所となり、熱さをさける陰となられた。あらぶる者の及ぼす害は、石がきを打つあらしのごとく、
5 ಮೇಘವು ಒಣನೆಲದ ಕಾವನ್ನು ಆರಿಸುವ ಹಾಗೆ, ನೀವು ವಿದೇಶಿಯರ ಗದ್ದಲವನ್ನು ಅಡಗಿಸುವಿರಿ; ಮೋಡದ ನೆರಳಿನಿಂದ ಬಿಸಿಲು ತಡೆಯುವ ಹಾಗೆಯೇ, ನೀವು ಕ್ರೂರಿಗಳ ಉತ್ಸಾಹಗಾನವನ್ನು ನಿಲ್ಲಿಸಿಬಿಡುವಿರಿ.
かわいた地の熱さのようだからである。あなたは外国人の騒ぎをおさえ、雲が陰をもって熱をとどめるようにあらぶる者の歌をとどめられる。
6 ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.
万軍の主はこの山で、すべての民のために肥えたものをもって祝宴を設け、久しくたくわえたぶどう酒をもって祝宴を設けられる。すなわち髄の多い肥えたものと、よく澄んだ長くたくわえたぶどう酒をもって祝宴を設けられる。
7 ಸಮಸ್ತ ಜನಾಂಗಗಳನ್ನು ಮುಚ್ಚಿರುವ ಪರದೆಯನ್ನೂ, ಸಕಲ ದೇಶದವರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವರು.
また主はこの山で、すべての民のかぶっている顔おおいと、すべての国のおおっているおおい物とを破られる。
8 ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.
主はとこしえに死を滅ぼし、主なる神はすべての顔から涙をぬぐい、その民のはずかしめを全地の上から除かれる。これは主の語られたことである。
9 ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.
その日、人は言う、「見よ、これはわれわれの神である。わたしたちは彼を待ち望んだ。彼はわたしたちを救われる。これは主である。わたしたちは彼を待ち望んだ。わたしたちはその救を喜び楽しもう」と。
10 ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.
主の手はこの山にとどまり、モアブは肥だめの中に踏まれるわらのように、おのれの所で踏みにじられる。
11 ಈಜುವವನು ಈಜುವುದಕ್ಕೆ ಕೈಗಳನ್ನು ಹರಡಿಕೊಂಡ ಹಾಗೆ, ಅವರು ತಮ್ಮ ಕೈಗಳನ್ನು ಚಾಚುವರು. ಆದರೆ ದೇವರು ಅವರ ಗರ್ವವನ್ನೂ ಅವರ ಕೈ ಕೆಲಸವನ್ನೂ ತಗ್ಗಿಸಿಬಿಡುವರು.
彼はその中で泳ぐ物が泳ごうとして手を伸ばすように、その手を伸ばす。しかし主はその高ぶりを、その手の巧みなわざと共に低くされる。
12 ದುರ್ಗದಂತೆ ಎತ್ತರವಾಗಿರುವ ನಿನ್ನ ಕೋಟೆಗಳನ್ನು ಕೆಡವಿ, ತಗ್ಗಿಸಿ, ನೆಲಸಮಮಾಡುವರು, ಅದು ಧೂಳುಪಾಲಾಗುವುದು.
その石がきの高い城郭を主は傾け倒し、地に投げうって、ちりにかえされる。