< ಯೆಶಾಯನು 26 >

1 ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.
Na tisti dan bo ta pesem prepevana v Judovi deželi: »Imamo močno mesto; rešitev duše bo Bog določil za zidove in branike.
2 ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
Odprite velika vrata, da bo pravičen narod, ki varuje resnico, lahko vstopil.
3 ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.
Ohranil ga boš v popolnem miru, čigar um se zadržuje na tebi, ker on zaupa vate.
4 ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.
Zaupajte v Gospoda na veke, kajti v Gospodu Jahveju je večna moč.
5 ಅವರು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾರೆ. ಉನ್ನತದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾರೆ. ಅದನ್ನು ಕೆಡವಿ ನೆಲಸಮಮಾಡಿ ಧೂಳಿಗೆ ತಂದಿದ್ದಾರೆ.
Kajti on poniža tiste, ki prebivajo na višavi; vzvišeno mesto, polaga ga nizko, polaga ga nizko, celó k tlom; prinaša ga celo k prahu.
6 ಕಾಲು, ಬಡವರ ಕಾಲುಗಳೂ, ದೀನರ ಪಾದಗಳೂ ಅದನ್ನು ತುಳಿಯುವುವು.
Stopalo ga bo pomendralo, celó stopalo revnega in koraki pomoči potrebnih.«
7 ನೀತಿವಂತನ ಮಾರ್ಗವು ಸಮಾನವಾಗಿದೆ. ನೀನು ಅತ್ಯಧಿಕವಾದ ಯಥಾರ್ಥವಂತನು, ನೀತಿವಂತನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ,
Pot pravičnih je poštenost. Ti, najpokončnejši, tehtaš stezo pravičnih.
8 ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.
Da, na poti tvojih sodb, oh Gospod, smo čakali nate; hrepenenje naše duše je k tvojemu imenu in k spominu nate.
9 ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
S svojo dušo sem te želel ponoči; da, s svojim duhom znotraj sebe te bom iskal zgodaj, kajti ko so tvoje sodbe na zemlji, se bodo prebivalci zemeljskega [kroga] učili pravičnosti.
10 ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.
Naj bo naklonjenost pokazana zlobnemu, vendar se ne bo naučil pravičnosti. V deželi poštenosti bo ravnal nepravično in ne bo gledal Gospodovega veličanstva.
11 ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.
Gospod, kadar je tvoja roka dvignjena, ne bodo videli. Toda videli bodo in bodo osramočeni zaradi svoje zavisti nad ljudstvom; da, požrl jih bo ogenj tvojih sovražnikov.
12 ಯೆಹೋವ ದೇವರೇ, ನಮಗೆ ಸಮಾಧಾನವನ್ನು ವಿಧಿಸುವಿರಿ. ಏಕೆಂದರೆ ನೀವು ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀರಿ.
Gospod, ti nam hočeš določiti mir, kajti naredil si tudi vsa naša dela v nas.
13 ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.
Oh Gospod, naš Bog, drugi gospodarji poleg tebe so imeli gospostvo nad nami, toda samo po tebi bomo naredili omembo tvojega imena.
14 ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ.
Mrtvi so, ne bodo živeli; preminuli so, ne bodo vstali. Zato si jih obiskal, uničil in storil, da ves spomin nanje izgine.
15 ಜನಾಂಗವನ್ನು ಹೆಚ್ಚಿಸಿದ್ದೀರಿ. ಯೆಹೋವ ದೇವರೇ, ಜನಾಂಗವನ್ನು ಹೆಚ್ಚಿಸಿದ್ದೀರಿ. ನೀವು ಮಹಿಮೆ ಹೊಂದಿದ್ದೀರಿ. ನೀವು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆಯವರೆಗೂ ವಿಸ್ತರಿಸಿದ್ದೀರಿ.
Povečal si narod, oh Gospod, ti si povečal narod. Proslavljen si. Odstranil si ga daleč, k vsem koncem zemlje.
16 ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.
Gospod, v stiski so te obiskali, izlili so molitev, ko je bilo nad njimi tvoje karanje.
17 ಗರ್ಭಿಣಿ ಸ್ತ್ರೀಯು ಹೆರುವುದಕ್ಕೆ ಸಮೀಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆಯಲ್ಲಿ ಅರಚುವಂತೆ, ಯೆಹೋವ ದೇವರೇ, ನಾವು ನಿಮ್ಮ ಸಮ್ಮುಖದಲ್ಲಿದ್ದೆವು.
Kakor je nosečnica, ko se približuje čas njenega poroda, v bolečini in vpije v svojih ostrih bolečinah, tako smo bili mi v tvojem pogledu, oh Gospod.
18 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು. ಭೂಮಿಗೆ ನಮ್ಮಿಂದ ಯಾವ ಬಿಡುಗಡೆಯೂ ಆಗಲಿಲ್ಲ. ಭೂಲೋಕದ ಜನರಿಗೆ ಜನ್ಮ ಕೊಡಲಿಲ್ಲ.
Bili smo z otrokom, bili smo v bolečini, tako smo, kakor bi rodili veter; na zemlji nismo dosegli nobene osvoboditve; niti prebivalci zemeljskega [kroga] niso padli.
19 ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.
Tvoji mrtvi možje bodo živeli, skupaj z mojim truplom bodo vstali. Zbudite se in pojte, vi, ki prebivate v prahu, kajti tvoja rosa je kakor rosa zelišč in zemlja bo izvrgla mrtve.
20 ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.
Pridite, moje ljudstvo, vstopite v svoje sobe in zaprite svoja vrata naokoli sebe. Skrijte se, kakor bi bilo za kratek trenutek, dokler ne bo ogorčenje minilo.
21 ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.
Kajti, glejte, Gospod prihaja iz svojega kraja, da kaznuje prebivalce zemlje zaradi njihove krivičnosti. Tudi zemlja bo razkrila svojo kri in ne bo več pokrivala svojih umorjenih.

< ಯೆಶಾಯನು 26 >