< ಯೆಶಾಯನು 27 >
1 ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.
到那一天,上主要用他那厲害、巨大、猛烈的劍,來懲罰「里外雅堂」飛龍,和「里外雅堂」蜿蛇;並要擊殺海中的蛟龍。
2 ಆ ದಿನದಲ್ಲಿ, ಫಲಭರಿತ ದ್ರಾಕ್ಷಿತೋಟದ ವಿಷಯವಾಗಿ ಹಾಡಿರಿ.
到那一天,你們要唱「那可愛的葡萄園」歌:「
3 ಯೆಹೋವ ದೇವರಾದ ನಾನೇ ಅದನ್ನು ಕಾಯುತ್ತೇನೆ. ಸತತವಾಗಿ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ. ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
我,上主,親自作它的護守者,時加灌溉;我要日夜護守,免得受人侵害。
4 ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.
我再沒有怒氣;萬一有了荊棘和蒺藜,我必前去攻擊,將它完全焚毀;
5 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
除非不求我保護,不與我講和,不與我和好...」
6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.
來自雅各伯將生根,以色列要發芽開花,她的果實要佈滿地面。
7 ಆಕೆಯನ್ನು ಹೊಡೆದವರನ್ನು ಆತನು ಹೊಡೆದಂತೆ ಯೆಹೋವ ದೇವರು ಆಕೆಯನ್ನು ಹೊಡೆದರೋ? ಆಕೆಯನ್ನು ಕೊಂದವರು ಹತರಾದಂತೆ ಆಕೆಯು ಸಂಹಾರವಾದಳೋ?
上主打擊以色列,那裏像他打擊那些打擊以色列的人呢﹖上主擊殺以色列,那裏像他擊殺那些擊殺以色列的人呢﹖
8 ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.
上主以離棄,以驅逐,懲罰了她;在吹東風的日子,藉巨風將她捲去。
9 ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.
惟其如此,雅各伯的罪過方得消除;她的罪孽得以赦免的代價,即在於她將祭壇所有的石塊,打得粉碎有如石灰,不在樹立「阿舍辣」和太陽柱。
10 ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು.
的確,設防的城市已荒涼,成了被撇下和放棄的住宅,有如荒野。牛犢在那裏牧放,在那裏偃臥,吃盡了那裏的枝葉。
11 ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.
幾時樹枝枯萎,就自會斷落,婦女便來拿去燒火;她既不是個聰敏的民族,因此那創造她的,對她沒有憐憫;那形成她的,對她也不表恩情。
12 ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.
到那一天,上主要從大河流域到埃及河畔收割果實,以色列子民啊!你們都要一個一個地被聚集起來。
13 ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.
到那一天,要吹起大號筒,凡是在亞述失迷的,在埃及地分散的,都要前來,在耶路撒冷聖山,朝拜上主。