< ಯೆಶಾಯನು 28 >

1 ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!
Woe to the crown of pride, to the drunkards of Ephraim, and to the fading flower the glory of his joy, who were on the head of the fat valley, staggering with wine.
2 ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.
Behold the Lord is mighty and strong, as a storm of hail: a destroying whirlwind, as the violence of many waters overflowing, and sent forth upon a spacious land.
3 ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು ಕಾಲಿನ ತುಳಿತಕ್ಕೆ ಈಡಾಗುವುದು.
The crown of pride of the drunkards of Ephraim shall be trodden under feet.
4 ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.
And the fading flower the glory of his joy, who is on the head of the fat valley, shall be as a hasty fruit before the ripeness of autumn: which when he that seeth it shall behold, as soon as he taketh it in his hand, he will eat it up.
5 ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.
In that day the Lord of hosts shall be a crown of glory, and a garland of joy to the residue of his people:
6 ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.
And a spirit of judgment to him that sitteth in judgment, and strength to them that return out of the battle to the gate.
7 ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
But these also have been ignorant through wine, and through drunkenness have erred: the priest and the prophet have been ignorant through drunkenness, they are swallowed up with wine, they have gone astray in drunkenness, they have not known him that seeth, they have been ignorant of judgment.
8 ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
For all tables were full of vomit and filth, so that there was no more place.
9 ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?
Whom shall he teach knowledge? and whom shall he make to understand the hearing? them that are weaned from the milk, that are drawn away from the breasts.
10 ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ.
For command, command again; command, command again; expect, expect again; expect, expect again: a little there, a little there.
11 ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರೊಡನೆ ಮಾತನಾಡುತ್ತಾನೆ.
For with the speech of lips, and with another tongue he will speak to this people.
12 ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.
To whom he said: This is my rest, refresh the weary, and this is my refreshing: and they would not hear.
13 ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.
And the word of the Lord shall be to them: Command, command again; command, command again: expect, expect again; expect, expect again: a little there, a little there: that they may go, and fall backward, and be broken, and snared, and taken.
14 ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ.
Wherefore hear the word of the Lord, ye scornful men, who rule over my people that is in Jerusalem.
15 “ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ? (Sheol h7585)
For you have said: We have entered into a league with death, and we have made a covenant with hell. When the overflowing scourge shall pass through, it shall not come upon us: for we have placed our hope in lies, and by falsehood we are protected. (Sheol h7585)
16 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.
Therefore thus saith the Lord God: Behold I will lay a stone in the foundations of Sion, a tried stone, a corner stone, a precious stone, founded in the foundation. He that believeth, let him not hasten.
17 ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.
And I will set judgment in weight, and justice in measure: and hail shall overturn the hope of falsehood: and waters shall overflow its protection.
18 ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು. (Sheol h7585)
And Sour league with death shall be abolished, and your covenant with hell shall not stand: when the overflowing scourge shall pass, you shall be trodden down by it. (Sheol h7585)
19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.
Whensoever it shall pass through, it shall take you away: because in the morning early it shall pass through, in the day and in the night, and vexation alone shall make you understand what you hear.
20 ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು.
For the bed is straitened, so that one must fall out, and a short covering cannot cover both.
21 ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.
For the Lord shall stand up as in the mountain of divisions: he shall be angry as in the valley which is in Gabaon: that he may do his work, his strange work: that he may perform his work, his work is strange to him.
22 ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.
And now do not mock, lest your bonds be tied strait. For I have heard of the Lord the God of hosts a consumption and a cutting short upon all the earth.
23 ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
Give ear, and hear my voice, hearken, and hear my speech.
24 ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ?
Shall the ploughman plough all the day to sow, shall he open and harrow his ground?
25 ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
Will he not, when he hath made plain the surface thereof, sow gith, and scatter cummin, and put wheat in order, and barley, and millet, and vetches in their bounds?
26 ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.
For he will instruct him in judgment: his God will teach him.
27 ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.
For gith shall not be thrashed with saws, neither shall the cart wheel turn about upon cummin: but gith shall be beaten out with a rod, and cummin with a staff.
28 ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ.
But bread corn shall be broken small: but the thrasher shall not thrash it for ever, neither shall the cart wheel hurt it, nor break it with its teeth.
29 ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.
This also is come forth from the Lord God of hosts, to make his counsel wonderful, and magnify justice.

< ಯೆಶಾಯನು 28 >