< ಯೆಶಾಯನು 35 >

1 ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು.
Радуйся, пустыня жаждущая, да веселится пустыня и да цветет яко крин.
2 ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.
И процветет и возвеселится пустыня Иорданова: и слава Ливанова дадеся ей, и честь Кармилова, и узрят людие мои славу Господню и высоту Божию.
3 ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ. ನಡುಗುವ ಮೊಣಕಾಲುಗಳನ್ನು ದೃಢಪಡಿಸಿರಿ.
Укрепитеся, руце ослабленыя и колена разслабленая:
4 ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.
утешитеся, малодушнии умом укрепитеся, не бойтеся: се, Бог наш суд воздает и воздаст, Той приидет и спасет нас.
5 ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.
Тогда отверзутся очи слепых, и уши глухих услышат.
6 ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.
Тогда скочит хромый яко елень, и ясен будет язык гугнивых: яко проторжеся вода в пустыни и дебрь в земли жаждущей.
7 ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.
И безводная будет во езера, и на жаждущей земли источник водный будет: тамо будет веселие птицам, и селитва трости, и лузи.
8 ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.
И тамо будет путь чист, и путь свят наречется: и не прейдет тамо нечистый, ниже будет тамо путь нечист: разсеяннии же пойдут по нему и не заблудят.
9 ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.
И не будет тамо льва, ни от зверей злых не взыдет нань, ниже обрящется тамо, но пойдут по нему избавленнии:
10 ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.
и собраннии Господем обратятся и приидут в Сион с радостию, и радость вечная над главою их: над главою бо их хвала и веселие, и радость приимет я, отбеже болезнь и печаль и воздыхание.

< ಯೆಶಾಯನು 35 >