< ಯೆಶಾಯನು 37 >

1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
וַֽיְהִי כִּשְׁמֹעַ הַמֶּלֶךְ חִזְקִיָּהוּ וַיִּקְרַע אֶת־בְּגָדָיו וַיִּתְכַּס בַּשָּׂק וַיָּבֹא בֵּית יְהֹוָֽה׃
2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
וַיִּשְׁלַח אֶת־אֶלְיָקִים אֲשֶׁר־עַל־הַבַּיִת וְאֵת ׀ שֶׁבְנָא הַסּוֹפֵר וְאֵת זִקְנֵי הַכֹּהֲנִים מִתְכַּסִּים בַּשַּׂקִּים אֶל־יְשַׁעְיָהוּ בֶן־אָמוֹץ הַנָּבִֽיא׃
3 ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
וַיֹּאמְרוּ אֵלָיו כֹּה אָמַר חִזְקִיָּהוּ יוֹם־צָרָה וְתוֹכֵחָה וּנְאָצָה הַיּוֹם הַזֶּה כִּי בָאוּ בָנִים עַד־מַשְׁבֵּר וְכֹחַ אַיִן לְלֵדָֽה׃
4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.
אוּלַי יִשְׁמַע יְהֹוָה אֱלֹהֶיךָ אֵת ׀ דִּבְרֵי רַבְשָׁקֵה אֲשֶׁר שְׁלָחוֹ מֶלֶךְ־אַשּׁוּר ׀ אֲדֹנָיו לְחָרֵף אֱלֹהִים חַי וְהוֹכִיחַ בַּדְּבָרִים אֲשֶׁר שָׁמַע יְהֹוָה אֱלֹהֶיךָ וְנָשָׂאתָ תְפִלָּה בְּעַד הַשְּׁאֵרִית הַנִּמְצָאָֽה׃
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
וַיָּבֹאוּ עַבְדֵי הַמֶּלֶךְ חִזְקִיָּהוּ אֶֽל־יְשַׁעְיָֽהוּ׃
6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
וַיֹּאמֶר אֲלֵיהֶם יְשַֽׁעְיָהוּ כֹּה תֹאמְרוּן אֶל־אֲדֹנֵיכֶם כֹּה ׀ אָמַר יְהֹוָה אַל־תִּירָא מִפְּנֵי הַדְּבָרִים אֲשֶׁר שָׁמַעְתָּ אֲשֶׁר גִּדְּפוּ נַעֲרֵי מֶלֶךְ־אַשּׁוּר אוֹתִֽי׃
7 ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
הִנְנִי נוֹתֵן בּוֹ רוּחַ וְשָׁמַע שְׁמוּעָה וְשָׁב אֶל־אַרְצוֹ וְהִפַּלְתִּיו בַּחֶרֶב בְּאַרְצֽוֹ׃
8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
וַיָּשׇׁב רַבְשָׁקֵה וַיִּמְצָא אֶת־מֶלֶךְ אַשּׁוּר נִלְחָם עַל־לִבְנָה כִּי שָׁמַע כִּי נָסַע מִלָּכִֽישׁ׃
9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,
וַיִּשְׁמַע עַל־תִּרְהָקָה מֶֽלֶךְ־כּוּשׁ לֵאמֹר יָצָא לְהִלָּחֵם אִתָּךְ וַיִּשְׁמַע וַיִּשְׁלַח מַלְאָכִים אֶל־חִזְקִיָּהוּ לֵאמֹֽר׃
10 “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
כֹּה תֹאמְרוּן אֶל־חִזְקִיָּהוּ מֶֽלֶךְ־יְהוּדָה לֵאמֹר אַל־יַשִּׁאֲךָ אֱלֹהֶיךָ אֲשֶׁר אַתָּה בּוֹטֵחַ בּוֹ לֵאמֹר לֹא תִנָּתֵן יְרוּשָׁלַ͏ִם בְּיַד מֶלֶךְ אַשּֽׁוּר׃
11 ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
הִנֵּה ׀ אַתָּה שָׁמַעְתָּ אֲשֶׁר עָשׂוּ מַלְכֵי אַשּׁוּר לְכׇל־הָאֲרָצוֹת לְהַחֲרִימָם וְאַתָּה תִּנָּצֵֽל׃
12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
הַהִצִּילוּ אוֹתָם אֱלֹהֵי הַגּוֹיִם אֲשֶׁר הִשְׁחִיתוּ אֲבוֹתַי אֶת־גּוֹזָן וְאֶת־חָרָן וְרֶצֶף וּבְנֵי־עֶדֶן אֲשֶׁר בִּתְלַשָּֽׂר׃
13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
אַיֵּה מֶֽלֶךְ־חֲמָת וּמֶלֶךְ אַרְפָּד וּמֶלֶךְ לָעִיר סְפַרְוָיִם הֵנַע וְעִוָּֽה׃
14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
וַיִּקַּח חִזְקִיָּהוּ אֶת־הַסְּפָרִים מִיַּד הַמַּלְאָכִים וַיִּקְרָאֵהוּ וַיַּעַל בֵּית יְהֹוָה וַיִּפְרְשֵׂהוּ חִזְקִיָּהוּ לִפְנֵי יְהֹוָֽה׃
15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ,
וַיִּתְפַּלֵּל חִזְקִיָּהוּ אֶל־יְהֹוָה לֵאמֹֽר׃
16 “ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
יְהֹוָה צְבָאוֹת אֱלֹהֵי יִשְׂרָאֵל יֹשֵׁב הַכְּרֻבִים אַתָּה־הוּא הָֽאֱלֹהִים לְבַדְּךָ לְכֹל מַמְלְכוֹת הָאָרֶץ אַתָּה עָשִׂיתָ אֶת־הַשָּׁמַיִם וְאֶת־הָאָֽרֶץ׃
17 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
הַטֵּה יְהֹוָה ׀ אׇזְנְךָ וּֽשְׁמָע פְּקַח יְהֹוָה עֵינֶךָ וּרְאֵה וּשְׁמַע אֵת כׇּל־דִּבְרֵי סַנְחֵרִיב אֲשֶׁר שָׁלַח לְחָרֵף אֱלֹהִים חָֽי׃
18 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
אׇמְנָם יְהֹוָה הֶחֱרִיבוּ מַלְכֵי אַשּׁוּר אֶת־כׇּל־הָאֲרָצוֹת וְאֶת־אַרְצָֽם׃
19 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
וְנָתֹן אֶת־אֱלֹהֵיהֶם בָּאֵשׁ כִּי לֹא אֱלֹהִים הֵמָּה כִּי אִם־מַעֲשֵׂה יְדֵֽי־אָדָם עֵץ וָאֶבֶן וַֽיְאַבְּדֽוּם׃
20 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
וְעַתָּה יְהֹוָה אֱלֹהֵינוּ הוֹשִׁיעֵנוּ מִיָּדוֹ וְיֵֽדְעוּ כׇּל־מַמְלְכוֹת הָאָרֶץ כִּֽי־אַתָּה יְהֹוָה לְבַדֶּֽךָ׃
21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,
וַיִּשְׁלַח יְשַֽׁעְיָהוּ בֶן־אָמוֹץ אֶל־חִזְקִיָּהוּ לֵאמֹר כֹּֽה־אָמַר יְהֹוָה אֱלֹהֵי יִשְׂרָאֵל אֲשֶׁר הִתְפַּלַּלְתָּ אֵלַי אֶל־סַנְחֵרִיב מֶלֶךְ אַשּֽׁוּר׃
22 ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
זֶה הַדָּבָר אֲשֶׁר־דִּבֶּר יְהֹוָה עָלָיו בָּזָה לְךָ לָעֲגָה לְךָ בְּתוּלַת בַּת־צִיּוֹן אַחֲרֶיךָ רֹאשׁ הֵנִיעָה בַּת יְרוּשָׁלָֽ͏ִם׃
23 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
אֶת־מִי חֵרַפְתָּ וְגִדַּפְתָּ וְעַל־מִי הֲרִימוֹתָה קּוֹל וַתִּשָּׂא מָרוֹם עֵינֶיךָ אֶל־קְדוֹשׁ יִשְׂרָאֵֽל׃
24 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
בְּיַד עֲבָדֶיךָ חֵרַפְתָּ ׀ אֲדֹנָי וַתֹּאמֶר בְּרֹב רִכְבִּי אֲנִי עָלִיתִי מְרוֹם הָרִים יַרְכְּתֵי לְבָנוֹן וְאֶכְרֹת קוֹמַת אֲרָזָיו מִבְחַר בְּרֹשָׁיו וְאָבוֹא מְרוֹם קִצּוֹ יַעַר כַּרְמִלּֽוֹ׃
25 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’
אֲנִי קַרְתִּי וְשָׁתִיתִי מָיִם וְאַחְרִב בְּכַף־פְּעָמַי כֹּל יְאֹרֵי מָצֽוֹר׃
26 “ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ
הֲלֽוֹא־שָׁמַעְתָּ לְמֵֽרָחוֹק אוֹתָהּ עָשִׂיתִי מִימֵי קֶדֶם וִיצַרְתִּיהָ עַתָּה הֲבֵאתִיהָ וּתְהִי לְהַשְׁאוֹת גַּלִּים נִצִּים עָרִים בְּצֻרֽוֹת׃
27 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
וְיֹֽשְׁבֵיהֶן קִצְרֵי־יָד חַתּוּ וָבֹשׁוּ הָיוּ עֵשֶׂב שָׂדֶה וִירַק דֶּשֶׁא חֲצִיר גַּגּוֹת וּשְׁדֵמָה לִפְנֵי קָמָֽה׃
28 “ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
וְשִׁבְתְּךָ וְצֵאתְךָ וּבוֹאֲךָ יָדָעְתִּי וְאֵת הִֽתְרַגֶּזְךָ אֵלָֽי׃
29 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.
יַעַן הִתְרַגֶּזְךָ אֵלַי וְשַׁאֲנַנְךָ עָלָה בְאׇזְנָי וְשַׂמְתִּי חַחִי בְּאַפֶּךָ וּמִתְגִּי בִּשְׂפָתֶיךָ וַהֲשִׁיבֹתִיךָ בַּדֶּרֶךְ אֲשֶׁר־בָּאתָ בָּֽהּ׃
30 “ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.
וְזֶה־לְּךָ הָאוֹת אָכוֹל הַשָּׁנָה סָפִיחַ וּבַשָּׁנָה הַשֵּׁנִית שָׁחִיס וּבַשָּׁנָה הַשְּׁלִישִׁית זִרְעוּ וְקִצְרוּ וְנִטְעוּ כְרָמִים (ואכול) [וְאִכְלוּ] פִרְיָֽם׃
31 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
וְיָסְפָה פְּלֵיטַת בֵּית־יְהוּדָה הַנִּשְׁאָרָה שֹׁרֶשׁ לְמָטָּה וְעָשָׂה פְרִי לְמָֽעְלָה׃
32 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
כִּי מִירוּשָׁלַ͏ִם תֵּצֵא שְׁאֵרִית וּפְלֵיטָה מֵהַר צִיּוֹן קִנְאַת יְהֹוָה צְבָאוֹת תַּעֲשֶׂה־זֹּֽאת׃
33 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
לָכֵן כֹּֽה־אָמַר יְהֹוָה אֶל־מֶלֶךְ אַשּׁוּר לֹא יָבוֹא אֶל־הָעִיר הַזֹּאת וְלֹא־יוֹרֶה שָׁם חֵץ וְלֹא־יְקַדְּמֶנָּה מָגֵן וְלֹֽא־יִשְׁפֹּךְ עָלֶיהָ סֹלְלָֽה׃
34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
בַּדֶּרֶךְ אֲשֶׁר־בָּא בָּהּ יָשׁוּב וְאֶל־הָעִיר הַזֹּאת לֹא יָבוֹא נְאֻם־יְהֹוָֽה׃
35 “ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”
וְגַנּוֹתִי עַל־הָעִיר הַזֹּאת לְהֽוֹשִׁיעָהּ לְמַֽעֲנִי וּלְמַעַן דָּוִד עַבְדִּֽי׃
36 ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
וַיֵּצֵא ׀ מַלְאַךְ יְהֹוָה וַיַּכֶּה בְּמַחֲנֵה אַשּׁוּר מֵאָה וּשְׁמֹנִים וַחֲמִשָּׁה אָלֶף וַיַּשְׁכִּימוּ בַבֹּקֶר וְהִנֵּה כֻלָּם פְּגָרִים מֵתִֽים׃
37 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
וַיִּסַּע וַיֵּלֶךְ וַיָּשׇׁב סַנְחֵרִיב מֶלֶךְ־אַשּׁוּר וַיֵּשֶׁב בְּנִֽינְוֵֽה׃
38 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
וַיְהִי הוּא מִֽשְׁתַּחֲוֶה בֵּית ׀ נִסְרֹךְ אֱלֹהָיו וְֽאַדְרַמֶּלֶךְ וְשַׂרְאֶצֶר בָּנָיו הִכֻּהוּ בַחֶרֶב וְהֵמָּה נִמְלְטוּ אֶרֶץ אֲרָרָט וַיִּמְלֹךְ אֵסַר־חַדֹּן בְּנוֹ תַּחְתָּֽיו׃

< ಯೆಶಾಯನು 37 >