< ಯೆಶಾಯನು 39 >

1 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.
בָּעֵת הַהִוא שָׁלַח מְרֹדַךְ בַּלְאֲדָן בֶּֽן־בַּלְאֲדָן מֶֽלֶךְ־בָּבֶל סְפָרִים וּמִנְחָה אֶל־חִזְקִיָּהוּ וַיִּשְׁמַע כִּי חָלָה וֽ͏ַיֶּחֱזָֽק׃
2 ಹಿಜ್ಕೀಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
וַיִּשְׂמַח עֲלֵיהֶם חִזְקִיָּהוּ וַיַּרְאֵם אֶת־בֵּית נכתה נְכֹתוֹ אֶת־הַכֶּסֶף וְאֶת־הַזָּהָב וְאֶת־הַבְּשָׂמִים וְאֵת ׀ הַשֶּׁמֶן הַטּוֹב וְאֵת כָּל־בֵּית כֵּלָיו וְאֵת כָּל־אֲשֶׁר נִמְצָא בְּאֹֽצְרֹתָיו לֹֽא־הָיָה דָבָר אֲשֶׁר לֹֽא־הֶרְאָם חִזְקִיָּהוּ בְּבֵיתוֹ וּבְכָל־מֶמְשַׁלְתּֽוֹ׃
3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ನನ್ನ ಬಳಿಗೆ ಬಂದವರು,” ಎಂದು ಹೇಳಿದನು.
וַיָּבֹא יְשַׁעְיָהוּ הַנָּבִיא אֶל־הַמֶּלֶךְ חִזְקִיָּהוּ וַיֹּאמֶר אֵלָיו מָה אָמְרוּ ׀ הָאֲנָשִׁים הָאֵלֶּה וּמֵאַיִן יָבֹאוּ אֵלֶיךָ וַיֹּאמֶר חִזְקִיָּהוּ מֵאֶרֶץ רְחוֹקָה בָּאוּ אֵלַי מִבָּבֶֽל׃
4 ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.
וַיֹּאמֶר מָה רָאוּ בְּבֵיתֶךָ וַיֹּאמֶר חִזְקִיָּהוּ אֵת כָּל־אֲשֶׁר בְּבֵיתִי רָאוּ לֹֽא־הָיָה דָבָר אֲשֶׁר לֹֽא־הִרְאִיתִים בְּאוֹצְרֹתָֽי׃
5 ಆಗ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರ ಯೆಹೋವ ದೇವರ ವಾಕ್ಯವನ್ನು ಕೇಳು.
וַיֹּאמֶר יְשַׁעְיָהוּ אֶל־חִזְקִיָּהוּ שְׁמַע דְּבַר־יְהוָה צְבָאֽוֹת׃
6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವ ದೇವರು ಹೇಳಿದರು.
הִנֵּה יָמִים בָּאִים וְנִשָּׂא ׀ כָּל־אֲשֶׁר בְּבֵיתֶךָ וַאֲשֶׁר אָצְרוּ אֲבֹתֶיךָ עַד־הַיּוֹם הַזֶּה בָּבֶל לֹֽא־יִוָּתֵר דָּבָר אָמַר יְהוָֽה׃
7 ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.
וּמִבָּנֶיךָ אֲשֶׁר יֵצְאוּ מִמְּךָ אֲשֶׁר תּוֹלִיד יִקָּחוּ וְהָיוּ סָרִיסִים בְּהֵיכַל מֶלֶךְ בָּבֶֽל׃
8 ಆಗ ಹಿಜ್ಕೀಯನು, “ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು,” ಎಂದುಕೊಂಡು ಯೆಶಾಯನಿಗೆ, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ!” ಎಂದನು.
וַיֹּאמֶר חִזְקִיָּהוּ אֶֽל־יְשַׁעְיָהוּ טוֹב דְּבַר־יְהוָה אֲשֶׁר דִּבַּרְתָּ וַיֹּאמֶר כִּי יִהְיֶה שָׁלוֹם וֶאֱמֶת בְּיָמָֽי׃

< ಯೆಶಾಯನು 39 >