< ಯೆಶಾಯನು 4 >

1 ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು.
و در آن روز هفت زن به یک مرد متمسک شده، خواهند گفت: «نان خود را خواهیم خورد و رخت خود را خواهیم پوشید، فقط نام توبر ما خوانده شود و عار ما را بردار.»۱
2 ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.
در آن روز شاخه خداوند زیبا و جلیل ومیوه زمین به جهت ناجیان اسرائیل فخر و زینت خواهد بود.۲
3 ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.
و واقع می‌شود که هرکه در صهیون باقی ماند و هر‌که در اورشلیم ترک شود مقدس خوانده خواهد شد یعنی هرکه در اورشلیم دردفتر حیات مکتوب باشد.۳
4 ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.
هنگامی که خداوندچرک دختران صهیون را بشوید و خون اورشلیم را به روح انصاف و روح سوختگی از میانش رفع نماید،۴
5 ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.
خداوند بر جمیع مساکن کوه صهیون وبر محفلهایش ابر و دود در روز و درخشندگی آتش مشتعل در شب خواهد آفرید، زیرا که برتمامی جلال آن پوششی خواهد بود.۵
6 ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.
و در وقت روز سایه بانی به جهت سایه از گرما و به جهت ملجاء و پناهگاه از طوفان و باران خواهد بود.۶

< ಯೆಶಾಯನು 4 >