< ಯೆಶಾಯನು 46 >
1 ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
Паде Вил, сокрушися Дагон, быша ваяния их во звери и скоты: носите я связана яко бремя труждающемуся и разслабевшу,
2 ಒಟ್ಟಿಗೆ ಕುಗ್ಗಿ ಬಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ತಾವೇ ಸೆರೆಗೆ ಹೋದವು.
и алчущу и не могущу вкупе, иже не возмогут спастися от рати, сами же пленени приведошася.
3 ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.
Послушайте Мене, доме Иаковль и весь останок Израилев, носимии от чрева и наказуемии от детска даже до старости:
4 ನಿಮ್ಮ ಮುಪ್ಪಿನ ತನಕ ನಾನೇ ಆಧಾರ; ನೆರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು; ನಾನೇ ಹೊರುವೆನು; ಹೌದು, ನಿಮ್ಮನ್ನು ಹೊತ್ತು, ಸಹಿಸಿ, ನಿರ್ವಹಿಸುವೆನು.
Аз есмь, и дондеже состареетеся, Аз есмь, Аз терплю вам, Аз сотворих и Аз понесу, Аз подиму и спасу вы.
5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ? ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡುವಿರಿ?
Кому Мя уподобисте? Видите, ухитрите, заблуждающии,
6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
слагающии злато из меха, и сребро весом поставляют в мериле, и наемше златаря сотвориша рукотворенная, и преклоншеся покланяются им:
7 ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರ ಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
воздвижут я на рамех и ходят: аще же положат я на месте своем, ту лежат, ниже подвижутся: и иже аще возопиет к ним, не услышат, от бед не спасут его.
8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ.
Помяните сия и возстените, покайтеся, прельстившиися, обратитеся сердцем
9 ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.
и помяните первая от века, яко Аз есмь Бог, и несть еще разве Мене:
10 ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.
возвещаяй первее последняя, прежде неже быти им, и абие сбышася: и рекох: весь совет Мой станет, и вся, елика совещах, сотворю.
11 ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು.
Призываяй от восток птицу, и от земли издалеча, о нихже совещах: рекох и приведох, создах и сотворих, приведох и и благопоспеших путь его.
12 ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ.
Послушайте Мене, погубльшии сердце, сущии далече от правды:
13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.
приближих правду Мою, и не удалится, и спасение, еже от Мене, не умедлю: дах в Сионе спасение Израилю во прославление.