< ಯೆಶಾಯನು 5 >

1 ನನ್ನ ಪ್ರಿಯನ ದ್ರಾಕ್ಷಿತೋಟದ ವಿಷಯವಾದ ಹಾಡನ್ನು ನನ್ನ ಪ್ರಾಣ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದ ಬಳಿಯಲ್ಲಿ ನನ್ನ ಅತಿ ಪ್ರಿಯನಿಗೆ ದ್ರಾಕ್ಷಿ ತೋಟವಿದೆ.
אָשִׁירָה נָּא לִֽידִידִי שִׁירַת דּוֹדִי לְכַרְמוֹ כֶּרֶם הָיָה לִידִידִי בְּקֶרֶן בֶּן־שָֽׁמֶן׃
2 ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.
וַֽיְעַזְּקֵהוּ וַֽיְסַקְּלֵהוּ וַיִּטָּעֵהוּ שֹׂרֵק וַיִּבֶן מִגְדָּל בְּתוֹכוֹ וְגַם־יֶקֶב חָצֵב בּוֹ וַיְקַו לַֽעֲשׂוֹת עֲנָבִים וַיַּעַשׂ בְּאֻשִֽׁים׃
3 “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
וְעַתָּה יוֹשֵׁב יְרוּשָׁלַ͏ִם וְאִישׁ יְהוּדָה שִׁפְטוּ־נָא בֵּינִי וּבֵין כַּרְמִֽי׃
4 ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?
מַה־לַּעֲשׂוֹת עוֹד לְכַרְמִי וְלֹא עָשִׂיתִי בּוֹ מַדּוּעַ קִוֵּיתִי לַעֲשׂוֹת עֲנָבִים וַיַּעַשׂ בְּאֻשִֽׁים׃
5 ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.
וְעַתָּה אוֹדִיעָה־נָּא אֶתְכֶם אֵת אֲשֶׁר־אֲנִי עֹשֶׂה לְכַרְמִי הָסֵר מְשׂוּכָּתוֹ וְהָיָה לְבָעֵר פָּרֹץ גְּדֵרוֹ וְהָיָה לְמִרְמָֽס׃
6 ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”
וַאֲשִׁיתֵהוּ בָתָה לֹא יִזָּמֵר וְלֹא יֵעָדֵר וְעָלָה שָׁמִיר וָשָׁיִת וְעַל הֶֽעָבִים אֲצַוֶּה מֵהַמְטִיר עָלָיו מָטָֽר׃
7 ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.
כִּי כֶרֶם יְהֹוָה צְבָאוֹת בֵּית יִשְׂרָאֵל וְאִישׁ יְהוּדָה נְטַע שַׁעֲשׁוּעָיו וַיְקַו לְמִשְׁפָּט וְהִנֵּה מִשְׂפָּח לִצְדָקָה וְהִנֵּה צְעָקָֽה׃
8 ಅಯ್ಯೋ, ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ, ಹೊಲಕ್ಕೆ ಹೊಲ ಸೇರಿಸುವ ನಿಮಗೆ ಕಷ್ಟ!
הוֹי מַגִּיעֵי בַיִת בְּבַיִת שָׂדֶה בְשָׂדֶה יַקְרִיבוּ עַד אֶפֶס מָקוֹם וְהוּשַׁבְתֶּם לְבַדְּכֶם בְּקֶרֶב הָאָֽרֶץ׃
9 ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.
בְּאׇזְנָי יְהֹוָה צְבָאוֹת אִם־לֹא בָּתִּים רַבִּים לְשַׁמָּה יִֽהְיוּ גְּדֹלִים וְטוֹבִים מֵאֵין יוֹשֵֽׁב׃
10 ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”
כִּי עֲשֶׂרֶת צִמְדֵּי־כֶרֶם יַעֲשׂוּ בַּת אֶחָת וְזֶרַע חֹמֶר יַעֲשֶׂה אֵיפָֽה׃
11 ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳಗಿನ ಜಾವದಲ್ಲಿ ಎದ್ದು ರಾತ್ರಿವರೆಗೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲಕಳೆಯುವವರಿಗೆ ಕಷ್ಟ!
הוֹי מַשְׁכִּימֵי בַבֹּקֶר שֵׁכָר יִרְדֹּפוּ מְאַחֲרֵי בַנֶּשֶׁף יַיִן יַדְלִיקֵֽם׃
12 ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.
וְהָיָה כִנּוֹר וָנֶבֶל תֹּף וְחָלִיל וָיַיִן מִשְׁתֵּיהֶם וְאֵת פֹּעַל יְהֹוָה לֹא יַבִּיטוּ וּמַעֲשֵׂה יָדָיו לֹא רָאֽוּ׃
13 ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
לָכֵן גָּלָה עַמִּי מִבְּלִי־דָעַת וּכְבוֹדוֹ מְתֵי רָעָב וַהֲמוֹנוֹ צִחֵה צָמָֽא׃
14 ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು. (Sheol h7585)
לָכֵן הִרְחִיבָה שְּׁאוֹל נַפְשָׁהּ וּפָעֲרָה פִיהָ לִבְלִי־חֹק וְיָרַד הֲדָרָהּ וַהֲמוֹנָהּ וּשְׁאוֹנָהּ וְעָלֵז בָּֽהּ׃ (Sheol h7585)
15 ನರಮಾನವರು ತಗ್ಗಿಹೋಗುವರು. ಅಹಂಭಾವದ ಕಣ್ಣುಗಳು ಕಂಗೆಡುವುವು.
וַיִּשַּׁח אָדָם וַיִּשְׁפַּל־אִישׁ וְעֵינֵי גְבֹהִים תִּשְׁפַּֽלְנָה׃
16 ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.
וַיִּגְבַּהּ יְהֹוָה צְבָאוֹת בַּמִּשְׁפָּט וְהָאֵל הַקָּדוֹשׁ נִקְדָּשׁ בִּצְדָקָֽה׃
17 ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.
וְרָעוּ כְבָשִׂים כְּדׇבְרָם וְחׇרְבוֹת מֵחִים גָּרִים יֹאכֵֽלוּ׃
18 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ, ಬಂಡಿಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು,
הוֹי מֹשְׁכֵי הֶעָוֺן בְּחַבְלֵי הַשָּׁוְא וְכַעֲבוֹת הָעֲגָלָה חַטָּאָֽה׃
19 ನಾವು ಅವರ ಕೆಲಸವನ್ನು ನೋಡುವಂತೆ, “ದೇವರು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ. ನಾವು ಇಸ್ರಾಯೇಲಿನ ಪರಿಶುದ್ಧರ ಆಲೋಚನೆಯನ್ನು ತಿಳಿದುಕೊಳ್ಳುವ ಹಾಗೆ ಅದು ಸಮೀಪಿಸಿ ಬರಲಿ ಎಂದು ಹೇಳುವವರಿಗೆ ಕಷ್ಟ!”
הָאֹמְרִים יְמַהֵר ׀ יָחִישָׁה מַעֲשֵׂהוּ לְמַעַן נִרְאֶה וְתִקְרַב וְתָבוֹאָה עֲצַת קְדוֹשׁ יִשְׂרָאֵל וְנֵדָֽעָה׃
20 ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!
הוֹי הָאֹמְרִים לָרַע טוֹב וְלַטּוֹב רָע שָׂמִים חֹשֶׁךְ לְאוֹר וְאוֹר לְחֹשֶׁךְ שָׂמִים מַר לְמָתוֹק וּמָתוֹק לְמָֽר׃
21 ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!
הוֹי חֲכָמִים בְּעֵינֵיהֶם וְנֶגֶד פְּנֵיהֶם נְבֹנִֽים׃
22 ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ, ಮದ್ಯ ಸಾಹಸಿಗಳೂ,
הוֹי גִּבּוֹרִים לִשְׁתּוֹת יָיִן וְאַנְשֵׁי־חַיִל לִמְסֹךְ שֵׁכָֽר׃
23 ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!
מַצְדִּיקֵי רָשָׁע עֵקֶב שֹׁחַד וְצִדְקַת צַדִּיקִים יָסִירוּ מִמֶּֽנּוּ׃
24 ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.
לָכֵן כֶּֽאֱכֹל קַשׁ לְשׁוֹן אֵשׁ וַחֲשַׁשׁ לֶהָבָה יִרְפֶּה שׇׁרְשָׁם כַּמָּק יִֽהְיֶה וּפִרְחָם כָּאָבָק יַעֲלֶה כִּי מָאֲסוּ אֵת תּוֹרַת יְהֹוָה צְבָאוֹת וְאֵת אִמְרַת קְדֽוֹשׁ־יִשְׂרָאֵל נִאֵֽצוּ׃
25 ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.
עַל־כֵּן חָרָה אַף־יְהֹוָה בְּעַמּוֹ וַיֵּט יָדוֹ עָלָיו וַיַּכֵּהוּ וַֽיִּרְגְּזוּ הֶהָרִים וַתְּהִי נִבְלָתָם כַּסּוּחָה בְּקֶרֶב חוּצוֹת בְּכׇל־זֹאת לֹא־שָׁב אַפּוֹ וְעוֹד יָדוֹ נְטוּיָֽה׃
26 ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,
וְנָֽשָׂא־נֵס לַגּוֹיִם מֵרָחוֹק וְשָׁרַק לוֹ מִקְצֵה הָאָרֶץ וְהִנֵּה מְהֵרָה קַל יָבֽוֹא׃
27 ಅವರಲ್ಲಿ ಯಾರೂ ದಣಿದು ಮುಗ್ಗರಿಸರು, ಅವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ, ಅವರ ನಡುಕಟ್ಟು ಬಿಚ್ಚಿಕೊಳ್ಳುವುದಿಲ್ಲ. ಕೆರದ ಬಾರು ಹರಿಯುವುದಿಲ್ಲ.
אֵין־עָיֵף וְאֵין־כּוֹשֵׁל בּוֹ לֹא יָנוּם וְלֹא יִישָׁן וְלֹא נִפְתַּח אֵזוֹר חֲלָצָיו וְלֹא נִתַּק שְׂרוֹךְ נְעָלָֽיו׃
28 ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಅವರ ರಥಗಳ ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.
אֲשֶׁר חִצָּיו שְׁנוּנִים וְכׇל־קַשְּׁתֹתָיו דְּרֻכוֹת פַּרְסוֹת סוּסָיו כַּצַּר נֶחְשָׁבוּ וְגַלְגִּלָּיו כַּסּוּפָֽה׃
29 ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ. ಪ್ರಾಯದ ಸಿಂಹ ಆರ್ಭಟಿಸಿದಂತಿದೆ. ಹೌದು, ಗರ್ಜಿಸುತ್ತಾ ಬೇಟೆಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ, ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.
שְׁאָגָה לוֹ כַּלָּבִיא (ושאג) [יִשְׁאַג] כַּכְּפִירִים וְיִנְהֹם וְיֹאחֵז טֶרֶף וְיַפְלִיט וְאֵין מַצִּֽיל׃
30 ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.
וְיִנְהֹם עָלָיו בַּיּוֹם הַהוּא כְּנַהֲמַת־יָם וְנִבַּט לָאָרֶץ וְהִנֵּה־חֹשֶׁךְ צַר וָאוֹר חָשַׁךְ בַּעֲרִיפֶֽיהָ׃

< ಯೆಶಾಯನು 5 >