< ಯೆಶಾಯನು 53 >

1 ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?
מִ֥י הֶאֱמִ֖ין לִשְׁמֻעָתֵ֑נוּ וּזְרֹ֥ועַ יְהוָ֖ה עַל־מִ֥י נִגְלָֽתָה׃
2 ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.
וַיַּ֨עַל כַּיֹּונֵ֜ק לְפָנָ֗יו וְכַשֹּׁ֙רֶשׁ֙ מֵאֶ֣רֶץ צִיָּ֔ה לֹא־תֹ֥אַר לֹ֖ו וְלֹ֣א הָדָ֑ר וְנִרְאֵ֥הוּ וְלֹֽא־מַרְאֶ֖ה וְנֶחְמְדֵֽהוּ׃
3 ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.
נִבְזֶה֙ וַחֲדַ֣ל אִישִׁ֔ים אִ֥ישׁ מַכְאֹבֹ֖ות וִיד֣וּעַ חֹ֑לִי וּכְמַסְתֵּ֤ר פָּנִים֙ מִמֶּ֔נּוּ נִבְזֶ֖ה וְלֹ֥א חֲשַׁבְנֻֽהוּ׃
4 ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.
אָכֵ֤ן חֳלָיֵ֙נוּ֙ ה֣וּא נָשָׂ֔א וּמַכְאֹבֵ֖ינוּ סְבָלָ֑ם וַאֲנַ֣חְנוּ חֲשַׁבְנֻ֔הוּ נָג֛וּעַ מֻכֵּ֥ה אֱלֹהִ֖ים וּמְעֻנֶּֽה׃
5 ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.
וְהוּא֙ מְחֹלָ֣ל מִפְּשָׁעֵ֔נוּ מְדֻכָּ֖א מֵעֲוֹנֹתֵ֑ינוּ מוּסַ֤ר שְׁלֹומֵ֙נוּ֙ עָלָ֔יו וּבַחֲבֻרָתֹ֖ו נִרְפָּא־לָֽנוּ׃
6 ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.
כֻּלָּ֙נוּ֙ כַּצֹּ֣אן תָּעִ֔ינוּ אִ֥ישׁ לְדַרְכֹּ֖ו פָּנִ֑ינוּ וַֽיהוָה֙ הִפְגִּ֣יעַ בֹּ֔ו אֵ֖ת עֲוֹ֥ן כֻּלָּֽנוּ׃
7 ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
נִגַּ֨שׂ וְה֣וּא נַעֲנֶה֮ וְלֹ֣א יִפְתַּח־פִּיו֒ כַּשֶּׂה֙ לַטֶּ֣בַח יוּבָ֔ל וּכְרָחֵ֕ל לִפְנֵ֥י גֹזְזֶ֖יהָ נֶאֱלָ֑מָה וְלֹ֥א יִפְתַּ֖ח פִּֽיו׃
8 ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.
מֵעֹ֤צֶר וּמִמִּשְׁפָּט֙ לֻקָּ֔ח וְאֶת־דֹּורֹ֖ו מִ֣י יְשֹׂוחֵ֑חַ כִּ֤י נִגְזַר֙ מֵאֶ֣רֶץ חַיִּ֔ים מִפֶּ֥שַׁע עַמִּ֖י נֶ֥גַע לָֽמֹו׃
9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
וַיִּתֵּ֤ן אֶת־רְשָׁעִים֙ קִבְרֹ֔ו וְאֶת־עָשִׁ֖יר בְּמֹתָ֑יו עַ֚ל לֹא־חָמָ֣ס עָשָׂ֔ה וְלֹ֥א מִרְמָ֖ה בְּפִֽיו׃
10 ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.
וַיהוָ֞ה חָפֵ֤ץ דַּכְּאֹו֙ הֶֽחֱלִ֔י אִם־תָּשִׂ֤ים אָשָׁם֙ נַפְשֹׁ֔ו יִרְאֶ֥ה זֶ֖רַע יַאֲרִ֣יךְ יָמִ֑ים וְחֵ֥פֶץ יְהוָ֖ה בְּיָדֹ֥ו יִצְלָֽח׃
11 ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.
מֵעֲמַ֤ל נַפְשֹׁו֙ יִרְאֶ֣ה יִשְׂבָּ֔ע בְּדַעְתֹּ֗ו יַצְדִּ֥יק צַדִּ֛יק עַבְדִּ֖י לָֽרַבִּ֑ים וַעֲוֹנֹתָ֖ם ה֥וּא יִסְבֹּֽל׃
12 ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.
לָכֵ֞ן אֲחַלֶּק־לֹ֣ו בָרַבִּ֗ים וְאֶת־עֲצוּמִים֮ יְחַלֵּ֣ק שָׁלָל֒ תַּ֗חַת אֲשֶׁ֨ר הֶעֱרָ֤ה לַמָּ֙וֶת֙ נַפְשֹׁ֔ו וְאֶת־פֹּשְׁעִ֖ים נִמְנָ֑ה וְהוּא֙ חֵטְא־רַבִּ֣ים נָשָׂ֔א וְלַפֹּשְׁעִ֖ים יַפְגִּֽיעַ׃ ס

< ಯೆಶಾಯನು 53 >