< ಯೆಶಾಯನು 60 >

1 ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು, ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
Mache dich auf, werde licht! denn dein Licht kommt, und die Herrlichkeit des HERRN geht auf über dir.
2 ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.
Denn siehe, Finsternis bedeckt das Erdreich und Dunkel die Völker; aber über dir geht auf der HERR, und seine Herrlichkeit erscheint über dir.
3 ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ, ಅರಸರು ನಿನ್ನ ಉದಯದ ಕಾಂತಿಗೂ ಬರುವರು.
Und die Heiden werden in deinem Lichte wandeln und die Könige im Glanz, der über dir aufgeht.
4 ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು.
Hebe deine Augen auf und siehe umher: diese alle versammelt kommen zu dir. Deine Söhne werden von ferne kommen und deine Töchter auf dem Arme hergetragen werden.
5 ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವುದು, ಏಕೆಂದರೆ ಸಮುದ್ರದ ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವುದು. ಇತರ ಜನಾಂಗಗಳ ಆಸ್ತಿಯು ನಿನ್ನ ಬಳಿಗೆ ಬರುವುದು.
Dann wirst du deine Lust sehen und ausbrechen, und dein Herz wird sich wundern und ausbreiten, wenn sich die Menge am Meer zu dir bekehrt und die Macht der Heiden zu dir kommt.
6 ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.
Denn die Menge der Kamele wird dich bedecken, die jungen Kamele aus Midian und Epha. Sie werden aus Saba alle kommen, Gold und Weihrauch bringen und des HERRN Lob verkündigen.
7 ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು.
Alle Herden in Kedar sollen zu dir versammelt werden, und die Böcke Nebajoths sollen dir dienen. Sie sollen als ein angenehmes Opfer auf meinen Altar kommen; denn ich will das Haus meiner Herrlichkeit zieren.
8 ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
Wer sind die, welche fliegen wie die Wolken und wie die Tauben zu ihren Fenstern?
9 ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.
Die Inseln harren auf mich und die Schiffe im Meer von längsther, daß sie deine Kinder von ferne herzubringen samt ihrem Silber und Gold, dem Namen des HERRN, deines Gottes, und dem Heiligen in Israel, der dich herrlich gemacht hat.
10 ಇದಲ್ಲದೆ ವಿದೇಶಿಯರು ನಿನ್ನ ಗೋಡೆಗಳನ್ನು ಕಟ್ಟುವರು. ಅವರ ಅರಸರು ಸಹ ನಿನಗೆ ಸೇವೆಮಾಡುವರು. ಏಕೆಂದರೆ ನನ್ನ ಬೇಸರದಲ್ಲಿ ನಿನ್ನನ್ನು ಹೊಡೆದೆನು. ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
Fremde werden deine Mauern bauen, und ihre Könige werden dir dienen. Denn in meinem Zorn habe ich dich geschlagen, und in meiner Gnade erbarme ich mich über dich.
11 ಆದ್ದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವುವು. ಇತರ ಜನಾಂಗಗಳ ಆಸ್ತಿ ನಿನ್ನ ಬಳಿಗೆ ತರುತ್ತಿರುವರು. ಅವರ ಅರಸರು ಸಹ ಬಂಧುಗಳಾಗಿ ನಿನ್ನ ಮೆರವಣಿಗೆಯಲ್ಲಿ ಮುನ್ನಡೆಸಿದರು ಹಗಲುರಾತ್ರಿ ಅವು ಮುಚ್ಚಿರುವುದಿಲ್ಲ.
Und deine Tore sollen stets offen stehen, weder Tag noch Nacht zugeschlossen werden, daß der Heiden Macht zu dir gebracht und ihre Könige herzugeführt werden.
12 ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.
Denn welche Heiden oder Königreiche dir nicht dienen wollen, die sollen umkommen und die Heiden verwüstet werden.
13 ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
Die Herrlichkeit des Libanon soll an dich kommen, Tannen, Buchen und Buchsbaum miteinander, zu schmücken den Ort meines Heiligtums; denn ich will die Stätte meiner Füße herrlich machen.
14 ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.
Es werden auch gebückt zu dir kommen, die dich unterdrückt haben; und alle; die dich gelästert haben, werden niederfallen zu deinen Füßen und werden dich nennen eine Stadt des HERRN, ein Zion des Heiligen in Israel.
15 ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.
Denn darum, daß du bist die Verlassene und Gehaßte gewesen, da niemand hindurchging, will ich dich zur Pracht ewiglich machen und zur Freude für und für,
16 ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ.
daß du sollst Milch von den Heiden saugen, und der Könige Brust soll dich säugen, auf daß du erfährst, daß ich, der HERR, bin dein Heiland, und ich, der Mächtige in Jakob, bin dein Erlöser.
17 ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.
Ich will Gold anstatt des Erzes und Silber anstatt des Eisens bringen und Erz anstatt des Holzes und Eisen anstatt der Steine; und will zu deiner Obrigkeit den Frieden machen und zu deinen Vögten die Gerechtigkeit.
18 ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.
Man soll keinen Frevel mehr hören in deinem Lande noch Schaden oder Verderben in deinen Grenzen; sondern deine Mauern sollen Heil und deine Tore Lob heißen.
19 ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.
Die Sonne soll nicht mehr des Tages dir scheinen, und der Glanz des Mondes soll dir nicht leuchten; sondern der HERR wird dein ewiges Licht und dein Gott wird dein Preis sein.
20 ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.
Deine Sonne wird nicht mehr untergehen noch dein Mond den Schein verlieren; denn der HERR wird dein ewiges Licht sein, und die Tage deines Leides sollen ein Ende haben.
21 ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.
Und dein Volk sollen eitel Gerechte sein; sie werden das Erdreich ewiglich besitzen, als die der Zweig meiner Pflanzung und ein Werk meiner Hände sind zum Preise.
22 ಕನಿಷ್ಠನು ಸಾವಿರವಾಗುವನು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತ ಕಾಲದಲ್ಲಿ ಇದನ್ನು ಬಹು ಬೇಗನೆ ಉಂಟುಮಾಡುವೆನು.
Aus dem Kleinsten sollen tausend werden und aus dem Geringsten eine Mächtiges Volk. Ich der HERR, will solches zu seiner Zeit eilend ausrichten.

< ಯೆಶಾಯನು 60 >