< ಯೆಶಾಯನು 7 >
1 ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
ユダの王、ウジヤの子ヨタム、その子アハズの時、スリヤの王レヂンとレマリヤの子であるイスラエルの王ペカとが上ってきて、エルサレムを攻めたが勝つことができなかった。
2 ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
時に「スリヤがエフライムと同盟している」とダビデの家に告げる者があったので、王の心と民の心とは風に動かされる林の木のように動揺した。
3 ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.
その時、主はイザヤに言われた、「今、あなたとあなたの子シャル・ヤシュブと共に出て行って、布さらしの野へ行く大路に沿う上の池の水道の端でアハズに会い、
4 ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
彼に言いなさい、『気をつけて、静かにし、恐れてはならない。レヂンとスリヤおよびレマリヤの子が激しく怒っても、これら二つの燃え残りのくすぶっている切り株のゆえに心を弱くしてはならない。
5 ಏಕೆಂದರೆ, ಸಿರಿಯಾದವರೂ ಎಫ್ರಾಯೀಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ಒಳಸಂಚುಮಾಡಿ,
スリヤはエフライムおよびレマリヤの子と共にあなたにむかって悪い事を企てて言う、
6 “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.
「われわれはユダに攻め上って、これを脅し、われわれのためにこれを破り取り、タビエルの子をそこの王にしよう」と。
7 ಅದಕ್ಕೆ ಸಾರ್ವಭೌಮ ಯೆಹೋವ ದೇವರು, “‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ.
主なる神はこう言われる、この事は決して行われない、また起ることはない。
8 ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.
スリヤのかしらはダマスコ、ダマスコのかしらはレヂンである。(六十五年のうちにエフライムは敗れて、国をなさないようになる。)
9 ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”
エフライムのかしらはサマリヤ、サマリヤのかしらはレマリヤの子である。もしあなたがたが信じないならば、立つことはできない』」。
10 ಯೆಹೋವ ದೇವರು ಆಹಾಜನಿಗೆ ಹೇಳಿದ್ದೇನೆಂದರೆ:
主は再びアハズに告げて言われた、
11 “ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು. (Sheol )
「あなたの神、主に一つのしるしを求めよ、陰府のように深い所に、あるいは天のように高い所に求めよ」。 (Sheol )
12 ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು.
しかしアハズは言った、「わたしはそれを求めて、主を試みることをいたしません」。
13 ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?
そこでイザヤは言った、「ダビデの家よ、聞け。あなたがたは人を煩わすことを小さい事とし、またわが神をも煩わそうとするのか。
14 ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
それゆえ、主はみずから一つのしるしをあなたがたに与えられる。見よ、おとめがみごもって男の子を産む。その名はインマヌエルととなえられる。
15 ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.
その子が悪を捨て、善を選ぶことを知るころになって、凝乳と、蜂蜜とを食べる。
16 ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.
それはこの子が悪を捨て、善を選ぶことを知る前に、あなたが恐れているふたりの王の地は捨てられるからである。
17 ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”
主はエフライムがユダから分れた時からこのかた、臨んだことのないような日をあなたと、あなたの民と、あなたの父の家とに臨ませられる。それはアッスリヤの王である」。
18 ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.
その日、主はエジプトの川々の源にいる、はえを招き、アッスリヤの地にいる蜂を呼ばれる。
19 ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.
彼らはみな来て、険しい谷、岩の裂け目、すべてのいばら、すべての牧場の上にとどまる。
20 ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.
その日、主は大川の向こうから雇ったかみそり、すなわちアッスリヤの王をもって、頭と足の毛とをそり、また、ひげをも除き去られる。
21 ಆ ದಿನದಲ್ಲಿ ಮನುಷ್ಯನು ಒಂದು ಹಸುವಿನ ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
その日、人は若い雌牛一頭と羊二頭を飼い、
22 ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.
それから出る乳が多いので、凝乳を食べることができ、すべて国のうちに残された者は凝乳と、蜂蜜とを食べることができる。
23 ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.
その日、銀一千シケルの価ある千株のぶどうの木のあった所も、ことごとくいばらと、おどろの生える所となり、
24 ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.
いばらと、おどろとが地にはびこるために、人々は弓と矢をもってそこへ行く。
25 ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ. ಆದರೆ ಅದು ಎತ್ತುಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
くわをもって掘り耕したすべての山々にも、あなたは、いばらと、おどろとを恐れて、そこへ行くことができない。その地はただ牛を放ち、羊の踏むところとなる。