< ಯೆಶಾಯನು 9 >

1 ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.
כִּי לֹא מוּעָף לַאֲשֶׁר מוּצָק לָהּ כָּעֵת הָרִאשׁוֹן הֵקַל אַרְצָה זְבֻלוּן וְאַרְצָה נַפְתָּלִי וְהָאַחֲרוֹן הִכְבִּיד דֶּרֶךְ הַיָּם עֵבֶר הַיַּרְדֵּן גְּלִיל הַגּוֹיִֽם׃
2 ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.
הָעָם הַהֹלְכִים בַּחֹשֶׁךְ רָאוּ אוֹר גָּדוֹל יֹֽשְׁבֵי בְּאֶרֶץ צַלְמָוֶת אוֹר נָגַהּ עֲלֵיהֶֽם׃
3 ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.
הִרְבִּיתָ הַגּוֹי (לא) [לוֹ] הִגְדַּלְתָּ הַשִּׂמְחָה שָׂמְחוּ לְפָנֶיךָ כְּשִׂמְחַת בַּקָּצִיר כַּאֲשֶׁר יָגִילוּ בְּחַלְּקָם שָׁלָֽל׃
4 ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.
כִּי ׀ אֶת־עֹל סֻבֳּלוֹ וְאֵת מַטֵּה שִׁכְמוֹ שֵׁבֶט הַנֹּגֵשׂ בּוֹ הַחִתֹּתָ כְּיוֹם מִדְיָֽן׃
5 ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.
כִּי כׇל־סְאוֹן סֹאֵן בְּרַעַשׁ וְשִׂמְלָה מְגוֹלָלָה בְדָמִים וְהָיְתָה לִשְׂרֵפָה מַאֲכֹלֶת אֵֽשׁ׃
6 ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.
כִּי־יֶלֶד יֻלַּד־לָנוּ בֵּן נִתַּן־לָנוּ וַתְּהִי הַמִּשְׂרָה עַל־שִׁכְמוֹ וַיִּקְרָא שְׁמוֹ פֶּלֶא יוֹעֵץ אֵל גִּבּוֹר אֲבִי־עַד שַׂר־שָׁלֽוֹם׃
7 ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.
(לם רבה) [לְמַרְבֵּה] הַמִּשְׂרָה וּלְשָׁלוֹם אֵֽין־קֵץ עַל־כִּסֵּא דָוִד וְעַל־מַמְלַכְתּוֹ לְהָכִין אֹתָהּ וּֽלְסַעֲדָהּ בְּמִשְׁפָּט וּבִצְדָקָה מֵעַתָּה וְעַד־עוֹלָם קִנְאַת יְהֹוָה צְבָאוֹת תַּעֲשֶׂה־זֹּֽאת׃
8 ಯೆಹೋವ ದೇವರು ಯಾಕೋಬನಿಗೆ ವಿರೋಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದರು, ಅದು ಇಸ್ರಾಯೇಲರಿಗೆ ತಗುಲಿತು.
דָּבָר שָׁלַח אֲדֹנָי בְּיַעֲקֹב וְנָפַל בְּיִשְׂרָאֵֽל׃
9 ಗರ್ವದಿಂದಲೂ, ಹೆಮ್ಮೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯೀಮ್ಯರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಈ ಮಾತು ಗೊತ್ತಾಗುವುದು. ಅದೇನೆಂದರೆ,
וְיָֽדְעוּ הָעָם כֻּלּוֹ אֶפְרַיִם וְיוֹשֵׁב שֹׁמְרוֹן בְּגַאֲוָה וּבְגֹדֶל לֵבָב לֵאמֹֽר׃
10 “ಇಟ್ಟಿಗೆಗಳು ಬಿದ್ದು ಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿಮರಗಳನ್ನು ಕಡಿದಿದ್ದರೂ ಅಲ್ಲಿಯೇ ನಾವು ದೇವದಾರು ವೃಕ್ಷಗಳನ್ನು ನೆಡುವೆವು,”
לְבֵנִים נָפָלוּ וְגָזִית נִבְנֶה שִׁקְמִים גֻּדָּעוּ וַאֲרָזִים נַחֲלִֽיף׃
11 ಹೀಗಿರುವುದರಿಂದ ಯೆಹೋವ ದೇವರು ರೆಚೀನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ,
וַיְשַׂגֵּב יְהֹוָה אֶת־צָרֵי רְצִין עָלָיו וְאֶת־אֹיְבָיו יְסַכְסֵֽךְ׃
12 ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.
אֲרָם מִקֶּדֶם וּפְלִשְׁתִּים מֵאָחוֹר וַיֹּאכְלוּ אֶת־יִשְׂרָאֵל בְּכׇל־פֶּה בְּכׇל־זֹאת לֹא־שָׁב אַפּוֹ וְעוֹד יָדוֹ נְטוּיָֽה׃
13 ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.
וְהָעָם לֹא־שָׁב עַד־הַמַּכֵּהוּ וְאֶת־יְהֹוָה צְבָאוֹת לֹא דָרָֽשׁוּ׃
14 ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ ಬಾಲಗಳನ್ನೂ ಖರ್ಜೂರದ ಕೊಂಬೆಗಳನ್ನೂ ಒಂದೇ ದಿನದಲ್ಲಿ ಕಡಿದುಹಾಕುವರು.
וַיַּכְרֵת יְהֹוָה מִיִּשְׂרָאֵל רֹאשׁ וְזָנָב כִּפָּה וְאַגְמוֹן יוֹם אֶחָֽד׃
15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.
זָקֵן וּנְשֽׂוּא־פָנִים הוּא הָרֹאשׁ וְנָבִיא מֽוֹרֶה־שֶּׁקֶר הוּא הַזָּנָֽב׃
16 ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.
וַיִּֽהְיוּ מְאַשְּׁרֵי הָֽעָם־הַזֶּה מַתְעִים וּמְאֻשָּׁרָיו מְבֻלָּעִֽים׃
17 ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.
עַל־כֵּן עַל־בַּחוּרָיו לֹא־יִשְׂמַח ׀ אֲדֹנָי וְאֶת־יְתֹמָיו וְאֶת־אַלְמְנוֹתָיו לֹא יְרַחֵם כִּי כֻלּוֹ חָנֵף וּמֵרַע וְכׇל־פֶּה דֹּבֵר נְבָלָה בְּכׇל־זֹאת לֹא־שָׁב אַפּוֹ וְעוֹד יָדוֹ נְטוּיָֽה׃
18 ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
כִּֽי־בָעֲרָה כָאֵשׁ רִשְׁעָה שָׁמִיר וָשַׁיִת תֹּאכֵל וַתִּצַּת בְּסִֽבְכֵי הַיַּעַר וַיִּֽתְאַבְּכוּ גֵּאוּת עָשָֽׁן׃
19 ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
בְּעֶבְרַת יְהֹוָה צְבָאוֹת נֶעְתַּם אָרֶץ וַיְהִי הָעָם כְּמַאֲכֹלֶת אֵשׁ אִישׁ אֶל־אָחִיו לֹא יַחְמֹֽלוּ׃
20 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ.
וַיִּגְזֹר עַל־יָמִין וְרָעֵב וַיֹּאכַל עַל־שְׂמֹאול וְלֹא שָׂבֵעוּ אִישׁ בְּשַׂר־זְרֹעוֹ יֹאכֵֽלוּ׃
21 ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.
מְנַשֶּׁה אֶת־אֶפְרַיִם וְאֶפְרַיִם אֶת־מְנַשֶּׁה יַחְדָּו הֵמָּה עַל־יְהוּדָה בְּכׇל־זֹאת לֹא־שָׁב אַפּוֹ וְעוֹד יָדוֹ נְטוּיָֽה׃

< ಯೆಶಾಯನು 9 >